ಫ್ಯಾಕ್ಟ್ಚೆಕ್: ಮಹಿಳೆಯೊಬ್ಬರು ರಾಹುಲ್ ಗಾಂಧಿ ಬಳಿ ನೋವು ತೋಡಿಕೊಂಡಿದ್ದನ್ನು ಬೈದಿದ್ದಾರೆ ಎಂದು ತಪ್ಪಾಗಿ ಹಂಚಿಕೆ

@BJP4Karnataka @BlrNirmal @NewsKdj @JagadishShettar pic.twitter.com/k1tkO56kbB
— N. Lokesh Gowda (@NLokeshGowda2) June 29, 2022
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದ ಲಿಂಕ್ಅನ್ನು ಆರ್ಕೈವ್ ಮಾಡಲಾಗಿದೆ.
ಫ್ಯಾಕ್ಟ್ಚೆಕ್ :
ವಿಡಿಯೊದ ಕೀಫ್ರೇಮ್ಗಳ ಸಹಾಯದಿಂದ ಕೀವರ್ಡ್ ಬಳಸಿ ಗೂಗಲ್ ಸರ್ಚ್ ಮಾಡಿದಾಗ ರಾಹುಲ್ ಗಾಂಧಿಯೊಂದಿಗೆ ಮಹಿಳೆಯೊಬ್ಬರು ಮಾತನಾಡುತ್ತಿರುವ ವಿಡಿಯೋ 2019 ರದ್ದು. ಹಳೆಯ ವಿಡಿಯೋವನ್ನು ಇತ್ತೀಚಿನದ್ದು ಎಂದು ಹಂಚಿಕೊಳ್ಳುತ್ತಿದ್ದಾರೆ, ಮತ್ತು ರಾಹುಲ್ ಗಾಂಧಿಗೆ ಮಹಿಳೆ ಬಯ್ಯುತ್ತಿದ್ದಾರೆ ಎಂಬ ಹೇಳಿಕೆಯನ್ನು ಹಂಚಿಕೊಳ್ಳುತ್ತಿದ್ದಾರೆ.
ವಾಸ್ತವವಾಗಿ ಮಹಿಳೆ ರಾಹುಲ್ ಗಾಂಧಿಯನ್ನು ನಿಂದಿಸುತ್ತಿಲ್ಲ:
2019ರಲ್ಲಿ ಕೇಂದ್ರ ಸರ್ಕಾರ 370ನೇ ವಿಧಿಯನ್ನು ರದ್ದುಪಡಿಸಿ ಇಂಟರ್ನೆಟ್ ಸೌಲಭ್ಯ ಸ್ಥಗಿತಗೊಳಿಸಿ ಲಾಕ್ಡೌನ್ ಹೇರಿದ ಸಂದರ್ಭದಲ್ಲಿ ಕಾಶ್ಮೀರದ ಪರಿಸ್ಥಿತಿಯನ್ನು ಅವಲೋಕಿಸಲು ನಿಯೋಗದೊಂದಿಗೆ ರಾಹುಲ್ ಗಾಂಧಿ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದಾಗ ಮಹಿಳೆಯೊಬ್ಬರು ತಮ್ಮ ಅಳಲನ್ನು ತೋಡಿಕೊಂಡ ಸಂದರ್ಭದ ವಿಡಿಯೊವನ್ನುಈ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಲು ತೆರಳಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಪ್ರತಿಪಕ್ಷಗಳ ನಿಯೋಗವನ್ನು ಕಾಶ್ಮೀರ ಸರ್ಕಾರ ವಾಪಸ್ ದೆಹಲಿಗೆ ಕಳುಹಿತ್ತು. ಆದರೆ ವಾಪಸ್ ತೆರಳುವ ವೇಳೆ ವಿಮಾನದಲ್ಲಿ ಕಾಶ್ಮೀರಿ ಮಹಿಳೆಯೊಬ್ಬರು ರಾಹುಲ್ ಗಾಂಧಿ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ ಎಂದು ಕನ್ನಡಫ್ರಭ ದಿನ ಪತ್ರಿಕೆ ವರದಿ ಮಾಡಿದೆ.
ಕಾಂಗ್ರೆಸ್ ವಕ್ತಾರೆ ರಾಧಿಕಾ ಖೇರ್ ಅವರು ಮಹಿಳೆಯ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಷೇರ್ ಮಾಡಿದ್ದು, ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಅಲ್ಲಿನ ಜನ ಹೇಗೆ ಬದುಕುತ್ತಿದ್ದಾರೆ ಎಂಬುದನ್ನು ಮಹಿಳೆ ವಿವರಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
कश्मीर का दर्द सुनिए… pic.twitter.com/FRyg1Chifg
— Radhika Khera (@Radhika_Khera) August 24, 2019
ರಾಹುಲ್ ಗಾಂಧಿ ಅವರು ಎದ್ದು ನಿಂತು ಮಹಿಳೆಯನ್ನು ಸಮಾಧಾನಪಡಿಸಲು ಯತ್ನಿಸುತ್ತಿದ್ದರೆ, ಇತರೆ ಕಾಂಗ್ರೆಸ್ ನಾಯಕರಾದ ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ ಹಾಗೂ ಕೆ ಸಿ ವೇಣುಗೋಪಾಲ್ ಅವರು ಸಮಾಧಾನದಿಂದ ಮಹಿಳೆಯ ಅಳಲನ್ನು ಆಲಿಸುತ್ತಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ 12 ಪ್ರತಿಪಕ್ಷಗಳ ನಾಯಕರ ನಿಯೋಗ 2019ರಲ್ಲಿ ಜಮ್ಮು ಮತ್ತು ಕಾಶ್ಮೀರ ಭೇಟಿಗಾಗಿ ಶ್ರೀನಗರಕ್ಕೆ ತೆರಳಿತ್ತು. ಆದರೆ ಪ್ರತಿಪಕ್ಷಗಳ ನಿಯೋಗವನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿಯೇ ತಡೆದ ಭದ್ರತಾ ಸಿಬ್ಬಂದಿ, ಅವರನ್ನು ವಾಪಸ್ ದೆಹಲಿಗೆ ಕಳುಹಿಸಿತ್ತು.
कश्मीरियों की क्या हालत कर दी है BJP सरकार ने आपको इस वीडियो से अंदाजा लग जाएगा। जब @RahulGandhi और अन्य विपक्षी नेता आज कश्मीर से वापस भेजे गए तो एक महिला अपना दर्द बयां करते रो पड़ी l
आप जश्न मनाते रहिए,
पर अगर थोड़ा इंसानियत दिखाएंगे तो कश्मीरियों के ये आंसू आपके दिखाई देंगे pic.twitter.com/P6bsCrVNlg— Indian Youth Congress (@IYC) August 24, 2019
ಒಟ್ಟಾರೆಯಾಗಿ ಹೇಳುವುದಾರೆ ವಿಮಾನದಲ್ಲಿ ಮಹಿಳೆಯೊಬ್ಬರು ರಾಹುಲ್ ಗಾಂಧಿಗೆ ತರಾಟೆ ತೆಗೆದುಕೊಂಡಿದ್ದಾರೆ ಎಂಬುದು ಸುಳ್ಳು. 2019 ರಲ್ಲಿ ಕೇಂದ್ರ ಸರ್ಕಾರ 370 ವಿಧಿಯನ್ನು ರದ್ದುಪಡಿಸಿ, ಇಂಟರ್ನೆಟ್ ಸ್ಥಗಿತಗೊಳಿಸಿ, ದಿಗ್ಭಂಧನ ಹೇರಿದ್ದ ಕ್ರಮವನ್ನು ಖಂಡಿಸಿ ಮಹಿಳೆಯೊಬ್ಬರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿರುವ ವಿಡಿಯೋವನ್ನು, ಬಲಪಂಥೀಯ ಪ್ರತಿಪಾದಕರು ಮತ್ತು BJP ಮುಖಂಡರು ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ಸುಳ್ಳು.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ: ಫ್ಯಾಕ್ಟ್ಚೆಕ್ : ನೀರಿನಲ್ಲಿ ಮುಳುಗಿ ಸತ್ತವರನ್ನು ಉಪ್ಪಿನಿಂದ ಮುಚ್ಚಿ ಬದುಕಿಸಲು ಸಾಧ್ಯವೇ?

