ಫ್ಯಾಕ್ಟ್‌ಚೆಕ್: ಅಸ್ಸಾಂ ಪ್ರವಾಹಕ್ಕೆ ಕೊಚ್ಚಿಹೋದ ತಾಯಿ ಮತ್ತು ಮಗು ಎಂದು ಹಳೆಯ ವಿಡಿಯೊ ವೈರಲ್

ಮಹಾ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, ಹರಿಯುತ್ತಿರುವ ನೀರಿನ ರಭಸಕ್ಕೆ ನದಿ ದಾಟಲು ನಿರ್ಮಿಸಿದ್ದ ಸೇತುವೆಯೊಂದು ಕುಸಿದು ಕುಟುಂಬವೊಂದು ಕೊಚ್ಚಿಹೋಗಿದೆ ಎಂದು ಹೇಳುವ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇದು ಅಸ್ಸಾಂನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಗಿರುವ ಅನಾಹುತ ಎಂದು ಸಾಮಾಜಿಕ ಮಾಧ್ಯಮದ ಬಳೆಕೆದಾರರು ಹಂಚಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ವೈರಲ್ ವೀಡಿಯೊದ ಕೀಫ್ರೇಮ್‌ಗಳನ್ನು ಗೂಗಲ್ ಸರ್ಚ್ ಮಾಡಿದಾಗ 2017 ರಿಂದ ಇಂಟರ್‌ನೆಟ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿರುವ ಸುದ್ದಿ ವರದಿಗಳು ಲಭ್ಯವಾಗಿವೆ. ವೀಡಿಯೊವನ್ನು ANI ತನ್ನ YouTube ಚಾನಲ್‌ನಲ್ಲಿ ಆಗಸ್ಟ್ 18, 2017 ರಂದು ಅಪ್‌ಲೋಡ್ ಮಾಡಿದೆ. ವಿವರಣೆಯ ಪ್ರಕಾರ, ವೀಡಿಯೊ ಬಿಹಾರದ ಅರಾರಿಯಾ ಜಿಲ್ಲೆಯದ್ದಾಗಿದೆ.

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಗ್ರಾಮವೊಂದಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು ಬಿದ್ದ ಪರಿಣಾಮ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆಯೊಂದು ಕ್ಯಾಮರಾದಲ್ಲಿ ದಾಖಲಾಗಿದೆ ಎಂದು ವಿವರಣೆಯಲ್ಲಿ ತಿಳಿಸಲಾಗಿದೆ. ಆದರೆ ಇದು ಅಸ್ಸಾಂನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಂಭವಿಸಿದ ದುರಂತ ಎಂದು ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ 2017ರಲ್ಲಿ ಬಿಹಾರದ ಅರಾರಿಯಾ ಗ್ರಾಮದಲ್ಲಿ ಪ್ರವಾಹದಿಂದ ಕೊಚ್ಚಿಹೋದ ಘಟನೆಯನ್ನು ಅಸ್ಸಾಂನಲ್ಲಿ ಸುರಿಯುತ್ತಿರುವ ಭೀಕರ ಮಳೆಗೆ ಕೊಚ್ಚಿಹೊಗಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ದಿಕ್ಕುತಪ್ಪಿಸುವಂತಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಡಾ. ಅಬ್ದುಲ್ ಕಲಾಂ ಅವರ ಸಹೋದರ ಛತ್ರಿ ರಿಪೇರಿ ಮಾಡುತ್ತಿರುವುದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.