ಫ್ಯಾಕ್ಟ್‌ಚೆಕ್: ಪ್ರಧಾನಿ ಮೋದಿ ಕುಡಿದ ಅಮಲಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು ಎಂಬುದು ನಿಜವಲ್ಲ

ಪ್ರಧಾನಿ ಮೋದಿ ಕುಡಿದ ಅಮಲಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾರೆ ಎಂದು ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಹೇಳಿರುವಂತೆ ಪ್ರಧಾನಿ ನರೇಂದ್ರ ಮೋದಿಯವರು ಪಾನಮತ್ತರಾಗಿ ಮಾಧ್ಯಮದವರ ಮುಂದೆ ಮಾತನಾಡಿದ್ದು ನಿಜವೇ  ಎಂದು  ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.


ಏನ್‌ಸುದ್ದಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ,ಇದೇ ರೀತಿಯ ವೀಡಿಯೊಗಳನ್ನು ಹಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ವಿರೋಧ ಪಕ್ಷದ ಸದಸ್ಯರು ಹಂಚಿಕೊಂಡಿದ್ದಾರೆ. ಪಿಎಂ ಮೋದಿ ಅವರ ‘ಓ ಮೈ ಗಾಡ್’ ಹೇಳಿಕೆಯ ಅಪಹಾಸ್ಯ ಮಾಡುವ ಮೂಲಕ ಪೋಸ್ಟ್ ಮಾಡಿರುವುದು ಕಂಡುಬಂದಿದೆ. ಪ್ರಧಾನಿ ಮೋದಿಯವರು ಇತ್ತೀಚೆಗೆ ಜರ್ಮನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ವಿಡಿಯೋವನ್ನು ಸೆರೆಹಿಡಿಯಲಾಗಿದೆ.  ಆ ವಿಡಿಯೋಗಳಲ್ಲಿ ಪ್ರಧಾನಿ ಮೋದಿಯವರು ಕುಡಿದಿದ್ದಾರೆ ಎಂಬ ಯಾವ ಸುಳಿವು ಸಹ ಸಿಗಲಿಲ್ಲ. ‘ದಿ ಲಾಲನ್‌ಟಾಪ್’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ಮೂಲ ವೀಡಿಯೊ ಆವೃತ್ತಿ ಕಂಡುಬಂದಿದೆ. ಪ್ರಧಾನಿ ಮೋದಿ ಕುಡಿದಿದ್ದಾರೆ ಎಂದು ತಪ್ಪಾಗಿ ಬಿಂಬಿಸಲು ಮೂಲ ಆವೃತ್ತಿಯನ್ನು ಎಡಿಟ್ ಮಾಡಿ ಸ್ಲೋ ವರ್ಷನ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ.

ಮೂಲ ವಿಡಿಯೊ ಸುಮಾರು 19 ಸೆಕೆಂಡುಗಳಿದ್ದರೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ವಿಡಿಯೊ 26 ಸೆಕೆಂಡುಗಳಿರುವುದನ್ನು ಕಾಣಬಹುದು. ಆದ್ದರಿಂದ, ಪೋಸ್ಟ್ ಮಾಡಿದ ವೀಡಿಯೊವನ್ನು ಟ್ವೀಕ್ ಮಾಡಲಾಗಿದೆ ಎಂದು ಹೇಳಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ಮೋದಿ ಕುಡಿದಿದ್ದಾರೆ ಎಂದು ತಪ್ಪಾಗಿ ಬಿಂಬಿಸಲು ಮೂಲ ವೀಡಿಯೊವನ್ನು ನಿಧಾನಗತಿಯಲ್ಲಿ ಫ್ಲೋ ಆಗುವಂತೆ ಎಡಿಟ್ ಮಾಡಿ ಪೋಸ್ಟ್‌ ಮಾಡಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.


ಇದನ್ನು ಓದಿರಿ: ಅಲಹಾಬಾದ್ ವಿವಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಬಾಂಬ್ ತಯಾರಿಸುತ್ತಿದ್ದರು ಎಂಬುದು ಸುಳ್ಳು!


 

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.