ಫ್ಯಾಕ್ಟ್‌ಚೆಕ್: ಜ್ಞಾನವಾಪಿ ಮಸೀದಿ ವಿಡಿಯೊ ಸಮೀಕ್ಷೆ ವಿರೋದಿಸಿದವರ ಮೇಲೆ ಲಾಠಿ ಚಾರ್ಜ್! ವಾಸ್ತವವೇನು?

ಉತ್ತರ ಪ್ರದೇಶದಲ್ಲಿ  ಗುಂಪೊಂದರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವ 28 ಸೆಕೆಂಡುಗಳ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರು ಜನರನ್ನು ಎಳೆದಾಡುವ ದೃಶ್ಯವೂ ವಿಡಿಯೊದಲ್ಲಿ ಇದೆ. ಇದು ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿರುವ ವಿಡಿಯೊ ಎಂದು ಹೇಳಲಾಗುತ್ತಿದ್ದು, ಈ ವಿಡಿಯೊಗೆ, ‘ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆಯನ್ನು ನಿಲ್ಲಿಸುವಂತೆ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ’ ಎಂದು ಹಲವರು ಟ್ವೀಟ್‌ ಮಾಡಿದ್ದಾರೆ.

https://twitter.com/Shrish_1987/status/1531001023673749504?ref_src=twsrc%5Etfw%7Ctwcamp%5Etweetembed%7Ctwterm%5E1531001023673749504%7Ctwgr%5E%7Ctwcon%5Es1_&ref_url=https%3A%2F%2Fthelogicalindian.com%2Ffact-check%2Fpolice-assaulting-muslim-protestors-35852

ಫ್ಯಾಕ್ಟ್‌ಚೆಕ್:

ವೈರಲ್ ವೀಡಿಯೊದ ಕೀ-ಫ್ರೇಮ್‌ಗಳನ್ನು ಪ್ರತ್ಯೇಕಿಸಲು ನಾವು InVid ನಲ್ಲಿ ಗೂಗಲ್  ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, 3 ಜುಲೈ 2021 ರಂದು ನವಭಾರತ್ ಟೈಮ್ಸ್  ಅಪ್‌ಲೋಡ್ ಮಾಡಿದ ವೀಡಿಯೊ ಲಭ್ಯವಾಗಿದ್ದು, ಅಲ್ಲಿ ಇದೇ ರೀತಿಯ ತುಣುಕನ್ನು ಕಾಣಬಹುದು. ‘ಪಂಚಾಯತ್ ಚುನಾವಣೆ ಕುರಿತು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ’ ಎಂಬ ಶೀರ್ಷಿಕೆಯಡಿ ವಿಡಿಯೋ ವರದಿಯಾಗಿದೆ.

ಉತ್ತರ ಪ್ರದೇಶದ ಪ್ರಯಾಗರಾಜ್‌ ಜಿಲ್ಲೆಯಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚುನಾವಣೆಯ ಮತ ಎಣಿಕೆಯಲ್ಲಿ ಮೋಸ ನಡೆದಿದೆ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು ಎಂದು ಲಾಜಿಕಲ್ ಇಂಡಿಯನ್‌ ವರದಿಯಲ್ಲಿ ವಿವರಿಸಲಾಗಿದೆ.

ಉತ್ತರಪ್ರದೇಶದಲ್ಲಿ ಜಿಲ್ಲಾ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷವು ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿದೆ ಎಂದು ಹೇಳಲಾದ ಹಿಂದೂಸ್ತಾನ್ ಟೈಮ್ಸ್ ವರದಿಯನ್ನು ಇಲ್ಲಿ ನೋಡಬಹುದು. ಜುಲೈ 4, 2021 ರಂದು ಪ್ರಕಟವಾದ ವರದಿಯು, ಲಕ್ನೋ, ಪ್ರಯಾಗ್‌ರಾಜ್, ಪ್ರತಾಪ್‌ಗಢ, ಕೌಶಂಬಿ ಮತ್ತು ಇತರ ಜಿಲ್ಲೆಗಳಲ್ಲಿ ಸಮಾಜವಾದಿ  ಪಕ್ಷದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಎಸ್‌ಪಿ ವಕ್ತಾರ ರಾಜೇಂದ್ರ ಚೌಧರಿ ಹೇಳಿದ್ದಾರೆ. ಸಂಬಂಧಿತ ಕೀವರ್ಡ್‌ಗಳೊಂದಿಗೆ Twitter ಅನ್ನು ಸರ್ಚ್ ಮಾಡಿದಾಗ, ಸಮಾಜವಾದಿ ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಅಪ್‌ಲೋಡ್ ಮಾಡಲಾದ ಈ ವೀಡಿಯೊಗಳು ಲಭ್ಯವಾಗಿವೆ.

ವೀಡಿಯೊವನ್ನು ಜುಲೈ 3, 2021 ರಂದು ಅಪ್‌ಲೋಡ್ ಮಾಡಲಾಗಿದೆ ಮತ್ತು ಈ ಕೆಳಗಿನ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ: “ಪ್ರಯಾಗ್‌ರಾಜ್‌ನಲ್ಲಿ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಎಸ್‌ಪಿ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ಬರ್ಬರ ಲಾಠಿ ಚಾರ್ಜ್ ಅತ್ಯಂತ ಖಂಡನೀಯ ಮತ್ತು ಮೋಸದಿಂದ ಸಾಧಿಸಿದ ವಿಜಯದ ಪೊಳ್ಳು ಆಚರಣೆ. ಅಧಿಕಾರವು ಹೆಚ್ಚು ಕಾಲ ಉಳಿಯುವುದಿಲ್ಲ, ರಾಜ್ಯದ ಯುವಕರು, ರೈತರು, ಮಹಿಳೆಯರು ಮತ್ತು ಹೆಣ್ಣುಮಕ್ಕಳು 2022 ರಲ್ಲಿ ಎಸ್‌ಪಿ ಸರ್ಕಾರವನ್ನು ರಚಿಸುತ್ತಾರೆ ಎಂದು ಟ್ವಿಟರ್‌ನಲ್ಲಿ ಬರೆಯಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ವೈರಲ್ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿರುವ ವೀಡಿಯೊದಲ್ಲಿರುವ ಲಾಠಿ ಚಾರ್ಜ್‌ನ ಘಟನೆಯನ್ನು ಜುಲೈ 2021 ರಲ್ಲಿ ಚಿತ್ರೀಕರಿಸಲಾಗಿದೆ. ಆದರೆ ಈ ಘಟನೆಯನ್ನು ತಪ್ಪು ಹೇಳಿಕೆಯೊಂದಿಗೆ ‘ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆಯನ್ನು ನಿಲ್ಲಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾಗ, ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿತ್ತಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದ್ನು ಓದಿ: ಫ್ಯಾಕ್ಟ್‌ಚೆಕ್: ಜಾರ್ಖಂಡ್‌ನಲ್ಲಿ ಪಾಕಿಸ್ತಾನ್‌ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂಬುದು ನಿಜವಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights