Fact check: ಯೋಗಿ ಆದಿತ್ಯನಾಥ್‌ರನ್ನು ಸಮಾಜವಾದಿ ಪಕ್ಷದ ನಾಯಕರು ಅಭಿನಂದಿಸಿದ್ದು ಸುಳ್ಳು!

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ಅಧಿಕಾರಕ್ಕೆ ಮರಳುತ್ತಿರುವ ಯೋಗಿ ಆದಿತ್ಯನಾಥ್ ಅವರನ್ನು ಸಮಾಜವಾದಿ ಪಕ್ಷದ ನಾಯಕರಾದ ಅಖಿಲೇಶ್ ಯಾದವ್, ಶಿವಪಾಲ್ ಮತ್ತು ಮುಲಾಯಂ ಸಿಂಗ್ ಯಾದವ್ ಅವರು ಅಭಿನಂದಿಸಿರುವ ಇತ್ತೀಚಿನ ದೃಶ್ಯಗಳು ಎಂದು ಹೇಳಿಕೊಳ್ಳುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಾದರೆ ಫೋಟೊದಲ್ಲಿ ಹೇಳುವಂತೆ ಸಮಾಜವಾದಿ ಪಕ್ಷದ ನಾಯಕರು ಯೋಗಿ ಆದಿತ್ಯನಾಥ್ ಅವರನ್ನು ಅಭಿನಂಧಿಸಿರುವ ಸುದ್ದಿ ನಿಜವೆ ಎಂದು  ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ವೈರಲ್ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ನಲ್ಲಿ ಹುಡುಕಲಾಗಿದ್ದು 10 ಜೂನ್ 2019 ರಂದು ‘ANI ಯುಪಿ/ಉತ್ತರಾಖಂಡ’ ಮಾಡಿದ ಟ್ವೀಟ್‌ನಲ್ಲಿ ಅದೇ ಫೋಟೋ ಕಂಡುಬಂದಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಎಸ್‌ಪಿ ನಾಯಕ ಮುಲಾಯಂ ಸಿಂಗ್ ಯಾದವ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ ಎಂದು ‘ANI’ ವರದಿ ಮಾಡಿದೆ.

ಮುಲಾಯಂ ಸಿಂಗ್ ಯಾದವ್ ಅವರು ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವರದಿಯಾಗಿದೆ. ಮುಲಾಯಂ ಸಿಂಗ್ ಯಾದವ್ ಅವರನ್ನು ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ವೇಳೆ  ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪ್ರಗತಿಶೀಲ ಸಮಾಜವಾದಿ ಪಕ್ಷದ ಮುಖ್ಯಸ್ಥ ಶಿವಪಾಲ್ ಯಾದವ್ ಕೂಡ ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

ಮುಲಾಯಂ ಸಿಂಗ್ ಯಾದವ್ ಅವರ ಕುಟುಂಬವನ್ನು ಯೋಗಿ ಆದಿತ್ಯನಾಥ್ ಅವರು ಭೇಟಿಯಾದ ವಿಷಯವನ್ನು ಹಲವು ಸುದ್ದಿ ವೆಬ್‌ಸೈಟ್‌ಗಳು ಜೂನ್ 2019 ರಲ್ಲಿ ಲೇಖನಗಳು ಮತ್ತು ವೀಡಿಯೊಗಳನ್ನು ಪ್ರಕಟಿಸಿದವು. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ಬಾರಿ ನಡೆದ 2022 ರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಸ್ಥಾನಗಳನ್ನು ಎರಡೂವರೆ ಪಟ್ಟು ಹೆಚ್ಚಿಸಿದ್ದಕ್ಕಾಗಿ ಉತ್ತರ ಪ್ರದೇಶದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.” ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಬಿಜೆಪಿ ಸ್ಥಾನಗಳನ್ನು ಕಸಿದುಕೊಂಡು ಹಿಂದೆ ಇದ್ದ ಸ್ಥಾನಗಳಿಗಿಂತ ಕಡಿಮೆ ಸ್ಥಾನಗಳಿಗೆ ಕುಸಿಯುವಂತೆ ಮಾಡಿರುವುದು ಈ ಚುನಾವಣೆಯ ನಮ್ಮ ಸಾಧನೆ ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅದು ಮತ್ತಷ್ಟು ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ. ಆದರೆ ಯುಪಿ ಚುನಾವಣಾ ಫಲಿತಾಂಶದ ನಂತರ, ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ ಎಂಬುದು ಸುಳ್ಳು.

ಒಟ್ಟಾರೆಯಾಗಿ ಹೇಳುವುದಾದರೆ, ಈ ಫೋಟೋಗಳು 2019 ರಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ವಿಚಾರಿಸಲು ಯೋಗಿ ಆದಿತ್ಯನಾಥ್ ಅವರು ಮುಲಾಯಂ ಅವರ ಮನೆಗೆ ಭೇಟಿ ನೀಡಿದ ಸಂದರ್ಭದ ಫೋಟೋಗಳು. ಆದರೆ ಇದನ್ನು ತಿರುಚಿ ಯುಪಿ ಚುನಾವಣಾ ಫಲಿತಾಂಶದ ನಂತರ ಯೋಗಿ ಆದಿತ್ಯನಾಥ್ ಅವರನ್ನು ಎಸ್ಪಿ ನಾಯಕರಾದ ಮುಲಾಯಂ ಮತ್ತು ಅಖಿಲೇಶ್ ಯಾದವ್ ಅಭಿನಂದಿಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಳೆಯ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿರುವ ಹೇಳಿಕೆ ಸುಳ್ಳು ಎಂದು ಖಾತ್ರಿಯಾಗಿದೆ.

ಕೃಪೆ: ಫ್ಯಾಕ್ಟ್‌ಲಿ


ಇದನ್ನು ಓದಿರಿ: Fact check: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿ ಎಲ್‌ಕೆ ಅಡ್ವಾಣಿ ಅಳಲಿಲ್ಲ!


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights