ಎಂಇಎಸ್‌ ಸಂಘಟನೆ ಬ್ಯಾನ್‌ ಮಾಡುವ ಬಗ್ಗೆ ಸದನದಲ್ಲಿ ಗಮನ ಸೆಳೆಯುತ್ತೇನೆ: ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ಕನ್ನಡದ ಬಾವುಟವನ್ನು ಸುಟ್ಟು ಅಪಮಾನ ಮಾಡಲಾಗಿದೆ. ಇದರ ವಿರುದ್ದ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದ ಸಂದರ್ಭದಲ್ಲಿಯೇ ಬೆಳಗಾವಿಯಲ್ಲಿದ್ದ ಸಂಗೋಳ್ಳಿ ರಾಯಣ್ಣ ಪ್ರತಿಮೆಯನ್ನು ಎಂಇಎಸ್‌ನ ಪುಂಡ ಕಾರ್ಯಕರ್ತರು ವಿರೂಪಗೊಳಿಸಿದ್ದಾರೆ. ಹೀಗಾಗಿ ಎಂಇಎಸ್‌ ಸಂಘಟನೆಯನ್ನು ರಾಜ್ಯದಲ್ಲಿ ಬ್ಯಾನ್‌ ಮಾಡಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.

ಈ ಒತ್ತಾಯಕ್ಕೆ ಸಹಮತ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಂಇಎಸ್‌ ಸಂಘಟನೆಯನ್ನು ಬ್ಯಾನ್‌ ಮಾಡಬೇಕು ಎಂದು ಕೇಳಿಬರುತ್ತಿರುವ ಕೂಗಿನ ಬಗ್ಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಸದನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕರ್ನಾಟಕದ ನೆಲ, ಜಲ, ಭಾಷೆ, ಕಾನೂನನ್ನು ಗೌರವಿಸದ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂಬ ಕೂಗು ರಾಜ್ಯಾದ್ಯಂತ ಕೇಳಿಬರುತ್ತಿದೆ. ಸದನದಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.

ಸಂಗೊಳ್ಳಿ ರಾಯಣ್ಣ ಯಾವುದೇ ಒಂದು ಜಾತಿ, ಸಮಾಜಕ್ಕೆ ಸೀಮಿತವಾದವರಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಮಹಾನ್ ವ್ಯಕ್ತಿ. ಇಂಥವರ ಪ್ರತಿಮೆಯನ್ನು ವಿರೂಪಗೊಳಿಸೋದು ದೇಶ ದ್ರೋಹದ ಕೆಲಸವಾಗುತ್ತದೆ ಎಂದಿದ್ದಾರೆ.

ರಾಜ್ಯದಲ್ಲಿ ಗುಪ್ತಚರ ಇಲಾಖೆ ಜೀವಂತವಾಗಿಲ್ಲ, ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇಡೀ BJP ಸರ್ಕಾರವೇ ಬೆಳಗಾವಿಯಲ್ಲಿದ್ದರೂ ಎಂ.ಇ.ಎಸ್ ನವರು ಮಾರಕಾಸ್ತ್ರಗಳೊಂದಿಗೆ ಬಂದು ದಾಂಧಲೆ ಮಾಡುತ್ತಾರೆ ಎಂದರೆ ಏನರ್ಥ? ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್- ನಿಜವೆಷ್ಟು? ಸುಳ್ಳೆಷ್ಟು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights