ಬೆಂಗಳೂರು: ನೈಟ್‌ ಕರ್ಫ್ಯೂ ಉಲ್ಲಂಘಿಸಿದ್ದಕ್ಕಾಗಿ 318 ವಾಹನಗಳು ಜಪ್ತಿ!

ಬೆಂಳೂರಿನಲ್ಲಿ ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ 318 ವಾಹನಗಳನ್ನು ಬೆಂಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ.

ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭ ಇರುವುದರಿಂದ ರಾಜ್ಯದಾದ್ಯಂತ 10 ದಿನಗಳ ನೈಟ್ ಕರ್ಫ್ಯೂ ಜಾರಿಮಾಡಲಾಗಿದೆ. ರಾತ್ರಿ 10 ಗಂಟೆಯ ನಂತರ ಅನಗತ್ಯವಾಗಿ ಹೊರಗೆ ಓಡಾದಂತೆ ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ನೈಟ್‌ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹೀಗಾಗಿ, ನೈಟ್ ಕರ್ಫ್ಯೂ ಉಲ್ಲಂಘನೆ ಮಾಡಿದ 318 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ನೈಟ್ ಕರ್ಫ್ಯೂ ಉಲ್ಲಂಘನೆ ಸಂಬಂಧ ಕೇಂದ್ರ ವಿಭಾಗದ ಪೊಲೀಸರು ಅತಿ ಹೆಚ್ಚು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಕಳೆದ ಎರಡು ದಿನದಲ್ಲಿ 116 ದ್ವಿಚಕ್ರ ವಾಹನ, 3 ತ್ರಿಚಕ್ರ ವಾಹನ, 19 ಕಾರು ಸೇರಿ ಒಟ್ಟು 136 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಅದೇ ರೀತಿ ಪಶ್ಚಿಮ ವಿಭಾಗದ ಪೊಲೀಸರು ಕೂಡ 104 ದ್ವಿಚಕ್ರ ವಾಹನ ಸೇರಿ, 113 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಉಳಿದಂತೆ ಉತ್ತರ ವಿಭಾಗದ ಪೊಲೀಸರು 12 ಪ್ರಕರಣ ಸೇರಿ ಒಟ್ಟು 318 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಜಪ್ತಿ ಮಾಡಲಾಗಿರುವ ವಾಹನಗಳನ್ನು ಸಾರ್ವಜನಿಕರು ಬಿಡಿಸಿಕೊಳ್ಳಬೇಕಾದರೆ, ಸಂಬಂಧಿತ ನ್ಯಾಯಾಲಯಕ್ಕೆ ದಂಡ ಪಾವತಿಸಿ ವಾಹನ ಪಡೆಯಬೇಕು.

ನೈಟ್‌ ಕರ್ಫ್ಯೂ ವೇಳೆ ರಾತ್ರಿ ಪಾಳಿ ಕೆಲಸಗಾರರಿಗೆ, ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಿಶೇಷ ವಿನಾಯಿತಿ ನೀಡಲಾಗಿದೆ.

ಜ. 8 ರ ವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಡಿ.30ರಿಂದ ನೈಟ್ ಕರ್ಫ್ಯೂ ನಿಯಮ ಮತ್ತಷ್ಟು ಬಿಗಿಗೊಳಿಸಲಾಗಿದ್ದು, ನಿಯಮ ಉಲ್ಲಂಘನೆ ಮಾಡುವರ ವಾಹನ ಜಪ್ತಿಯಾಗಲಿದೆ.

ಇದನ್ನೂ ಓದಿ: ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಗೆ ಸೆಲ್ಯೂಟ್‌ ಎಂದಿದ್ದ ಕಾಳಿಚರಣ್‌ ಅರೆಸ್ಟ್‌; ದೇಶದ್ರೋಹ ಪ್ರಕರಣ ದಾಖಲು

Spread the love

Leave a Reply

Your email address will not be published. Required fields are marked *