ಫ್ಯಾಕ್ಟ್‌ಚೆಕ್ : ಕಾಂಗ್ರೆಸ್ ಪಕ್ಷ ‘ಗುಪ್ತ ಭಯೋತ್ಪಾದಕ ಮುಸ್ಲಿಂ ಸಂಘಟನೆ’ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿಲ್ಲ

ಸುಬ್ರಮಣಿಯನ್ ಸ್ವಾಮಿ ಅವರು ಕಾಂಗ್ರೆಸ್ ಪಕ್ಷವನ್ನು ಗುಪ್ತ ಭಯೋತ್ಪಾದಕ ಮುಸ್ಲಿಂ ಸಂಘಟನೆ ಎಂದು ಕರೆದಿದ್ದಾರೆ ಎಂಬ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸುಬ್ರಮಣಿಯನ್ ಸ್ವಾಮಿ ಅವರು ಅಂತಹ ಹೇಳಿಕೆ ನೀಡಿದ್ದಾರೆಯೇ ಎಂದು ಆನ್‌ಲೈನ್‌ನಲ್ಲಿ ಸರ್ಚ್ ಮಾಡಿದಾಗ,  ಸ್ವಾಮಿ ಅವರು ಹಾಗೆ ಹೇಳಿದ್ದಾರೆ ಎಂದು ಖಚಿತಪಡಿಸಲು ನಮಗೆ ಯಾವುದೇ ವಿಶ್ವಾಸಾರ್ಹ ಪುರಾವೆಗಳು ಸಿಗಲಿಲ್ಲ.

ಆದರೆ, ಸುಬ್ರಮಣಿಯನ್ ಸ್ವಾಮಿ ಈ ಹಿಂದೆ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದರು. ದ್ವಾರಕಾ ಸಮುದ್ರ ಯಾತ್ರೆಗೆ ತಡೆ ಒಡ್ಡಿದ್ದಕ್ಕಾಗಿ ಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. 2011 ರಲ್ಲಿ, ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ಅಭಿಪ್ರಾಯಗಳಿಂದಾಗಿ ಕಾಂಗ್ರೆಸ್ ಮತ್ತು ಇಸ್ಲಾಮಿಕ್ ಭಯೋತ್ಪಾದಕರಿಂದ ಬೆದರಿಕೆಗಳನ್ನು ಬಂದಿವೆ ಎಂದು ಆಗಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ನ್ಯಾಯಾಲಯ ಮೊರೆ ಹೋಗುತ್ತೇನೆ ಎಂದಿದ್ದರು.

ಸುಬ್ರಮಣಿಯನ್ ಸ್ವಾಮಿ, ಜಿಹಾದಿ ಭಯೋತ್ಪಾದಕ ದಾಳಿಗಳಿಂದ ಭಾರತವು ತೀವ್ರವಾಗಿ ಪ್ರಭಾವಿತವಾಗಿದೆ ಎಂದು ಹೇಳಿದರು, ಅವರು ಇಸ್ಲಾಮಿಕ್ ಭಯೋತ್ಪಾದನೆಯನ್ನು ಎದುರಿಸಲು ‘ಸ್ಪಷ್ಟವಾದ’ ನೀತಿ ರೂಪಿಸುವಂತೆ ಕರೆ ನೀಡಿದರು.

ಒಟ್ಟಾರೆಯಾಗಿ ಹೇಳುವುದಾದರೆ, ಸುಬ್ರಮಣಿಯನ್ ಸ್ವಾಮಿ ಅವರು ಕಾಂಗ್ರೆಸ್ ಅನ್ನು ‘ಗುಪ್ತ ಭಯೋತ್ಪಾದಕ ಮುಸ್ಲಿಂ ಸಂಘಟನೆ’ ಎಂದು ಕರೆದಿದ್ದಾರೆ ಎಂದು ಹೇಳಲು ಯಾವುದೇ ಪುರಾವೆಗಳಿಲ್ಲ. ಆದರೆ, ಸುಬ್ರಮಣಿಯನ್ ಸ್ವಾಮಿ ಈ ಹಿಂದೆ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದರು. 2011 ರಲ್ಲಿ, ಸುಬ್ರಮಣಿಯನ್ ಸ್ವಾಮಿ ಅವರು ಕಾಂಗ್ರೆಸ್ ಮತ್ತು ಕೆಲ ಭಯೋತ್ಪಾದಕ ವ್ಯಕ್ತಿಗಳಿಂದ ನನಗೆ ಬೆದರಿಕೆ ಇದೆ ಎಂದು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕಾಂಗ್ರೆಸ್ ಪಕ್ಷವನ್ನು ‘ಗುಪ್ತ ಭಯೋತ್ಪಾದಕ ಮುಸ್ಲಿಂ ಸಂಘಟನೆ’ ಎಂದು ಸುಬ್ರಮಣಿಯನ್ ಸ್ವಾಮಿ ಎಲ್ಲಿಯೂ ಹೇಳಿದ ವರದಿಗಳು ಲಭ್ಯವಾಗಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: 1947 ರಿಂದಲೂ ಕಾಶ್ಮೀರಿಗಳು ವಿದ್ಯುತ್ ಬಿಲ್ ಪಾವತಿಸಿಲ್ಲ ಎಂಬುದು ಸುಳ್ಳು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights