ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ನಾಲ್ವರ ದುರ್ಮರಣ; 10 ಜನರಿಗೆ ಗಂಭೀರ ಗಾಯ

ಸೋಮವಾರ ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಬಳಿ ನಡೆಸಿದೆ.

ಚಿತ್ರದುರ್ಗದ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಈರುಳ್ಳಿ ತುಂಬಿದ ಲಾರಿಯ ಟೈರ್‌ ಸ್ಪೋಟಗೊಂಡು ಲಾರಿ ಪಲ್ಟಿ ಹೊಡೆದಿದೆ. ಹಿಂದಿನಿಂದ ಬಂದ ಕಾರು ಲಾರಿಗೆ ಗುದ್ದಿಕೊಂಡಿದೆ. ಅದರ ಹಿಂದಯೇ ಬರುತ್ತಿದ್ದ ಮತ್ತೊಂದು ಲಾರಿ ಕಾರಿಗೆ ಗುದ್ದಿದೆ. ಈ ವೇಳೆ, ನಾಲ್ವರು ಮೃತ ಪಟ್ಟಿದ್ದಾರೆ.

ಸಾವನ್ನಪ್ಪಿದವರನ್ನು ಹನುಮಪ್ಪ ಕಳಕಪ್ಪ ಹುನಗುಂದಿ (30), ಗುರಪ್ಪ ಹೂಗಾರ್ (26), ರಮೇಶ್ (28) ಮತ್ತು ಪ್ರಶಾಂತ್ ಹಟ್ಟಿ (36) ಎಂದು ಗುರುತಿಸಲಾಗಿದೆ. ಇವೆರೆಲ್ಲೂ ಗದಗ ಜಿಲ್ಲೆಯ ಹುಯಿಗೊಳ ಗ್ರಾಮದವರು ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಗಾಯಗೊಂಡ ಹತ್ತು ಜನರನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ಡಿವೈಎಸ್ಪಿ ರೋಷರ್ ಜಮೀರ್, ಸಿಪಿಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಆತಂಕ ಬೇಡ; ಯಾವುದೇ ಧರ್ಮದ ಆಚರಣೆಗೂ ತೊಂದರೆ ಇಲ್ಲ: ಸಿಎಂ ಬೊಮ್ಮಾಯಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights