ಫ್ಯಾಕ್ಟ್‌ಚೆಕ್: ತೆಲಂಗಾಣದ ಪೊಲೀಸರು ತಮ್ಮ ವಾಹನದಲ್ಲಿ ಬಿಜೆಪಿ ಬಾವುಟ ಪ್ರದರ್ಶನ ಮಾಡಿದ್ದು ನಿಜವೆ?

ತೆಲಂಗಾಣ ಪೊಲೀಸ್ ಸಿಬ್ಬಂದಿ ತಮ್ಮ ವಾಹನಗಳ ಮೇಲೆ ಬಿಜೆಪಿ ಧ್ವಜಗಳನ್ನು ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ ಎಂದು ಹಲವು ವಿಡಿಯೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ. ಈ ದೃಶ್ಯಗಳಿರುವ ವಿಡಿಯೋಗಳನ್ನು ಪೋಸ್ಟ್‌ ಮಾಡುತ್ತ ತೆಲಂಗಾಣದಲ್ಲಿ ಪೊಲೀಸ್‌ ಸಿಬ್ಬಂದಿಗಳು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. ಇದು ನಿಜವೆ ಎಂದು ಪರಿಶೀಲಿಸೋಣ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ :

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳ ಗೂಗಲ್ ರಿವರ್ಸ್ ಸರ್ಚ್ ಮಾಡಲಾಗಿದ್ದು, 27 ಮಾರ್ಚ್ 2022 ರಂದು ‘ವಾಹಿನಿ ಟಿವಿ’ ಯೂಟ್ಯೂಬ್ ಚಾನೆಲ್ ಪ್ರಕಟಿಸಿದ ವೀಡಿಯೊದ  ಲಭ್ಯವಾಗಿದೆ. ಈ  ವೀಡಿಯೊದಲ್ಲಿ, ಕೆಲವು ಬಂಧಿತ ಬಿಜೆಪಿ ಕಾರ್ಯಕರ್ತರು ಕೈಬೀಸುವುದನ್ನು ಕಾಣಬಹುದಾಗಿದೆ. ರಾಚಕೊಂಡ ಪೊಲೀಸ್ ವಾಹನದಿಂದ ಬಿಜೆಪಿ ಬಾವುಟ ಹಿಡಿದು ಹೋಗುತ್ತಿರುವ ಬಿಜೆಪಿ ಕಾರ್ಯಕರ್ತರ ಧೈರ್ಯವನ್ನು ಶ್ಲಾಘಿಸಿ ಕೆಲವು ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು.

ಹೆಚ್ಚಿನ ವಿವರಗಳಿಗಾಗಿ ಮತ್ತಷ್ಟು ಸರ್ಚ್ ಮಾಡಿದಾಗ, ಇದೇ ರೀತಿಯ ದೃಶ್ಯಗಳಿರುವ ವೀಡಿಯೊವನ್ನು ‘ಝೀ ತೆಲುಗು ನ್ಯೂಸ್’ ಯೂಟ್ಯೂಬ್ ಚಾನೆಲ್ ಪ್ರಕಟಿಸಿದೆ. ತೆಲಂಗಾಣ ಪೊಲೀಸ್ ವಾಹನದಿಂದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಧ್ವಜವನ್ನು ಬೀಸುತ್ತಿರುವ ದೃಶ್ಯಗಳು ಎಂದು ಅವರು ವರದಿ ಮಾಡಿದ್ದಾರೆ. ರ್ಯಾಲಿಯಲ್ಲಿ ಭಾಗವಹಿಸಿದ್ದಕ್ಕಾಗಿ ವಾಹನದಲ್ಲಿದ್ದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ತೆಲಂಗಾಣ ಪೊಲೀಸ್ ವಾಹನದಿಂದ ಬಂಧಿತ ಬಿಜೆಪಿ ಕಾರ್ಯಕರ್ತರು ಬಿಜೆಪಿ ಧ್ವಜಗಳನ್ನು ಬೀಸುತ್ತಿರುವ ಹಲವು ದೃಶ್ಯಗಳು  ಅಂತರ್ಜಾಲದಲ್ಲಿ ಲಭ್ಯವಿವೆ. ಈ ಎಲ್ಲಾ ಆಧಾರಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಬಂಧಿತ ಬಿಜೆಪಿ ಕಾರ್ಯಕರ್ತರು ತೆಲಂಗಾಣ ಪೊಲೀಸ್ ವಾಹನದಲ್ಲಿ ಬಿಜೆಪಿ ಧ್ವಜಗಳನ್ನು ಹಿಡಿದಿರುವುದು ಸ್ಪಷ್ಟವಾಗದೆ.

ಒಟ್ಟಾರೆಯಾಗಿ ಹೇಳುವುದಾದರೆ, ತೆಲಂಗಾಣ ಪೊಲೀಸ್ ವಾಹನದಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಧ್ವಜವನ್ನು ಬೀಸುತ್ತಿರುವ ವೀಡಿಯೊವನ್ನು ಪೊಲೀಸರು ಬಿಜೆಪಿ ಧ್ವಜ ಹಾಕಿದ್ದಾರೆ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಕೃಪೆ: ಫ್ಯಾಕ್ಟ್‌ಲಿ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಶಾರೂಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಬಹಿಷ್ಕರಿಸಿ ಎಂದು ಯೋಗಿ ಆದಿತ್ಯನಾಥ್ ಹೇಳಿಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights