ವಸತಿ ಶಾಲೆಗಳಿಗೆ ‘ಅಂಬೇಡ್ಕರ್ ವಸತಿ ಶಾಲೆ’ ಎಂದು ಮರು ನಾಮಕರಣ: ಸರ್ಕಾರ ಆದೇಶ

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾಯ೯ ನಿವ೯ಹಿಸುತ್ತಿರುವ ವಸತಿ ಶಾಲೆಗಳನ್ನು ‘ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ’ ಎಂದು ಮರು ನಾಮಕರಣ ಮಾಡಲು ಸಕಾ೯ರ ಆದೇಶಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮಕ್ಕಳಿಗೆ 1 ರಿಂದ 5 ನೇ ತರಗತಿವರೆಗಿನ ಶಿಕ್ಷಣ ನೀಡುತ್ತಿರುವ 68 ಪ್ರಾಥಮಿಕ ಹಂತದ ವಸತಿ ಶಾಲೆಗಳಿವೆ. ಈ ಪೈಕಿ, ಪ್ರತಿ ತರಗತಿಗೆ 25 ವಿದ್ಯಾರ್ಥಿಗಳಂತೆ 5ನೇ ತರಗತಿಯ ವರೆಗೆ ಪ್ರತಿ ಶಾಲೆಯಲ್ಲಿ  125 ವಿದ್ಯಾರ್ಥಿಗಳಂತೆ ಒಟ್ಟು 68 ವಸತಿ ಶಾಲೆಗಳಲ್ಲಿ 8,500 ವಿದ್ಯಾರ್ಥಿಗಳ ದಾಖಲಾತಿಗೆ ಅವಕಾಶವಿದೆ. ವಸತಿ ಶಾಲೆ ವಿದ್ಯಾರ್ಥಿಗಳಿಗೆ ಶಿಕ್ಷಣ, ವಸತಿ, ಬೋಜನ, ಸಮವಸ್ತ್ರ ಸೇರಿ ಹಲವು ಸವಲತ್ತುಗಳನ್ನು ನೀಡಲಾಗುತ್ತಿದೆ.

ಈ ಶಾಲೆಗಳ ಹೆಸರನ್ನು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.

ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದ ಪ್ರಥಮ ಕಾನೂನು ಸಚಿವರಾಗಿದ್ದು, ಭಾರತದ ಸಶಕ್ತ ಸಂವಿಧಾನ ನೀಡಿದ ಶಿಲ್ಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಸಲಾಗುತ್ತಿರುವ ವಸತಿ ಶಾಲೆಗಳನ್ನು ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಎಂದು ಮರುನಾಮಕರಣ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಭಿನ್ನಮತ: ಧಾರವಾಡ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರವಿಂದ್ ಬೆಲ್ಲದ್ ರಾಜೀನಾಮೆ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights