ಫ್ಯಾಕ್ಟ್‌ಚೆಕ್: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಿರ್ದೇಶಕ ಕಾಶ್ಮೀರದಲ್ಲಿ ಹಿಂದೂಗಳಿಗೆ ಮನೆ ನಿರ್ಮಿಸಿಕೊಡುವ ಭರವಸೆ ನೀಡಿಲ್ಲ

ಮಾರ್ಚ್‌ 11 ರಂದು ದೇಶಾದ್ಯಂತ ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಹಲವಾರು ರಾಜ್ಯಗಳಲ್ಲಿ ತೆರಿಗೆ ವಿನಾಯ್ತಿ ನೀಡಲಾಗಿದೆ. ಚಿತ್ರದಲ್ಲಿ ಹಿಂದೂಗಳಿಗೆ ನೀಡಿರುವ ಹಿಂಸೆಯನ್ನು ಮಾತ್ರ ತೆರಯ ಮೇಲೆ ತೋರಿಸಲಾಗಿದ್ದು ಬೇರೆ ಸಮುದಾಯದವರು ಅನುಭವಿಸಿರುವ ಹಿಂಸೆಯನ್ನು ಮರೆಮಾಚಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪರ ವಿರೋಧದ ಚರ್ಚೆಗಳು ನಡೆಯುತ್ತಿವೆ.

ಈ ಬೆನ್ನಲ್ಲೆ  ಮತ್ತೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ತಮ್ಮ ಚಲನಚಿತ್ರದಿಂದ ಬರುವ ಲಾಭದಲ್ಲಿ ಕಾಶ್ಮೀರಿ ಹಿಂದೂಗಳಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಭರವಸೆ ನೀಡಿದ್ದಾರೆ ಎಂದು ಪೋಸ್ಟ್‌ವೊಂದನ್ನು  ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.


ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್:

‘ದಿ ಕಾಶ್ಮೀರ್ ಫೈಲ್ಸ್’  ಚಿತ್ರದ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ಕಾಶ್ಮೀರದಲ್ಲಿ ಹಿಂದೂಗಳಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಭರವಸೆಯನ್ನುನೀಡಿರುವಂತಹ ಹೇಳಿಕೆಯ ವರದಿಗಳು ಇವೆಯೇ? ಅಥವಾ ಅಂತಹ ಯಾವುದೇ ಘೋಷಣೆ ಮಾಡಿದ್ದಾರೆಯೇ ಎಂದು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಲಾಗಿದ್ದು, ವಿವೇಕ್ ಅಗ್ನಿಹೋತ್ರಿ ಅವರ ಅಧಿಕೃತ ಟ್ವಿಟರ್ ಅಕೌಂಟ್‌ನಲ್ಲಾಗಲಿ ಅಥವಾ ಸುದ್ದಿ ವರದಿಗಳಾಗಲಿ ಲಭ್ಯವಾಗಿಲ್ಲ. ವಿವೇಕ್ ಅಗ್ನಿಹೋತ್ರಿ ಅಂತಹ ಭರವಸೆ ನೀಡಿದ್ದರೆ, ಹಲವಾರು ಮುಖ್ಯವಾಹಿನಿಯ ಸುದ್ದಿ ವೆಬ್‌ಸೈಟ್‌ಗಳು ಆ ಮಾಹಿತಿಯನ್ನು ವರದಿ ಮಾಡುವ ಲೇಖನಗಳನ್ನು ಪ್ರಕಟಿಸುತ್ತಿದ್ದವು. ಆದರೆ ಅಂತರ್ಜಾಲದಲ್ಲಿ ಈ ಸುದ್ದಿಯನ್ನು ವರದಿ ಮಾಡುವ ಒಂದೇ ಒಂದು ಲೇಖನವನ್ನು ಕಾಣಲಿಲ್ಲ.

‘ಕರ್ಣಿ ಸೇನೆ’ಯ ರಾಷ್ಟ್ರೀಯ ಅಧ್ಯಕ್ಷ ಸೂರಜ್ ಪಾಲ್ ಅಮ್ಮು ಅವರು ಇತ್ತೀಚೆಗೆ ‘ಝೀ ಸ್ಟುಡಿಯೋಸ್’ ಮತ್ತು ವಿವೇಕ್ ಅಗ್ನಿಹೋತ್ರಿ ಅವರಿಗೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಬರುವ ಲಾಭದಲ್ಲಿ 50% ಹಣವನ್ನು ಕಾಶ್ಮೀರಿ ಪಂಡಿತರ ಕಲ್ಯಾಣಕ್ಕಾಗಿ ತೆಗೆದಿಡುವಂತೆ  ಮನವಿ ಮಾಡಿದ್ದರು. ಈ ಮಾಹಿತಿಯನ್ನು ವರದಿ ಮಾಡಿದ ಕೆಲವು ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.  ಸಿನಿಮಾದಿಂದ ಬರುವ ಲಾಭದಲ್ಲಿ ಒಂದು ವೇಳೆ  ಸ್ಥಳಾಂತರಗೊಂಡ ಕಾಶ್ಮೀರಿಗಳ ಕಲ್ಯಾಣಕ್ಕೆ ನೀಡದಿದ್ದರೆ , ಕಾಶ್ಮೀರಿ ಪಂಡಿತರ ಹಿಂಸಾತ್ಮಕ ಬದುಕು ಮತ್ತು ಅವರ  ದುಃಖ ಕೇವಲ ತಮ್ಮ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಮಾತ್ರ  ಚಲನಚಿತ್ರವನ್ನು ನಿರ್ಮಿಸಿಲಾಗದೆ ಮತ್ತು ನಿಜವಾದ ಕಾಳಜಿಯನ್ನು ಹೊಂದಿಲ್ಲ ಎಂಬ ಅಭಿಪ್ರಾಯಕ್ಕೆ ಬರಬೇಕಾಗುತ್ತದೆ ಎಂದು ಸೂರಜ್ ಪಾಲ್ ಅಮ್ಮು ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರ ನಿರ್ಮಾಪಕರಿಗೆ ಎಚ್ಚರಿಕೆ ನೀಡಿದ್ದಾರೆ.

ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರಿಂದ ಇದೇ ರೀತಿಯ ಹೇಳಿಕೆಯನ್ನ ಮಾಡಿದ್ದು ಅದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ವಿವೇಕ್ ಅಗ್ನಿಹೋತ್ರಿ  ಕಾಶ್ಮೀರಿ ಪಂಡಿತರಿಗೆ ತಮ್ಮ ಚಲನಚಿತ್ರ ಲಾಭ ಮತ್ತು ಐಎಎಸ್ ಅಧಿಕಾರಿಯಾಗಿ ಅವರ ಅಧಿಕಾರದಿಂದ ಹೇಗೆ ಸಹಾಯ ಮಾಡಬಹುದು ಎಂಬುದರ ಕುರಿತು ಚರ್ಚಿಸಲು ಸಮಯ ನಿಗದಿ ಮಾಡಿಕೊಂಡು ಭೇಟಿಯಾಗೋಣ ಎಂದು ವಿನಂತಿಸಿದ್ದಾರೆ. ಅಧಿಕಾರಿ ತಮ್ಮ ಆಹ್ವಾನವನ್ನು ಸ್ವೀಕರಿಸುತ್ತಾರೆ ಎಂದು ಮಧ್ಯಪ್ರದೇಶದ ಐಎಎಸ್ ಅಧಿಕಾರಿಗೆ ವಿವೇಕ್ ಅಗ್ನಿಹೋತ್ರಿ ಅವರು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಹಲವು ಸುದ್ದಿ ವೆಬ್‌ಸೈಟ್‌ಗಳು ಲೇಖನಗಳನ್ನು ಪ್ರಕಟಿಸಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕಾಶ್ಮೀರದಲ್ಲಿ ಹಿಂದೂಗಳಿಗೆ ಮನೆಗಳನ್ನು ನಿರ್ಮಿಸುವ ಭರವಸೆಯನ್ನು ನೀಡಿಲ್ಲ. ಹಾಗಾಗಿ ವೈರಲ್ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ಸುಳ್ಳು.

ಕೃಪೆ: ಫ್ಯಾಕ್ಟ್‌ಲಿ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಕ್ಕೆ ಪೊಲೀಸರಿಂದ ಥಳಿತ ಎಂಬುದು ಸುಳ್ಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights