ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಬಗ್ಗೆ ಸುಳ್ಳು ಸುದ್ದಿ ಹರಡಿದ Zee News

ಪ್ರವಾದಿ ನಿಂದನೆ ಮಾಡಿದ ನೂಪರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಕನ್ನಯ್ಯ ಎಂಬ ವ್ಯಕ್ತಿಯೊಬ್ಬನನ್ನು ಇಬ್ಬರು ಮುಸ್ಲಿಂ ಮತಾಂಧರು ಹತ್ಯೆ ಮಾಡಿರುವ ಅಮಾನವೀಯ ಘಟನೆಯ ನಡುವೆಯೇ ಆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಝೀ ನ್ಯೂಸ್ ವರದಿ ಮಾಡಿದೆ.

ಝೀ ನ್ಯೂಸ್ ನ ಡಿಎನ್‌ಎ ಎನ್ನುವ ಕಾರ್ಯಕ್ರಮದಲ್ಲಿ ನಿರೂಪಕ “ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೊ ಅಥವಾ ಆತಂಕವಾದಿಗಳೊ” ಎಂದು ಪ್ರಶ್ನಿಸಿದ್ದಾರೆ. ಕನ್ನಯ್ಯನ್ನು ಕೊಂದ ಆರೋಪಿಗಳನ್ನು  ಕ್ಷಮಿಸಿದ್ದಾರೆ ಎಂದು ಹೇಳಿರುವ ಝೀ ನ್ಯೂಸ್‌ ವರದಿಯನ್ನು ಪರಿಶೀಲಿಸೋಣ.

Zee News falsely claimed Rahul Gandhi termed Udaipur killers “children” from Alt News on Vimeo.

ಫ್ಯಾಕ್ಟ್‌ಚೆಕ್ : 

ಝೀ ನ್ಯೂಸ್ ಮಾಡಿರುವ ಆಪಾದನೆಯನ್ನು ಪರಿಶೀಲಿಸಲು ರಾಹುಲ್ ಗಾಂಧಿ ಹಂತಕರನ್ನು ನನ್ನ ಮಕ್ಕಳು ಅವರನ್ನು ಕ್ಷಮಿಸಿದ್ದೇನೆ ಎಂದು ಹೇಳೀದ್ದಾರಯೇ ಎಂದು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ, ವಾಸ್ತವದಲ್ಲಿ ರಾಹುಲ್ ಗಾಂಧಿ ಉದಯಪುರದ ಹಂತಕರನ್ನು ಎಲ್ಲಿಯೂ ಮಕ್ಕಳು ಎಂದು ಕರೆದಿಲ್ಲ ಮತ್ತು ಅವರನ್ನು ಕ್ಷಮಿಸಿದ್ದೇನೆ ಎಂದು ಹೇಳೀಲ್ಲ. ಬದಲಿಗೆ “ಉದಯಪುರದಲ್ಲಿ ನಡೆದ ಭೀಕರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ ಕ್ರೌರ್ಯದಿಂದ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಶಿಕ್ಷೆಯಾಗಬೇಕು.ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ದಯವಿಟ್ಟು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಿ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಹಾಗಿದ್ದರೆ ಅವರು ನನ್ನ ಮಕ್ಕಳು ಅವರನ್ನು ನಾನು ಕ್ಷಮಿಸಿದ್ದೇನೆ ಎಂದು ಯಾರನ್ನು ಕುರಿತು ರಾಹುಲ್‌ ಗಾಂಧಿ ಹೇಳಿದ್ದಾರೆ ಎಂದು ಪರಿಶೀಲಿಸಿದಾಗ, ಕೇರಳಾದ ವಯನಾಡಿನಲ್ಲಿ ತಮ್ಮ ಕಚೇರಿಯ ಮೇಲೆ ಧಾಲಿ ನಡೆಸಿದ ಕೆವು SFI ನ ಕಾರ್ಯಕರ್ತರನ್ನು ಕುರಿತು ಮಾತನಾಡಿದ ಸಂದರ್ಭವನ್ನು ತಿರುಚಿ, ಉದಯಪುರದ ಕನ್ನಯ್ಯನನ್ನು ಹತ್ಯೆ ಮಾಡಿದ ಹಂತಕರ ಪರವಾಗಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ ಎಂದು Zee news ವರದಿ ಮಾಡಿದೆ.

ಈ ಕುರಿತು ಕಾಂಗ್ರೆಸ್ ಜಾಲತಾಣದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಟೆ ಆಕ್ರೋಶ ವ್ಯಕ್ತಪಡಿಸಿದ್ದು, ಎರಡೂ ವಿಡಿಯೋ ತುಣುಕುಗಳನ್ನು ಟ್ವೀಟ್ ಮಾಡಿದ್ದಾರೆ. ಸುಳ್ಳು ಸುದ್ದಿ ಪ್ರಕಟಿಸಿದ ಝಿ ನ್ಯೂಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾರೆ ರಾಹುಲ್ ಗಾಂಧಿ ಕೇರಳದ ತಮ್ಮ ಕಚೇರಿಯ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಅವರನ್ನು ಕ್ಷಮಿಸಿದ್ದೇನೆ ಎಂದು ಹೇಳೀವ ಹೇಳಿಕೆಯನ್ನು ಉದಯಪುರ್ ಕನ್ನಯ್ಯ ಅವರನ್ನು ಕೊಂದ ಹಂತಕರ ಪರವಾಗಿ ರಾಹುಲ್ ಗಾಂಧಿ ಮಾತನಾಡಿದ್ದಾರೆ ಎಂದು Zee News ತಿರುಚಿ ವರದಿ ಮಾಡಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ನೀರಿನಲ್ಲಿ ಮುಳುಗಿ ಸತ್ತವರನ್ನು ಉಪ್ಪಿನಿಂದ ಮುಚ್ಚಿ ಬದುಕಿಸಲು ಸಾಧ್ಯವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

One thought on “ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಬಗ್ಗೆ ಸುಳ್ಳು ಸುದ್ದಿ ಹರಡಿದ Zee News

  • August 18, 2022 at 11:07 am
    Permalink

    I was examining some of your content on this internet site and I think this internet site is rattling informative! Keep on posting.

    Reply

Leave a Reply

Your email address will not be published.

Verified by MonsterInsights