ಫ್ಯಾಕ್ಟ್‌ಚೆಕ್: BJP ನಾಯಕಿ, ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೆ BJP ತೊರೆದು ಕಾಂಗ್ರೆಸ್ ಸೇರಿದ್ದು ನಿಜವೇ?

BJP ನಾಯಕಿ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಭಾರತೀಯ ಜನತಾ ಪಕ್ಷವನ್ನು(BJP) ತೊರೆದು ಕಾಂಗ್ರೆಸ್ ಸೇರಿದ್ದಾರೆ ಎಂಬ ಪೋಸ್ಟ್ ಮೂಲಕ ಫೋಟೋವನ್ನು  ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. BJP ಉನ್ನತ ಮಟ್ಟದ ನಾಯಕಿಯಾದ ವಸುಂಧರಾ ರಾಜೆ ನಿಜವಾಗಿಯೂ ಕಾಂಗ್ರೆಸ್ ಪಕ್ಷಕ್ಕೆ ಸೇದಿದ್ದಾರೆಯೇ? ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.


ಏನ್‌ಸುದ್ದಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ವಸುಂಧರಾ ರಾಜೇ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರಾ ಎಂದು ತಿಳಿಯಲು ಹಲವು ವಿಧಾನಗಳ ಮೂಲಕ ಗೂಗಲ್‌ ಸರ್ಚ್ ಮಾಡಿದಾಗ, ಇಂತಹ ಸುದ್ದಿಗೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿ ಯಾವುದೇ ವಿಶ್ವಾಸಾರ್ಹ ಮಾಹಿತಿ ಸಿಗಲಿಲ್ಲ. ಅವರು BJP ತೊರೆದು ಕಾಂಗ್ರಸ್‌ ಸೇರಲು ಸಿದ್ದತೆ ಮಾಡಿಕೊಳ್ಳುವುದು ನಿಜವಾಗಿದ್ದರೆ, ಎಲ್ಲಾ ಪ್ರಮುಖ ಸುದ್ದಿವಾಹಿನಿಗಳು ಈ ಸುದ್ದಿಯನ್ನು ಪ್ರಕಟಿಸುತ್ತಿದ್ದವು ಆದರೆ ಅಂತಹ ಯಾವುದೇ ಸುದ್ದಿಗಳು ಪ್ರಸಾರವಾಗಿಲ್ಲ.

ವಸುಂಧರಾ ರಾಜೇ ಅವರ ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳು – ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ – ಅವರು ಬಿಜೆಪಿಯಿಂದ ನಿರ್ಗಮಿಸುವ ಬಗ್ಗೆ ಏನನ್ನೂ ಉಲ್ಲೇಖಿಸಿಲ್ಲ.

ವಸುಂಧರಾ ರಾಜೇ ಅವರು ರಾಜಸ್ಥಾನದ ಮಾಜಿ ಸಿಎಂ (ಬಿಜೆಪಿಯಿಂದ) 2018 ರಲ್ಲಿ ಅಧಿಕಾರ ತ್ಯಜಿಸಿದ್ದಾರೆ. ಕೆಲವು ಪಕ್ಷದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯವಿದ್ದ ಕಾರಣ ವಸುಂಧರಾ ರಾಜೇ ಅವರು ಕೆಲವು ರಾಜಸ್ಥಾನ ಬಿಜೆಪಿ ಸಭೆಗಳಿಗೆ ಹಾಜರಾಗುವುದನ್ನು ನಿಲ್ಲಿಸಿದ್ದಾರೆ ಎಂದು ಇತ್ತೀಚಿನ ಸುದ್ದಿ ವರದಿಗಳಿವೆ. ಆದರೆ ವಸುಂಧರಾ ರಾಜೇ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ ಎಂದು ಹೇಳುವ ಯಾವುದೇ ಇತ್ತೀಚಿನ ವರದಿಗಳು ನಮಗೆ ಕಂಡುಬಂದಿಲ್ಲ.

ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿರುವ ಚಿತ್ರಗಳು 2018ರಲ್ಲಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜಸ್ಥಾನದ ನಿರ್ಗಮಿತ ಮುಖ್ಯಮಂತ್ರಿ ವಸುಂಧರಾ ರಾಜೇ ತಮ್ಮ ಸೋದರಳಿಯ ಜ್ಯೋತಿರಾದಿತ್ಯ ಸಿಂಧಿಯಾ ಅವರ ಅಪಾರ ರಾಜಕೀಯ ಭಿನ್ನಾಭಿಪ್ರಾಯವನ್ನು ಬದಿಗಿಟ್ಟು ಆತ್ಮೀಯವಾಗಿ ಸ್ವಾಗತಿಸುತ್ತಿರುವ ಚಿತ್ರವು ಹಲವರನ್ನು ಆಕರ್ಷಿಸಿತು. ಆ ಕಾರ್ಯಕ್ರಮದಲ್ಲಿ ಸೆರೆಯಾದ ಫೋಟೋಗಳನ್ನು ಹಂಚಿಕೊಂಡು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಆದರೆ ಇದಕ್ಕೆ ಯಾವುದೇ ಅಧಿಕೃತ ಅಥವಾ ವಿಶ್ವಾಸಾರ್ಹ ಮೂಲಗಳಿಲ್ಲ.

ಆದರೆ 2020ರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್‌ ತೊರೆದು BJP ಗೆ ಸೇರಿದ್ದರು, ಆದರೆ ವಸುಂಧರಾ ರಾಜೆ BJP ತೊರೆದು ಕಾಂಗ್ರೆಸ್‌ ಸೇರಿದ್ದಾರೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ, ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಇದು ಕಠ್ಮಂಡುವಿನ ಪಶುಪತಿನಾಥ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ನಡೆದ ಅಭಿಷೇಕವಲ್ಲ !


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights