ಧಾರವಾಡ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; 6 ಮಂದಿ ಅಪ್ರಾಪ್ತ ಬಾಲಕರ ಬಂಧನ

ಬಾಲಕಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಲಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

15 ವರ್ಷದ ಬಾಲಕಿಯ ಮೇಲೆ ಬಾಲಕರು ಅತ್ಯಾಚಾರ ಎಸಗಿದ್ದಾರೆ. ಕೃತ್ಯದ ಬಗ್ಗೆ ಕುಟುಂಬದವರಿಗೆ ಅಥವಾ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಆಕೆಯನ್ನು ಬೆದರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಬಾಲಕಿಯನ್ನು ಬೆದರಿಸಿ ವಿವಿಧ ಪ್ರದೇಶಗಳಿಗೆ ಎಳೆದೊಯ್ದು ಅತ್ಯಾಚಾರ ಎಸದ್ದಾರೆ. ಕಾಮುಕರು ಅಪ್ರಾಪ್ತರಾಗಿರುವುದರಿಂದ ಅವರನ್ನು ರಿಮಾಂಡ್ ಹೋಮ್ ನಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮುಕರ ಕಾಟದಿಂದ ತಪ್ಪಿಸಿಕೊಳ್ಳಲಾಗದ ಬಾಲಕಿ, ತಮ್ಮ ಪೋಷಕರಿಗೆ ಕೃತ್ಯದ ಬಗ್ಗೆ ಹೇಳಿದ್ದಾಳೆ. ಬಳಿಕ, ಪೋಷಕರು ಪೊಲೀಸರಿಗೆ ದೂರು ನೀಡಿದ್ದು, 6 ಬಾಲಕರನ್ನು ಕೂಡಲೇ ಬಂಧಿಸಲಾಗಿದೆ.

ಆರೋಪಿಗಳು ಅಪ್ರಾಪ್ತಗಳು ಎಂಬ ಕಾರಣದಿಂದಾಗಿ ಹೆಸರು ಬಹಿರಂಗಪಡಿಸಲಾಗಿಲ್ಲ.

ಇದನ್ನೂ ಓದಿ: ಮಂಗಳೂರು: ಓದು ಮುಗಿಯುವ‌ಷ್ಟರಲ್ಲಿ ಸಾಲ ಹೆಚ್ಚುವ ಭಯ; ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights