ಫ್ಯಾಕ್ಟ್‌ಚೆಕ್: ಮೋದಿ ಕುಳಿತಿರುವ ಕೋಣೆಯಲ್ಲಿ ನೆಹರು ಫೋಟೊ ಇರುವುದು ನಿಜವೇ?

ಪಂಡಿತ್ ಜವಾಹರಲಾಲ್ ನೆಹರು ಅವರ ಪೋಟೋ ಮುಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್  ಇಬ್ಬರು ಕುಳಿತು ಮಾತುಕತೆ ನಡೆಸುತ್ತಿರುವ ಪೋಸ್ಟ್ ವೈರಲ್ ಆಗಿದ್ದು, ಈ ಫೋಟೋವನ್ನು ಜರ್ಮನಿಯ ರಾಜಧಾನಿ ಬರ್ಲಿನ್‌ನಲ್ಲಿನ ಕಚೇರಿಯೊಂದರಲ್ಲಿ ಸೆರೆಹಿಡಯಲಾಗಿದೆ ಎಂದು ಹೇಳಲಾಗಿದೆ ಮತ್ತು ಇದನ್ನು ಹಲವು ಟ್ವಿಟರ್ ಬಳಕೆದಾರರು ಹಂಚಿಕೊಂಡಿದ್ದಾರೆ.

ನೆಹರೂ ಅವರನ್ನು ನಿರ್ಮೂಲನೆ ಮಾಡಲು ಪ್ರಧಾನಿ ಪ್ರಯತ್ನಿಸಬಹುದು. ಆದರೆ ಅವರನ್ನು ತೊಡೆದುಹಾಕುವುದು ಸುಲಭವಲ್ಲ ಎಂಬ ಹೇಳಿಕೆಯೊಂದಿಗೆ ಈ ಚಿತ್ರ ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಫ್ಯಾಕ್ಟ್‌ಚೆಕ್:

ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಲಾಗಿದ್ದು, ಪ್ರಧಾನಿ ಮೋದಿ ಮತ್ತು ಜರ್ಮನ್ ಚಾನ್ಸೆಲರ್ ಸ್ಕೋಲ್ಜ್ ಅವರ ಈ ಚಿತ್ರವು ಬರ್ಲಿನ್‌ನಲ್ಲಿ ಮೇ 2, 2022 ರಂದು ಅವರ ಭೇಟಿಯಿಂದ ಸಂದರ್ಭದಲ್ಲಿ ಸೆರೆಹಿಡಿದಿರುವ ಚಿತ್ರ ಎಂದು ಕಂಡು ಬಂದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆಯ ಪ್ರಕಾರ ಉಭಯ ನಾಯಕರ ನಡುವಿನ ಈ ಸಭೆಯಲ್ಲಿ ರಷ್ಯಾ-ಉಕ್ರೇನ್ ಯುದ್ಧ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಮಾತುಕತೆ , ದ್ವಿಪಕ್ಷೀಯ ಸಹಕಾರದ ಪ್ರಮುಖ ಕ್ಷೇತ್ರಗಳು,  ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಏನ್‌ಸುದ್ದಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಅದೇ ದಿನಾಂಕದಂದು ಭಾರತದ ಪ್ರಧಾನ ಮಂತ್ರಿಯವರ ಅಧಿಕೃತ ಹ್ಯಾಂಡಲ್‌ನಿಂದ ಚಿತ್ರವನ್ನು ಟ್ವೀಟ್ ಮಾಡಲಾಗಿದೆ ಮತ್ತು ಆದರೆ ಫೋಸ್ಟ್‌ನಲ್ಲಿ  ಪಂಡಿತ್ ಜವಾಹರಲಾಲ್ ನೆಹರು ಅವರ ಭಾವಚಿತ್ರವಿಲ್ಲ.

ಅಸಲಿ ಚಿತ್ರದಲ್ಲಿ ಗೋಡೆಯ ಮೇಲೆ ನೆಹರೂ ಚಿತ್ರ ಕಾಣಿಸುತ್ತಿಲ್ಲ. ವೈರಲ್ ಚಿತ್ರವನ್ನು ಎಡಿಟ್ ಮಾಡಿರುವುದು ಸ್ಪಷ್ಟವಾಗಿದೆ. ಫೋಟೋವನ್ನು  ಎಡಿಟ್ ಮಾಡಿ ಶೇರ್ ಮಾಡಲಾಗುತ್ತಿದೆ. ಹೀಗಾಗಿ ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಹಾಗೂ ಮೋದಿ ಮಾತುಕತೆ ವೇಳೆ ಹಿಂದೆ ಗೋಡೆ ಮೇಲೆ ನೆಹರೂ ಅವರ ಫೋಟೋ ಇರಲಿಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಪ್ರಧಾನಿ ಮೋದಿ ಮತ್ತು ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಭೇಟಿಯ ಸಂದರ್ಭದಲ್ಲಿ ಜರ್ಮನಿಯ ರಾಜಧಾನಿ ಬರ್ಲಿನ್‌ನಲ್ಲಿನ ಕೊಠಡಿಯಲ್ಲಿ ನೆಹರು ಅವರ ಫೋಟೋ ಇರುವಂತೆ ಎಡಿಟ್ ಮಾಡಲಾಗಿರುವ ಪೊಟೊವನ್ನು ಹಂಚಿಕೊಳ್ಳಲಾಗಿದೆ. ಆದರೆ ವಾಸ್ತವವಾಗಿ ಮೂಲ ಫೋಟೊದಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಫೋಟೋ ಇಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಆಲ್ಟ್‌ನ್ಯೂಸ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಮದುವೆ ಪಾರ್ಟಿಯಲ್ಲಿ ರಾಹುಲ್ ಗಾಂಧಿ ಜೊತೆ ಇರುವ ಮಹಿಳೆ ಚೀನಾ ರಾಯಭಾರಿಯಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights