ಮಂಗಳೂರು: ಅನ್ಯಧರ್ಮದ ಯುವಕ-ಯುವತಿ ಮೇಲೆ ಹಲ್ಲೆ; ನಾಲ್ವರ ಬಂಧನ!

ಅನ್ಯಧರ್ಮದ ಸಹಪಾಠಿಗಳಿಬ್ಬರು ಬಸ್‌ನಲ್ಲಿ ತೆರಳುತ್ತಿದ್ದಾಗ, ಅವರನ್ನು ಅವ್ಯಾಚ್ಯವಾಗಿ ನಿಂಧಿಸಿ, ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಅನ್ಯಧರ್ಮಕ್ಕೆ ಸೇರಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಬಸ್‌ವೊಂದರಲ್ಲಿ ಕುಳಿತಿದ್ದರು. ಈ ವೇಳೆ, ಬಸ್‌ ಏರಿದ ಕಿಡಿಗೇಡಿಗಳು ಅವರನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾರೆ. ಪ್ರಕರಣದಲ್ಲಿ ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಬಸ್‌ನಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿಯ ವಿರುದ್ದ ಹೌಹಾರಿದ 5-6 ಮಂದಿ ಕಡಿಗೇಡಿಗಳು, ಅವರ ಐಡಿ ಪ್ರೂಫ್ ಕೇಳಿದ್ದಾರೆ. ಅಲ್ಲದೆ, ಮನೆಯವರ ಹಿನ್ನೆಲೆಯನ್ನೂ ಕೇಳಿದ್ದಾರೆ. ನಂತರ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಹಲ್ಲೆ, ಯುವತಿಯ ಗೌರವಕ್ಕೆ ಧಕ್ಕೆ ಸೇರಿದಂತೆ ಕೆಲವು ಆರೋಪಗಳ ಮೇಲೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಾಲ್ವರನ್ನು ಬಂಧಿಸಲಾಗಿದೆ. ಉಳಿದವರನ್ನು ಬಂಧಿಸಲು ಶೋಧ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಯುವಕ ಮತ್ತು ಯುವತಿ ವಾಮಂಜೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.ಯುವತಿ ಉಡುಪಿಯವರಾಗಿದ್ದು, ಯುವಕ ಶಿವಮೊಗ್ಗ ಮೂಲದವ, ಆತ ವಿದ್ಯಾಭ್ಯಾಸ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ವಾಸವಾಗಿದ್ದ. ಕಾಲೇಜು ಮುಗಿಸಿಕೊಂಡು ಇಬ್ಬರೂ ಉಡುಪಿಗೆ ತೆರಳುತ್ತಿದ್ದರು. ಈ ವೇಳೆ ಅವರ ಮೇಲೆ ಹಲ್ಲೆ ಮಾಡಲಾಗಿದೆ.

ಇದನ್ನೂ ಓದಿ: ಮೆಡಿಕಲ್‌ ಸ್ಟೋರ್‌ನಲ್ಲಿ ಅಪ್ತಾಪ್ತೆಯ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights