ಫ್ಯಾಕ್ಟ್‌ಚೆಕ್: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಿ ದ ನಂತರ ಗೂಂಡಾಗಳಿಂದ ಮುಸ್ಲಿಮರ ಮೇಲೆ ಹಲ್ಲೆ ಎಂಬದು ಸುಳ್ಳು!

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಿದ ನಂತರ ಗೂಂಡಾಗಳು ಮುಸ್ಲಿಮರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಹೇಳಿಕೆಯಿರುವ  ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಸಿನಿಮಾದಲ್ಲಿ ಮುಸ್ಲಿಮರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಒಂದು ವರ್ಗದ ಜನರು ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಲಾಗುತ್ತಿದೆ. ಹಾಗಿದ್ದರೆ ನಿಜವಾಗಿಯೂ ಗೂಂಡಾಗಳು ಮುಸ್ಲಿಮರ ಅಂಗಡಿ ಮೇಲೆ ದಾಳಿ ಮಾಡಲಾಗಿದೆಯೇ? ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ರನ್ ಮಾಡಿದಾಗ, ಕೆಲವು ನ್ಯೂಸ್ ಪೋರ್ಟಲ್‌ಗಳು ಇದೇ ರೀತಿಯ ದೃಶ್ಯಗಳನ್ನು ಪ್ರಕಟಿಸಿರುವುದು ಕಂಡುಬಂದಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ‘ನ್ಯೂಸ್ 18 – ಗುಜರಾತಿ’ ಲೇಖನದಲ್ಲಿ, ಸೂರತ್‌ನ ಸಲಾಬತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅಂಗಡಿ ಮಾಲಿಕ  ಮತ್ತು ದಾಳಿಕೋರರ ನಡುವಿನ ಘರ್ಷಣೆಯಿಂದಾಗಿ ಹಿಂಸಾಚಾರ ಸಂಭವಿಸಿದೆ ಎಂದು ವರದಿಯಾಗಿದೆ.

ಘಟನೆಯ ಕುರಿತು ದಾಖಲಾಗಿರುವ ಎಫ್‌ಐಆರ್ ಅನ್ನು ಇಲ್ಲಿ ನೋಡಬಹುದು. ಎಫ್‌ಐಆರ್‌ನಲ್ಲಿರುವ ಆರೋಪಿಗಳ ಹೆಸರುಗಳನ್ನು ನೋಡಿದರೆ ಅವರಲ್ಲಿ ಹೆಚ್ಚಿನವರು ಮುಸ್ಲಿಮರು ಎಂದು ತಿಳಿದುಬಂದಿದೆ. ಹಾಗಾಗಿ, ಘಟನೆಯಲ್ಲಿ ಯಾವುದೇ ಕೋಮು ದ್ವೇಷದ ಹಿನ್ನಲೆಯಿಲ್ಲ ಎಂಬುದು ಸ್ಪಷ್ಟವಾಗಿದ್ದು. ಇದನ್ನು ಸೂರತ್ ಪೊಲೀಸರು ‘ಇಂಡಿಯಾ ಟುಡೇ’ಗೆ ಖಚಿತಪಡಿಸಿದ್ದಾರೆ.  ಹಾಗಾಗಿ ವೈರಲ್ ಆಗುತ್ತಿರುವ  ಘಟನೆಯು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಸಂಬಂಧಿಸಿಲ್ಲ.ಹಪ್ತ ಕೊಡಲು ನಿರಾಕರಿಸಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಸೂರತ್ ನಲ್ಲಿ ನಡೆದಿದೆ. ಆದರೆ ಈ ವಿಡಿಯೊವನ್ನು  ‘ದಿ ಕಾಶ್ಮೀರ್ ಫೈಲ್ಸ್’ ನೊಂದಿಗೆ ಸಂಬಂಧ ಕಲ್ಪಿಸಿ ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸೂರತ್‌ನಲ್ಲಿ ನಡೆದ ಘಟನೆಯ ಸಂಬಧವಿಲ್ಲದ ವೀಡಿಯೊವನ್ನು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಿದ ನಂತರ ಮುಸ್ಲಿಮರ ಮೇಲೆ ಗೂಂಡಾಗಳು ದಾಳಿ ಮಾಡುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಗಮನಿಸಿ: ನಿಮ್ಮ ಸುತ್ತಮುತ್ತ ಮತ್ತು ನಿಮ್ಮ ವಾಟ್ಸಪ್ ಗುಂಪುಗಳಲ್ಲಿ ಸುಳ್ಳು ಸುದ್ದಿಗಳು ಕಂಡು ಬಂದಲ್ಲಿ ensuddi.com  ವೆಬ್‌ಸೈಟ್‌ ಅನ್ನು ಸಂಪರ್ಕಿಸಿ [email protected]


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights