ಫ್ಯಾಕ್ಟ್‌ಚೆಕ್: ಲಾಲು ಪ್ರಸಾದ್ ಯಾದವ್ ನಿಧನ ಎಂದು ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳು

ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಇತ್ತೀಚೆಗೆ ಅನಾರೋಗ್ಯದ ಕಾರಣ  ದೆಹಲಿಯ AIIMSಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಮತ್ತೆ ವ್ಯತ್ಯಾಸ ಕಾಣಿಸಿಕೊಂಡ ಕಾರಣ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತುಆದರೆ ತೀವ್ರ ತೊಂದರೆ ಉಂಟಾದ ಕಾರಣ ಚಿಕಿತ್ಸೆಗೆ ಸ್ಪಂದಿಸದೆ ದೆಹಲಿಯ ಏಮ್ಸ್‌ನಲ್ಲಿ ಲಾಲೂ ಪ್ರಸಾದ್ ಯಾದವ್ ಸಾವನ್ನಪ್ಪಿದಾರೆ ಎಂದು ಹೇಳಲಾದ ಪೋಸ್ಟ್‌ನೊಂದಿಗೆ ಮೃತದೇಹಕ್ಕೆ ಹೂವಿನ ಹಾರ ಹಾಕಲಾಗಿರುವ ಫೋಟೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ವೈರಲ್ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಲಾಗಿದ್ದು,ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದ ಮಾಹಿತಿಗಾಗಿ ಪ್ರಾಥಮಿಕ ತನಿಖೆಯ ನಡೆಸಲಾಗಿದ್ದು ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಪರಿಸ್ಥಿತಿ ಕುರಿತು. ರಾಷ್ಟ್ರೀಯ ಜನತಾ ದಳದ ವಕ್ತಾರ ಚಿತ್ತರಂಜನ್ ಗಗನ್ ಮಾಹಿತಿ ನೀಡಿದ್ದು ಲಾಲು ಅವರ ಆರೋಗ್ಯ ಸ್ಥಿರವಾಗಿದ್ದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಸುದ್ದಿ ಸುಳ್ಳು ಎಂದು ತಿಳಿಸಿದ್ದಾರೆ ಎಂದು ದಿ ಲಾಜಿಕಲ್ ಇಂಡಿಯಾ ವರದಿ ಮಾಡಿದೆ.

ಲಾಲು ಪ್ರಸಾದ್ ಯಾದವ್‌ ಅವರ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಮಾಡಲಾದ ಪ್ರತಿಪಾದನೆಯನ್ನು ಸತ್ಯವೆಂದು ಹೇಳುವ  ಯಾವುದೇ ವಿಶ್ವಾಸಾರ್ಹ ಮಾಧ್ಯಮ ವರದಿಗಳು ಲಭ್ಯವಾಗಿಲ್ಲ. ರಾಷ್ಟ್ರೀಯ ಜನತಾ ದಳದ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಅನ್ನು ಸಹ ಹುಡುಕಿದ್ದೇವೆ ಆದರೆ ವೈರಲ್ ಪೋಸ್ಟ್‌ಗೆ ಸಂಬಂಧಿಸಿದ ಯಾವುದೇ ಅಪ್‌ಡೇಟ್ ಕಂಡುಬಂದಿಲ್ಲ.

ಆದರೆ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯು ಸುಳ್ಳು ಎಂದು ಪ್ರತಿಪಾದನೆಯನ್ನು ತಿರಸ್ಕರಿಸುವ ಕೆಲವು ಮಾಧ್ಯಮ ವರದಿಗಳನ್ನು ನಾವು ಕಂಡುಕೊಂಡಿದ್ದೇವೆ. ಆರ್‌ಜೆಡಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ವೈರಲ್ ಪೋಸ್ಟ್‌ಅನ್ನು ಸುಳ್ಳು ಎಂದು ಹೇಳಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಆರ್‌ಜೆಡಿ ವಕ್ತಾರ ಚಿತ್ತರಂಜನ್ ಗಗನ್, ಲಾಲು ಪ್ರಸಾದ್ ಯಾದವ್ ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಮತ್ತು ಅವರು ತಮ್ಮ ಹಿರಿಯ ಪುತ್ರಿ ಮಿಸಾ ಭಾರತಿ ಅವರ ದೆಹಲಿ ನಿವಾಸದಲ್ಲಿದ್ದಾರೆ. ಲಾಲು ಯಾದವ್ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಎಲ್ಲಾ ತಪ್ಪು ಮಾಹಿತಿಗಳು “ಉತ್ತಮ ಯೋಜಿತ ಪಿತೂರಿ” ಎಂದು ಹೇಳಿದ್ದಾರೆ.

ಲಾಲು ಅವರು ಹಲವಾರು ಕಾಯಿಲೆಗಳಿಂದ ಬಳಲುತ್ತಿದ್ದಾರೆ, ಆದರೆ ಅವರು ಚಿಕಿತ್ಸೆಯ ನಂತರ ಹೆಚ್ಚು ಸುಧಾರಿಸುತ್ತಿದ್ದಾರೆ ಎಂದ ಗಗನ್, “ಲಾಲು ಜಿ ಲಕ್ಷಾಂತರ ಜನರ ಆಶೀರ್ವಾದ ಮತ್ತು ಶುಭಾಶಯಗಳನ್ನು ಹೊಂದಿದ್ದಾರೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ಶೀಘ್ರದಲ್ಲೇ ನಮ್ಮೊಂದಿಗೆ ಮರಳುತ್ತಾರೆ” ಎಂದರು.

ಒಟ್ಟಾರೆಯಾಗಿ ಹೇಳುವುದಾದರೆ RJD ಅಧ್ಯಕ್ಷ ಲಾಲು ಪ್ರಸಾದ್ ಯಾದವ್‌ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದರು, ನಂತರ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ, ಅವರ ಆರೋಗ್ಯ ಸ್ಥಿತಿಯೂ ಸುಧಾರಿಸಿದೆ ಎಂದಿರುವ ಚಿತ್ತರಂಜನ್ ಗಗನ್ ಸೋಶಿಯಲ್ ಮೀಡಿಯಾದಲ್ಲಿ ಲಾಲೂ ಅವರ ಬಗ್ಗೆ ಮಾಡಿರುವ ಪೋಸ್ಟ್‌ “ಉತ್ತಮ ಯೋಜಿತ ಪಿತೂರಿ” ಎಂದು ಹೇಳಿದ್ದಾರೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಮದುವೆ ಪಾರ್ಟಿಯಲ್ಲಿ ರಾಹುಲ್ ಗಾಂಧಿ ಜೊತೆ ಇರುವ ಮಹಿಳೆ ಚೀನಾ ರಾಯಭಾರಿಯಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.