ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌?; ಸುಳಿವು ನೀಡಿದ ಕಂದಾಯ ಸಚಿವ

ಹೊಸ ವರ್ಷದ ಸಂಭ್ರಮದಲ್ಲಿರುವಾಗಲೇ ರಾಜ್ಯದಲ್ಲಿ ಕೊರೊನಾ ಹಾವಳಿ ಮತ್ತೆ ಹೆಚ್ಚುತ್ತಿದೆ. ವಾರದಿಂದ ವಾರಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಹೀಗಾಗಿ, ಸೋಂಕಿತ ಪಾಸಿಟಿವಿಟಿ ದರದಲ್ಲಿ ಏರಿಕೆ ಕಂಡು ಬಂದರೆ, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆಯ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಸುಳಿವು ನೀಡಿದ್ದಾರೆ.

ಈಗಾಗಲೇ ವಿವಿಧ ರಾಜ್ಯಗಳಲ್ಲಿ 3ನೇ ಅಲೆಯ ಭೀತಿ ಶುರುವಾಗಿದೆ. ವಾರದಿಂದ ವಾರಕ್ಕೆ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಲಾಕ್ ಡೌನ್ ಕೂಡ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ರೆಡ್ ಜೋನ್ ಪಟ್ಟಿಯಲ್ಲಿ ಬೆಂಗಳೂರು ಕೂಡ ಇದೆ. ಜನವರಿ 7ನೇ ತಾರೀಕಿನವರೆಗೆ ನೈಟ್ ಕರ್ಪ್ಯೂ ( Night Curfew ) ಇದೆ. ಈಗಾಗಲೇ ತಜ್ಞರ ಸಮಿತಿಯು ಸರ್ಕಾರಕ್ಕೆ ಸಲಹೆ ನೀಡಲಾಗಿದೆ. ಅವರು ನೀಡೋ ಸಲಹೆಯನ್ನು ಯಥಾ ಪ್ರಕಾರ ಜಾರಿಗೆ ತರಲಾಗುತ್ತದೆ. ಈ ಬಾರಿ ಯಾವುದೇ ಅಚಾತುರ್ಯ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ನಮಗೆ ರಾಜ್ಯದ ಜನರ ಹಿತ ದೃಷ್ಠಿ ಮುಖ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ನೈಟ್ ಕರ್ಪ್ಯೂ ಮುಗಿಯೋ ಮುನ್ನವೇ ಸಭೆ ನಡೆಸಿ, ಹೊಸ ಮಾರ್ಗಸೂಚಿ ಪ್ರಕಟಿಸಲಾಗುತ್ತದೆ. ವಾರದಿಂದ ವಾರಕ್ಕೆ ಶೇ.5ಕ್ಕಿಂತ ಹೆಚ್ಚು ಕೊರೊನಾ ಪಾಸಿಟಿವಿಟಿ ದರ ಏರಿಕೆ ಕಂಡುಬಂದರೆ, ಲಾಕ್ ಡೌನ್ ಜಾರಿ ಮಾಡಬೇಕಾಗುತ್ತದೆ. ಈ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ನೈಟ್‌ ಕರ್ಫ್ಯೂ ಉಲ್ಲಂಘಿಸಿದ್ದಕ್ಕಾಗಿ 318 ವಾಹನಗಳು ಜಪ್ತಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.