ವಿಧಾನ ಪರಿಷತ್ ಫಲಿತಾಂಶ: ಹಾಸನದಲ್ಲಿ ಸೂರಜ್ ರೇವಣ್ಣ ಗೆಲುವು!

ವಿಧಾನ ಪರಿಷತ್ ಚುನಾವಣಾ ಮತ ಎಣಿಕೆ ನಡೆಯುತ್ತಿದೆ. ಹಾಸನ ಕ್ಷೇತ್ರದಲ್ಲಿ ಫಲಿತಾಂಶ ಹೊರಬಿದ್ದದ್ದು, ಜೆಡಿಎಸ್ ಅಭ್ಯರ್ಥಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿಗೆ 2281 ಮತಗಳು, ಕಾಂಗ್ರೆಸ್ ಅಭ್ಯರ್ಥಿಗೆ 748 ಮತಗಳು ಮತ್ತು ಬಿಜೆಪಿ ಅಭ್ಯರ್ಥಿಗೆ 421 ಮತಗಳು ಲಭಿಸಿವೆ. ಡಾ. ಸೂರಜ್ ರೇವಣ್ಣ 1533 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಬಾರಿಸಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವ ವಿಧಾನ ಪರಿಷತ್ ಚುನಾವಣೆಯಲ್ಲಿ ಸೂರಜ್ ರೇವಣ್ಣ ಭರ್ಜರಿ ಜಯಗಳಿಸುತ್ತಿದ್ದಂತೆಯೇ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಹಾಸನದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಎದುರು ಸೂರಜ್ ರೇವಣ್ಣ ಪರ‌ ಅವರ ಅಭಿಮಾನಿಗಳು ನಾನಾ ಕಲಾ ತಂಡಗಳೋಡನೆ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಣೆ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights