ಕೇರಳ IUML ರ್‍ಯಾಲಿ: ಕೋವಿಡ್ ನಿಯಮಗಳ ಉಲ್ಲಂಘನೆ ಆರೋಪ; 10,000 ಜನರ ವಿರುದ್ದ ಪ್ರಕರಣ ದಾಖಲು!

ಡಿಸೆಂಬರ್ 9 ರಂದು ಕೇರಳದ ಕೋಝಿಕೋಡ್‌ನಲ್ಲಿ ನಡೆದ IUML ಪಕ್ಷದ ವಕ್ಫ್ ಬೋರ್ಡ್ ರಕ್ಷಣಾ ರ್ಯಾಲಿಯಲ್ಲಿ ಭಾಗವಹಿಸಿದ 10,000 IUML ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾರ್ಯಕರ್ತರು ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವೆಲ್ಲಾಯಿಲ್ ಪೊಲೀಸರು ಆರೋಪಿಸಿದ್ದು, ಪ್ರತಿಭಟನಾಕಾರರು ಮತ್ತು IUML ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.

ವಕ್ಫ್ ಬೋರ್ಡ್ ಖಾಲಿ ಹುದ್ದೆಗಳನ್ನು ಪಿಎಸ್‌ಸಿಗೆ ವರ್ಗಾಯಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಐಯುಎಂಎಲ್ ಪ್ರತಿಭಟನಾ ರ್‍ಯಾಲಿಯನ್ನು ಆಯೋಜಿಸಿತ್ತು. ಈ ವೇಳೆ, “ಕೇರಳ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆಯ ಅಡಿಯಲ್ಲಿ ಬರುವ ಕೋವಿಡ್ ನಿಯಮಗಳನ್ನು ಪ್ರತಿಭಟನಾಕಾರರು ಉಲ್ಲಂಘಿಸಿದ್ದಾರೆ ಮತ್ತು ಸಾರ್ವಜನಿಕ ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ ಉಂಟು ಮಾಡಿದ್ದಾರೆ ಎಂದು ಪ್ರಕರಣವನ್ನು ದಾಖಲಿಸಲಾಗಿದೆ.

ಆರೋಪಿಗಳನ್ನು ನಾವು ಇನ್ನೂ ಗುರುತಿಸಿಲ್ಲ. ನಾವು ಕಾರ್ಯಕ್ರಮದ ವೀಡಿಯೊ ತುಣುಕುಗಳನ್ನು ಪರಿಶೀಲಿಸುತ್ತಿದ್ದೇವೆ. ಇಷ್ಟು ದೊಡ್ಡ ಸಭೆ ನಡೆಸಲು ಆಯೋಜಕರು ಪೂರ್ವಾನುಮತಿ ಪಡೆದಿದ್ದಾರೆಯೇ ಎಂಬುದನ್ನು ಪರಿಶೀಲಿಸುತ್ತಿದ್ದೇವೆ ಎಂದು ವೆಲ್ಲಾಯಿಲ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸನೀಶ್ ಎ ಹೇಳಿದ್ದಾರೆ.

ಇದನ್ನೂ ಓದಿ: ಮೆಡಿಕಲ್‌ ಸ್ಟೋರ್‌ನಲ್ಲಿ ಅಪ್ತಾಪ್ತೆಯ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights