ಫ್ಯಾಕ್ಟ್‌ಚೆಕ್: ಅಸ್ಸಾಂ ಮಳೆಗೆ ಕೊಚ್ಚಿ ಹೋದ ಸೇತುವೆ ! ವಾಸ್ತವವೇನು?

ಅಸ್ಸಾಂನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಭಾರಿ ಅನಾಹುತ ಸೃಷ್ಟಿಯಾಗಿದ್ದು ರಸ್ತೆ, ಸೇತುವೆಗಳು ಕೊಚ್ಚಿಹೋಗಿವೆ ಎಂದು ಹೇಳಿಕೊಳ್ಳುವ ಕೆಲವು  ವಿಡಿಯೋ  ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಅಸ್ಸಾಂನಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದ ಸಂದರ್ಭದಲ್ಲಿ, ಮಳೆಯಿಂದಾಗಿ ಅಸ್ಸಾಂನಲ್ಲಿ ಸೇತುವೆಯೊಂದು ಕೊಚ್ಚಿಕೊಂಡು ಹೋಗುತ್ತಿದೆ ಎಂಬ ಹೇಳಿಕೆಯೊಂದಿಗೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಪರಿಶೀಲಿಸೋಣ.

ಅಸ್ಸಾಂನಲ್ಲಿ ಪ್ರವಾಹ ಉಂಟಾಗಿದ್ದು ಸೇತುವೆ ಕೊಚ್ಚಿಕೊಂಡು ಹೋಗಿದೆ ಎಂದು ಹೇಳಲಾಗುತ್ತಿರುವ ವಿಡಿಯೊ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದರಿಂದ ವಾಸ್ತವ ಏನೆಂದು ಪರಿಶೀಲಿಸುವಂತೆ Ensuddi.com ವಾಟ್ಸಾಪ್ ಸಂಖ್ಯೆಗೆ(9108969301) ವಿನಂತಿಯ ಸಂದೇಶಗಳು ಬಂದಿದ್ದವು.

ಏನ್‌ಸುದ್ದಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ಗೂಗಲ್‌ನ ಯಾಂಡೆಕ್ಸ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ವಿಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಪರಿಶೀಲಿಸಿದಾಗ,  ಹಲವು ವೀಡಿಯೊಗಳು ಲಭ್ಯವಾಗಿದ್ದು. ಅವುಗಳಲ್ಲಿ ಹೆಚ್ಚಿನವುಗಳನ್ನು ಏಪ್ರಿಲ್ 2021 ರಲ್ಲಿ ಪೋಸ್ಟ್ ಮಾಡಲಾಗಿದೆ ಮತ್ತು ಘಟನೆಯ ದೃಶ್ಯಾವಳಿಗಳು ಇಂಡೋನೇಷ್ಯಾದಲ್ಲಿ ನಡೆದಿದೆ ಎಂಬ ವಿವರಣೆಯನ್ನು ಹೊಂದಿವೆ. ಆ ಕೆಲವು ಹಳೆಯ ಪೋಸ್ಟ್‌ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಕೊಚ್ಚಿ ಹೋಗುತ್ತಿರುವ ಸೇತುವೆ ಇಂಡೋನೇಶಿಯಾದ್ದು ಮತ್ತು ಈ ಸುದ್ದಿ ಹಳೆಯದು.

ಕೆಲವು ಮಾಧ್ಯಮ ಏಜೆನ್ಸಿಗಳು ಏಪ್ರಿಲ್ 2021 ರಲ್ಲಿ ಇಂಡೋನೇಷ್ಯಾದಲ್ಲಿ ಸಂಭವಿಸಿದ ಪ್ರವಾಹದ ಬಗ್ಗೆ ಅದೇ ದೃಶ್ಯಗಳೊಂದಿಗೆ ಲೇಖನಗಳನ್ನು ಪ್ರಕಟಿಸಿವೆ. ಅವುಗಳನ್ನು ಇಲ್ಲಿ,  ಮತ್ತು ಇಲ್ಲಿ ಓದಬಹುದು. ಹಾಗಾಗಿ ಇಂಡೋನೇಷ್ಯಾದ 2021ರ ಹಳೆಯ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು ಅಸ್ಸಾಂನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸೇತುವೆ ಕೊಚ್ಚಿಕೊಂಡು ಹೋಗಿದೆ ಎಂದು ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಅಸ್ಸಾಂನಲ್ಲಿ ಮಹಾಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿರುವುದು ನಿಜ ಆದರೆ ಈ ಸಂಬಂಧವಿಲ್ಲದ ವಿಡಿಯೊಗಳನ್ನು ಅಸ್ಸಾಂನಲ್ಲಿ ನಡೆದ ಘಟನೆ ಎಂದು ತಪ್ಪಾಗಿ ಹಂಚಿಕೊಂಡಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಅಂಬೇಡ್ಕರ್‌ರವರ ಮಗಳು ಅಮೇರಿಕಾದ ಸುಪ್ರಿಂ ಕೋರ್ಟ್ ನ್ಯಾಯಾಧೀಶೆ ಎಂಬುದು ನಿಜವೇ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.