ಹೊಸ ವರ್ಷಾಚರಣೆಗೆ ಮತ್ತಷ್ಟು ಬ್ರೇಕ್‌: ಬೆಂಗಳೂರಿನಲ್ಲಿ ಇಂದು ಸಂಜೆ 6 ಗಂಟೆಯಿಂದಲೇ ನೈಟ್‌ ಕರ್ಫ್ಯೂ!

ಕೊರೊನಾ ಪ್ರಕರಣಗಳು ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಮತ್ತಷ್ಟು ಬ್ರೇಕ್‌ ಬಿದ್ದಿದೆ. ಈ ಹಿಂದೆ ವಿಧಿಸಿದ್ದ ನಿಬಂಧಗಳನ್ನು ಮತ್ತಷ್ಟು ಬಿಗಿಗೊಳಿಸಿ ಹೊಸ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಡಿಸೆಂಬರ್ 31ರ ಸಂಜೆ 6 ಗಂಟೆ ಇಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ.

ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸೆಂಬರ್‌ 31 ರ ಸಂಜೆ 6 ರಿಂದ ಜನವರಿ 1ರ ಬೆಳಗ್ಗೆ 5 ಗಂಟೆಯವರಗೆ ನಿಷೇಧಾಜ್ಞೆ ಜಾರಿ ಮಾಡಿ ಪರಿಷ್ಕೃತ ಆದೇಶ ಹೊರಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ನಗರದಲ್ಲಿ ಯಾವುದೇ ರೂಪದಲ್ಲಿಯೂ ಹೊಸ ವರ್ಷದ ಆಚರಣೆಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಹೋಟೆಲ್‌ಗಳು, ಮಾಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳು ಅಥವಾ ಯಾವುದೇ ರೀತಿಯ ಸಂಸ್ಥೆಗಳು ನಗರದಲ್ಲಿ ಯಾವುದೇ ವಿಶೇಷ ಡಿಜೆ, ಕಾರ್ಯಕ್ರಮಗಳು ಅಥವಾ ನೃತ್ಯ ಪ್ರದರ್ಶನಗಳನ್ನು ಆಯೋಜಿಸಬಾರದು. ಆದರೆ, ರಾತ್ರಿ 10 ಗಂಟೆಯವರೆಗೆ ತಮ್ಮ ನಿಯಮಿತ ವ್ಯಾಪಾರ ಚಟುವಟಿಕೆಗಳನ್ನು ಕೊರೊನಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ ನಡೆಸಬಹುದು” ಎಂದು ಆದೇಶಿಸಲಾಗಿದೆ.

ಆದೇಶ ಮೀರಿ ಹಾಗೂ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದೇ ಆದರೆ, ವಿಪತ್ತು ನಿರ್ವಹಣೆ ಕಾಯ್ದೆ ಹಾಗೂ ಸಾಂಕ್ರಾಮಿ ರೋಗ ಕಾಯ್ದೆ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನೀಡಿದ್ದಾರೆ.

ಈ ಹಿಂದೆ ಡಿಸೆಂಬರ್ 28 ರಿಂದ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ 10 ದಿನಗಳವರೆಗೆ ನೈಟ್ ಕರ್ಫ್ಯೂ ವಿಧಿಸಿ ಸರ್ಕಾರ ಆದೇಶ ಜಾರಿ ಮಾಡಿತ್ತು. ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡ ಬಳಿಕ ಆದೇಶವನ್ನು ಪರಿಷ್ಕರಿಸಲಾಗಿದೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಭಿನ್ನಮತ: ಧಾರವಾಡ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರವಿಂದ್ ಬೆಲ್ಲದ್ ರಾಜೀನಾಮೆ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights