ಕರ್ನಾಟಕ ಮಾಧ್ಯಮ ಲೋಕದಲ್ಲಿ ಹೊಸ ಅಲೆ: ಡಿಜಿಟಲ್ ಮೀಡಿಯಾ ಫೋರಂ ಆರಂಭ!

ಮಾಧ್ಯಮ‌ಲೋಕದಲ್ಲಿ‌ ಮತ್ತೊಂದು ಹೊಸ ಬದಲಾವಣೆಯ ಅಲೆ ಶುರುವಾಗಿದೆ. ಇದರ ಭಾಗವಾಗಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಆರಂಭವಾಗಿದೆ. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಉದ್ಘಾಟನೆಗೊಂಡಿದೆ.

ಈ ಮೀಡಿಯಾ ಫೊರಂ ನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರಾದ ಸಮೀವುಲ್ಲಾ ಬೆಲಗೂರು ಅವರು ಒಮ್ಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಸುನೀಲ್ ಸಿರಸಂಗಿ ಮತ್ತು ವಸಂತ ಬಿ ಈಶ್ವರಗೆರೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ ಮತ್ತು ಜಂಟಿ ಕಾರ್ಯದರ್ಶಿಗಳಾಗಿ ರಜನಿ ಹಾಗೂ ಮಾಲತೇಶ್ ಅರಸ್ ಹರ್ತಿಕೋಟೆ ಮತ್ತು ಖಜಾಂಚಿಯಾಗಿ ಸನತ್ ರೈ ಅವರನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಎಸ್ ರಾಘವೇಂದ್ರ, ಗೌರೀಶ್ ಅಕ್ಕಿ, ವಿಜಯ್ ಭರಮಸಾಗರ, ದರ್ಶನ್ ಆರಾಧ್ಯ, ಪ್ರವೀಣ್ ಏಕಾಂತ, ಅಮರ್ ಪ್ರಸಾದ್, ಅಂಕಿತಾ, ಹರೀಶ್ ಅರಸು ಇವರುಗಳನ್ನು ಆಯ್ಕೆ ಮಾಡಲಾಗಿದೆ.

ಪತ್ರಿಕೋದ್ಯಮ ಹಾಗು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಎರಡು ದಶಕಗಳ ಅನುಭವ ಇರುವಂತಹಾ ಹಿರಿಯ ಪತ್ರಕರ್ತರ ನೇತೃತ್ವದಲ್ಲಿ ಅಸ್ಥಿತ್ವಕ್ಕೆ ಬಂದಿರುವ ಕರ್ನಾಟಕ ಸ್ಟೇಟ್ ಡಿಜಿಟಲ್ ಮಿಡಿಯಾ ಫೋರಮ್ ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಡಿಜಿಟಲ್ ಮಾಧ್ಯಮ ಮಿತ್ರರನ್ನೂ ಒಳಗೊಂಡಂತೆ ದೊಡ್ಡ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದೆ.

ಡಿಜಿಟಲ್ ಮೀಡಿಯಾ ಎಂಬುದು ಪ್ರತಿಯೊಬ್ಬರಿಗೂ ನವಯುಗಕ್ಕೆ ಅವಶ್ಯಕವಾಗಿದ್ದು, ಪ್ರಿಂಟ್ ಹಾಗೂ ಟಿವಿ ಮಾಧ್ಯಮಗಳಿಗಿಂತಲೂ ಪರಿಣಾಮಕಾರಿಯಾಗಿದೆ. ವೀಕ್ಷಕರು ಮತ್ತು ಓದುಗರನ್ನು ಹೆಚ್ಚು ತಲುಪಲು ತನ್ನದೇ ಆದ ಸಾಮರ್ಥ್ಯ ಹೊಂದಿದೆ. ಹೀಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಡಿಜಿಟಲ್ ಮಾಧ್ಯಮಗಳಿಗೆ ಒತ್ತು ನೀಡಿವೆ ಎಂದು ನೂತನ ಅಧ್ಯಕ್ಷರಾದ ಸಮೀವುಲ್ಲಾ ಹೇಳಿದ್ದಾರೆ.

ಪಕ್ಕದ ರಾಜ್ಯಗಳಾದ ಆಂದ್ರಪ್ರದೇಶ ಮತ್ತು ತಮಿಳು ನಾಡು ಸೇರಿದಂತೆ ಅನೇಕ ರಾಜ್ಯಗಳಲ್ಲಿ ಡಿಜಿಟಲ್ ಮಾಧ್ಯಮ ಒಕ್ಕೂಟ ಅಸ್ಥಿತ್ವದಲ್ಲಿವೆ. ಕರ್ನಾಟಕದಲ್ಲಿ ಡಿಜಿಟಲ್ ಮಾಧ್ಯಮ ಹೆಚ್ಚು ಪರಿಣಾಮಕಾರಿಯಾಗಿರುವುದರಿಂದ ನಮ್ಮ ಸಂಘಟನೆ ಮಾಧ್ಯಮ ಲೋಕದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವವರ ಹಿತಾಸಕ್ತಿ ಕಾಪಾಡಲು ಬದ್ದವಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿರುವುದರಿಂದ ಇದರ ಅಗತ್ಯತೆ ಎಂದಿಗಿಂತ ಈಗ ಹೆಚ್ಚಿದೆ. ಹೀಗಾಗಿ ಡಿಜಿಟಲ್ ಮಿಡಿಯಾ ಪೋರಮ್ ನೂತನವಾಗಿ ಅಸ್ಥಿತ್ವಕ್ಕೆ ಬಂದಿದ್ದು, ಪತ್ರಿಕೆ ಮತ್ತು ಮಾಧ್ಯಮಗಳಿಗೆ ನೀಡಿರುವಂತೆಯೇ ನಮಗೂ ಮಾನ್ಯತೆ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಭಾರತ-ಬಾಂಗ್ಲಾ ಗಡಿಯಲ್ಲಿ ಅರಳಿದ ಪ್ರೀತಿ; ಭಾರತದಲ್ಲಿರುವ ದಂಪತಿಗಳಿಗೆ NRC ಕುಣಿಕೆಯ ಭೀತಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights