ಫ್ಯಾಕ್ಟ್‌ಚೆಕ್: ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದು BJP ಸೇರಿದಕ್ಕೆ ಕಪಾಳಕ್ಕೆ ಹೊಡೆಯಲಾಯಿತೆ?

ಗುಜರಾತ್‌ನ ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಇತ್ತೀಚೆಗೆ ಕಾಂಗ್ರೆಸ್ ತೊರೆದು BJP ಸೇರಿದ್ದಾರೆ. ಈ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಹಾರ್ದಿಕ್ ಪಟೇಲ್ ಅವರನ್ನು ವ್ಯಕ್ತಿಯೊಬ್ಬರು ಕಪಾಳಮೋಕ್ಷ ಮಾಡಿದ ವಿಡಿಯೋದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದ್ದು, ಅವರು ಬಿಜೆಪಿಗೆ ಸೇರಿದ ನಂತರ ಈ ಘಟನೆ ನಡೆದಿದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಅವರು ಬಿಜೆಪಿಗೆ ಸೇರುತ್ತಿದ್ದಂತೆ ಅವರಿಗೆ ಕಪಾಳಮೋಕ್ಷ ಮಾಡಿ ಸ್ವಾಗತಿಸಲಾಯಿತು ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾರ್ದಿಕ್ ಪಟೇಲ್‌ಗೆ ಕಪಾಳಕ್ಕೆ ಹೊಡೆದ ವ್ಯಕ್ತಿಯು ಯಾವ ಉದ್ದೇಶದಿಂದ ಹೊಡೆದಿದ್ದಾನೆ, ಈ ಘಟನೆಗೆ ಕಾರಣ ಏನು ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಂಬಂಧಿತ ಕೀವರ್ಡ್‌ಗಳೊಂದಿಗೆ ಗೂಗಲ್ ಸರ್ಚ್ ನಡೆಸಲಾಗಿದ್ದು ಇದೇ ರೀತಿಯ ದೃಶ್ಯಗಳನ್ನು ವರದಿ ಮಾಡುವ ಹಲವು ಸುದ್ದಿ ವರದಿಗಳು ಲಭ್ಯವಾಗಿದೆ (ಇಲ್ಲಿ, ಇಲ್ಲಿ ಮತ್ತು ಇಲ್ಲಿ). ಈ ವರದಿಗಳ ಪ್ರಕಾರ, ಗುಜರಾತ್‌ನ ಸುರೇಂದ್ರ ನಗರ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಪಟೇಲ್ ಮಾತನಾಡುತ್ತಿದ್ದಾಗ ಅಂದಿನ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರನ್ನು ವ್ಯಕ್ತಿಯೊಬ್ಬರು ವೇದಿಕೆಯ ಮೇಲೆಯೇ ಕಪಾಳಕ್ಕೆ ಹೊಡೆದಿದ್ದಾರೆ. ಹಾರ್ದಿಕ್ ಪಟೇಲ್ ಇತ್ತೀಚೆಗೆ ಬಿಜೆಪಿ ಸೇರಿರುವುದು ನಿಜ ಆದರೆ, ವೈರಲ್ ಆಗಿರುವ ದೃಶ್ಯಗಳಿಗೂ ಅವರು ಬಿಜೆಪಿ ಸೇರುವುದಕ್ಕೂ ಯಾವುದೇ ಸಂಬಂಧವಿಲ್ಲ. ಈ ದೃಶ್ಯಗಳು 2019 ರ ಹಿಂದಿನ ಘಟನೆಗೆ ಸಂಬಂಧಿಸಿವೆ.

ಘಟನೆಯನ್ನು ವರದಿ ಮಾಡಿದ ಇತರ ಸುದ್ದಿ ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು. ನಂತರ ಕಪಾಳಕ್ಕೆ ಹೊಡೆದ ವ್ಯಕ್ತಿಯನ್ನು ತರುಣ್ ಗಜ್ಜರ್ ಎಂದು ಗುರುತಿಸಲಾಗಿದ್ದು, ಕೆಲವು ವೈಯಕ್ತಿಕ ಕಾರಣಗಳಿಗಾಗಿ ಹಾರ್ದಿಕ್ ಪಟೇಲ್‌ಗೆ ಕಪಾಳಮೋಕ್ಷ ಮಾಡಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದನು. ಹೀಗಾಗಿ, ವೈರಲ್ ದೃಶ್ಯಗಳಿಗೂ ಹಾರ್ದಿಕ್ ಪಟೇಲ್ ಬಿಜೆಪಿ ಸೇರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಫ್ಯಾಕ್ಟ್‌ಲಿ ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2019ರಲ್ಲಿ ಗುಜರಾತ್‌ನ ಸುರೇಂದ್ರ ನಗರ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಹಾರ್ದಿಕ್ ಪಟೇಲ್ ಅವರನ್ನು ತರುಣ್ ಗಜ್ಜರ್ ಎಂಬ ವ್ಯಕ್ತಿಯು ಕಪಾಳಮೋಕ್ಷ ಮಾಡಿದ್ದರು. ಆದರೆ ಅವರು ಬಿಜೆಪಿ ಸೇರುವುದಕ್ಕೂ ಆ ವಿಡಿಯೋಗೂ ಯಾವುದೇ ಸಂಬಂಧವಿಲ್ಲ. ಹಳೆಯ ವಿಡಿಯೊವನ್ನು ಈಗಿನ ಸಂದರ್ಭಕ್ಕೆ ಹೋಲಿಸಿ ಸುಳ್ಳು ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಇಸ್ಲಾಂ ಧರ್ಮವನ್ನು ರಷ್ಯಾದ 2ನೇ ರಾಜ್ಯ ಧರ್ಮ ಎಂದು ಅಧ್ಯಕ್ಷ ಪುಟಿನ್ ಘೋಷಿಸಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

One thought on “ಫ್ಯಾಕ್ಟ್‌ಚೆಕ್: ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದು BJP ಸೇರಿದಕ್ಕೆ ಕಪಾಳಕ್ಕೆ ಹೊಡೆಯಲಾಯಿತೆ?

  • June 7, 2022 at 2:37 pm
    Permalink

    Whole sale swimming suit photo is excellent.

    Reply

Leave a Reply

Your email address will not be published.

Verified by MonsterInsights