ಕೊರೊನಾ-ಮಳೆ ಸಂಕಷ್ಟದಲ್ಲಿ ರೈತರು: ಹುಟ್ಟು ಹಬ್ಬ ಆಚರಣೆ ಬೇಡ ಎಂದ ಹೆಚ್‌ಡಿಕೆ!

ಕೋವಿಡ್ ಹಿನ್ನೆಲೆಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಹೀಗಾಗಿ, ಹುಟ್ಟು ಹಬ್ಬದ ಆಚರಣೆ ಮಾಡಿಕೊಳ್ಳದಿರಲು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಅಲ್ಲದೆ, ವಿಜೃಂಭಣೆಯಿಂದ ನನ್ನ ಹುಟ್ಟುಹಬ್ಬ ಮಾಡುವುದು ಬೇಡ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

“ಡಿಸೆಂಬರ್ 16ರಂದು ನನ್ನ ಜನ್ಮದಿನ. ಕಳೆದೆರಡು ವರ್ಷಗಳಿಂದ ಕೋವಿಡ್‌-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ-ತುರಾಯಿ ಹಾಕಿ, ಕೇಕ್‌ ಕತ್ತರಿಸಿ ಸಂಭ್ರಮಿಸುವುದು ಬೇಡ.”

“ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗುವ ಮೂಲಕ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ. ಅದ್ಧೂರಿ ಹುಟ್ಟುಹಬ್ಬ ನನಗೆ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ. ಹೊಸ ಚೈತನ್ಯ ಮತ್ತು ದೃಢ ಸಂಕಲ್ಪದೊಂದಿಗೆ ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ” ಎಂದು ಹೆಚ್‌ಡಿಕೆ ಅವರು ಮನವಿ ಮಾಡಿದ್ದಾರೆ.

Read Also: ಬಿಬಿಎಂಪಿ ಚುನಾವಣೆಗೆ ಅಕ್ರಮ ಹಣ ಸಂಗ್ರಹಕ್ಕಾಗಿ 4ಜಿ ವಿನಾಯಿತಿ ಬಳಕೆ: ಎಎಪಿ ಆರೋಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights