ಬೆಂಗಳೂರು: ಮಹಿಳೆಯ ಬರ್ಬರ ಹತ್ಯೆ; ಆಸ್ತಿ ವಿವಾದದ ಶಂಕೆ

ಬೆಂಗಳೂರಿನ ಆನೇಕಲ್-ಜಿಗಣಿ ರಸ್ತೆಯಲ್ಲಿ ಸೋಮವಾರ (ಡಿಸೆಂಬರ್ 27) ರಾತ್ರಿ 38 ವರ್ಷದ ಮಹಿಳೆಯನ್ನು ಐದು ಜನರ ತಂಡವು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹಣಕಾಸಿನ ವಿವಾದಗಳು ಮತ್ತು ಅನೈತಿಕ ಸಂಬಂಧ ಕೊಲೆಗೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತ ಮಹಿಳೆಯನ್ನು ಜಿಗಣಿ ನಿವಾಸಿ ಅರ್ಚನಾ ರೆಡ್ಡಿ ಎಂದು ಗುರುತಿಸಲಾಗಿದೆ. ಎಂಟು ವರ್ಷಗಳ ಹಿಂದೆ ಪತಿಗೆ ವಿಚ್ಛೇದನ ನೀಡಿದ್ದ ಆಕೆ ನವೀನ್ ಕುಮಾರ್ ಎಂಬ ವ್ಯಕ್ತಿಯೊಂದಿಗೆ ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿ ಇದ್ದರು. ಆದರೆ, ಆಸ್ತಿ ವಿಚಾರಕ್ಕೆ ಗಲಟೆ ನಡೆದು ಆಕೆ ಆತನಿಂದಲೂ ಅಂತರ ಕಾಯ್ದು ಕೊಂಡಿದ್ದರು ಎನ್ನಲಾಗಿದೆ.

ಆಸ್ತಿ ವಿಚಾರದ ಗಲಾಟೆ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ನವೀನ್ ಕುಮಾರ್‌ ಮತ್ತು ಆತನ ಸಹಚರರು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.

ರಾತ್ರಿ 10.30ರ ಸುಮಾರಿಗೆ ಜಿಗಣಿಯಿಂದ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಕೂಟರ್‌ನಲ್ಲಿ ಅರ್ಚನಾ ಅವರನ್ನು ಹಿಂಬಾಲಿಸಿದ್ದ ಆರೋಪಿಗಳು ಆಕೆಯ ಕಾರಿಗೆ ಅಡ್ಡಗಟ್ಟಿ, ಆಕೆಯನ್ನು ಕಾರಿನಿಂದ ಹೊರಗೆಳೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಆಕೆಯ ಡ್ರೈವರ್‌ ಪ್ರಮೋದ್ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕೊಲೆಗೆ ಸಂಚು ರೂಪಿಸಿದ ಶಂಕಿತ ಆರೋಪಿಗಳಿಗಾಗಿ ಹುಡುಕುತ್ತಿದ್ದಾರೆ. ಜೊತೆಗೆ ದುಷ್ಕರ್ಮಿಗಳನ್ನು ಪತ್ತೆ ಸಿಸಿಟಿವಿ ಕ್ಯಾಮೆರಾಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕಚೇರಿ ಎದುರು ಪ್ರತಿಭಟನೆ: 10 ವಿದ್ಯಾರ್ಥಿಗಳನ್ನು 4 ದಿನ ಜೈಲಿನಲ್ಲಿಟ್ಟ ಪೊಲೀಸರು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights