ವಿಧಾನ ಪರಿಷತ್‌ನಲ್ಲಿ ಬಹುಮತ ಪಡೆದ ಬಿಜೆಪಿ; ಉಳಿಯುತ್ತಾ ಜೆಡಿಎಸ್‌ಗೆ ಸಭಾಪತಿ ಸ್ಥಾನ?

ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಸಮಬಲದ ಗೆಲುವು ಸಾಧಿಸಿವೆ. ಬಿಜೆಪಿ ತನ್ನ ಪ್ರಾಭಲ್ಯವನ್ನು ಹೆಚ್ಚಿಸಿಕೊಳ್ಳುವಲ್ಲಿ ಸಫಲವಾದರೆ, ಕಾಂಗ್ರೆಸ್‌ ತನ್ನ ಪ್ರಾಭಲ್ಯವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ನಿನ್ನೆ (ಮಂಗಳವಾರ) ಹೊರಬಿದ್ದ ಫಲಿತಾಂಶದಲ್ಲಿ ಬಿಜೆಪಿ 11 ಸ್ಥಾನ, ಕಾಂಗ್ರೆಸ್ 11 ಸ್ಥಾನಗಳನ್ನು ಗೆದ್ದು ಸಮಬಲ ಸಾಧಿಸಿವೆ. ಜೆಡಿಎಸ್ 2 ಮತ್ತು ಇತರರು 1 ಸ್ಥಾನದಲ್ಲಿ ಜಯಗಳಿಸಿದ್ದಾರೆ.

11 ಸ್ಥಾನಗಳನ್ನು ಗೆಲ್ಲುವುದರೊಂದಿಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿಯ  ಒಟ್ಟು 37 ಸದಸ್ಯರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಹೀಗಾಗಿ ಪರಿಷತ್‌ನಲ್ಲಿ ಬಿಜೆಪಿ ಅಗತ್ಯ ಬಹುಮತವನ್ನು ಸಾಧಿಸಿದೆ.

ವಿಧಾನ ಪರಿಷತ್‌ನ ಒಟ್ಟು ಸಂಖ್ಯಾ ಬಲ 75 ಸ್ಥಾನಗಳಿದ್ದು, ಈ ಪೈಕಿ, ಬಿಜೆಪಿ 37, ಕಾಂಗ್ರೆಸ್ 26 ಮತ್ತು ಜೆಡಿಎಸ್ 11 ಸದಸ್ಯರನ್ನು ಪರಿಷತ್ ನಲ್ಲಿ ಹೊಂದಿದೆ. ಅರ್ಧಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಸಂಪೂರ್ಣ ಬಹುಮತ ಪಡೆದಿದೆ.

ಈ ಹಿನ್ನೆಲೆಯಲ್ಲಿ ಕಳೆದ ಚುನಾವಣೆ ವೇಳೆ, ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡು, ಜೆಡಿಎಸ್‌ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಪರಿಷತ್ ಸಭಾಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ, ಬಿಜೆಪಿಯೇ ಬಹುಮತವನ್ನು ಹೊಂದಿರುವುದರಿಂದಾಗಿ ಹೊರಟ್ಟಿ ಅವರು ಸಭಾಪತಿ ಸ್ಥಾನವನ್ನು ಕಳೆದುಕೊಳ್ಳುವರೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ವಿಧಾನಪರಿಷತ್ತಿನಲ್ಲಿ ಸಂಪೂರ್ಣ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಸಭಾಪತಿ ಹುದ್ದೆಯನ್ನು ತನಗೆ ಬಿಟ್ಟುಕೊಡುವಂತೆ ಬಿಜೆಪಿ ಕೇಳುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ಆದರೂ, ಹಾಲಿ ಸಭಾಪತಿಯಾಗಿರುವ ಜೆಡಿಎಸ್ ನ ಬಸವರಾಜ ಹೊರಟ್ಟಿ ಅವರನ್ನು ಮುಂದುವರಿಸುತ್ತದೆಯೇ ಎನ್ನುವುದೂ ಕೂಡ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಕಾಂಗ್ರೆಸ್‌ ಜಯಭೇರಿ; ಬಿಜೆಪಿಗೆ ಕೇವಲ 50 ಮತಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights