ಫ್ಯಾಕ್ಟ್‌ಚೆಕ್: ಆಂಧ್ರದಲ್ಲಿ ಕೆಸರು ನೀರು ಕುಡಿದ ಪೊಲೀಸರು! ವಾಸ್ತವವೇನು?

BJP ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಜುಲೈ 2-3, 2022 ರಂದು ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ನಡೆಯಿತು. ಈ ಹಿನ್ನೆಲೆಯಲ್ಲಿ, ಪೊಲೀಸರು ಕೆಸರು ನೀರು ಕುಡಿಯುತ್ತಿದ್ದಾರೆ ಎಂದು ಪ್ರತಿಪಾದಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ ಸಿಬ್ಬಂದಿಗೆ ಎಳನೀರು ನೀಡಲು ಸಾಧ್ಯವಿಲ್ಲ ಎಂದು ಆರೋಪಿಸಿ ಪೊಲೀಸರು ಕುಡಿಯುವ ನೀರಿಗೂ ಪರದಾಡುತ್ತಿದ್ದಾರೆ ಎಂಬ ವ್ಯಂಗ್ಯವಾದ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

 

BJP ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಂದೂಬಸ್ತ್ ಗೆ ನಿಯೋಜಿಸಿದ್ದ ಪೊಲೀಸರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡದಷ್ಟು ಹೀನಾಯ ಪರಿಸ್ಥಿತಿಗೆ ತಲುಪಿದೆ ಎಂಬ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋದ ಸ್ಕ್ರೀನ್‌ಶಾಟ್ ಸಹಾಯದಿಂದ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ  ಪೋಸ್ಟ್‌ನ ಪ್ರತಿಪಾದನೆಯನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ಮಾಧ್ಯಮ ವರದಿಯು ಲಭ್ಯವಾಗಿಲ್ಲ. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಇಂತಹ ಘಟನೆ ನಡೆದಿದ್ದರೆ ಅದನ್ನು ಮುಖ್ಯವಾಹಿನಿಯ ಮಾಧ್ಯಮಗಳು ಪ್ರಸಾರ ಮಾಡುತ್ತಿದ್ದವು, ಆದರೆ ಅಂತಹ ಯಾವುದೇ ವರದಿಗಳು ಲಭ್ಯವಾಗಿಲ್ಲ.

ವಿಡಿಯೊ ಕುರಿತು ಮತ್ತಷ್ಟು ವಿವರಗಳನ್ನು ಪಡೆಯಲು  InVid tools ಬಳಸಿಕೊಂಡು, ವೈರಲ್ ವೀಡಿಯೊದಿಂದ ಕೀಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ. ಜುಲೈ 4, 2022 ರಂದು ಅದೇ ವೈರಲ್ ವೀಡಿಯೊದ ಮೂಲ ವಿಡಿಯೊ ಆವೃತ್ತಿಯನ್ನು  10TV ನ್ಯೂಸ್ ತೆಲುಗಿನ ಪರಿಶೀಲಿಸಿದ YouTube ಚಾನಲ್‌ ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೊ ಲಭ್ಯವಾಗಿದ್ದು “ಆಂದ್ರಪ್ರದೇಶದ ಭೀಮವರಂ ಪೊಲೀಸರು ನೀರಿನ ಕೊರತೆಯಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ”. ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಲಾಗಿದೆ.

ವೈರಲ್ ವೀಡಿಯೊದಲ್ಲಿ ಕಂಡುಬರುವ ಪೊಲೀಸ್ ಸಮವಸ್ತ್ರದಲ್ಲಿ, ಆಂಧ್ರಪ್ರದೇಶ ಪೊಲೀಸರು ಮತ್ತು ತೆಲಂಗಾಣ ಪೊಲೀಸರ ಸಮವಸ್ತ್ರದ ನಡುವೆ ನಾವು ಹೋಲಿಕೆ ಮಾಡಿದ್ದೇವೆ. ವೈರಲ್ ವೀಡಿಯೊದಲ್ಲಿ ಕಂಡುಬರುವ ಚಿಹ್ನೆಯು ಆಂಧ್ರಪ್ರದೇಶದ ಪೊಲೀಸ್ ಸಮವಸ್ತ್ರಕ್ಕೆ ಹೊಂದಿಕೆಯಾಗುತ್ತದೆ ಎಂದು ಹೋಲಿಕೆಯಿಂದ (ಕೆಳಗೆ) ಸ್ಪಷ್ಟವಾಗುತ್ತದೆ.

ಮತ್ತಷ್ಟು ಸರ್ಚ್ ನಡೆಸಿದಾಗ,  ಅಲ್ಲೂರಿ ಸೀತಾರಾಮರಾಜರ 125 ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಆಂಧ್ರಪ್ರದೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜುಲೈ 3, 2022 ರಂದು  30 ಅಡಿ ಕಂಚಿನ ಸ್ಮಾರಕವನ್ನು ಅನಾವರಣಗೊಳಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸಭೆಯಲ್ಲಿ ಭಾಗವಹಿಸಿದ್ದ ಪೊಲೀಸ್ ಸಿಬ್ಬಂದಿಗೆ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ಆರೋಪಿಸಿದರು. ನೀರಿನ ಕೊರತೆಯಿಂದಾಗಿ ಪೊಲೀಸರು ಮಳೆನೀರಿನಲ್ಲಿ ಕೈತೊಳೆದುಕೊಂಡಿದ್ದಾರೆ ಎಂದೂ ಲೇಖನ ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ,ಆಂದ್ರಪ್ರದೇಶದಲ್ಲಿ ಅಲ್ಲೂರಿ ಸೀತಾರಾಮರಾಜರ 125 ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ನಿಯೋಜನೆಗೊಂಡಿದ್ದ ಉಪಹಾರ ಸೇವಿಸುವ ಮೊದಲು ಕೈತೊಳೆಯಲು ನೀರಿನ ಸಮಸ್ಯೆ ಇದ್ದುದ್ದರಿಂದ ಮಳೆಯ ನೀರನ್ನು ಉಪಯೋಗಿಸಿದ್ದಾರೆ, ಇದನ್ನು ತೆಲಂಗಾಣದ ಪೊಲೀಸ್ ಸಿಬ್ಬಂದಿ  ಕೆಸರು ನೀರು ಕುಡಿಯುತ್ತಿದ್ದಾರೆ ಎಂದು ತೋರಿಸಲಾಗಿದೆ. ಆದರೆ ಈ ವೈರಲ್ ವಿಡಿಯೋ ಆಂಧ್ರಪ್ರದೇಶದ್ದು, ಇದನ್ನು ಇತ್ತೀಚಿನ ತೆಲಂಗಾಣದಲ್ಲಿ ನಡೆದ ಬಿಜೆಪಿಯ  ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಸಂಬಂಧಿಸಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ದಿಕ್ಕುತಪ್ಪಿಸುವಂತಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಸುಪ್ರೀಂ ಕೋರ್ಟ್ ಜಡ್ಜ್ ಸೂರ್ಯ ಕಾಂತ್ ಜೊತೆಯಲ್ಲಿ ಪತ್ರಕರ್ತರ ಔತಣ ಕೂಟ ! ವಾಸ್ತವವೇನು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights