ಫ್ಯಾಕ್ಟ್‌ಚೆಕ್ : ರಾಷ್ಟ್ರಪತಿ ಹುದ್ದೆಗೆ ಏರಿದ್ರೆ ನೂಪುರ್ ಶರ್ಮಾಳನ್ನು ಬಂಧನ ಮಾಡ್ತೀನಿ ಎಂದು ಸಿನ್ಹಾ ಹೇಳಿದ್ದು ನಿಜವೇ?

ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸಲು ಆದೇಶ ಹೊರಡಿಸಲಾಗುವುದು ಎಂದು ವಿರೋದ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಹೇಳಿದ್ದಾರೆ ಎನ್ನುವ ಸ್ಕ್ರೀನ್‌ಶಾಟ್‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫೇಸ್‌ಬುಕ್ ಮತ್ತು ಟ್ವಿಟರ್‌ಗಳಲ್ಲಿ ಈ ಹೇಳಿಕೆಯನ್ನು ವಿರೋದ ಪಕ್ಷಗಳ ಬೆಂಬಲಿತ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಹೇಳಿದ್ದಾರೆ ಎಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಹೇಳಿಕೆ ನಿಜವೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ನೂಪುರ್ ಶರ್ಮಾ, ಪ್ರವಾದಿ ಕುರಿತು ನಿಂದನಾತ್ಮಕ ಹೇಳಿಕೆಯ ನೀಡಿದ ನಂತರ ಉಂಟಾದ ವಿವಾದಕ್ಕೆ ಅವರು ಹೇಗೆ ಪ್ರತಿಕ್ರಿಯಿಸಿದ್ದಾರೆ ಎಂಬುದನ್ನು ನೋಡಲು ನಾವು ಸಿನ್ಹಾ ಅವರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಮತ್ತು ಸುದ್ದಿ ವರದಿಗಳನ್ನು ಪರಿಶೀಲಿಸಲಾಗಿದ್ದು , ಜೂನ್ 5 ರಂದು BJP ಪಕ್ಷವು ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಿದ ನಂತರ, ಸಿನ್ಹಾ ಅವರು ಟ್ವಿಟ್ಟರ್‌ನಲ್ಲಿ ಬಿಜೆಪಿಯ ಮಾಜಿ ವಕ್ತಾರರನ್ನು “ಫ್ರಿಂಜ್ ಎಲಿಮೆಂಟ್” ಎಂದು ಕರೆದಿದ್ದಾರೆ ಅಲ್ಲದೆ ಕೇಂದ್ರ ಸರ್ಕಾರವನ್ನು ಆಪಾದಿಸಿದ್ದಾರೆ.

ಶರ್ಮಾ ಅವರ ಹೇಳಿಕೆಯನ್ನು ಬಿಜೆಪಿ ನೇರವಾಗಿ ಒಪ್ಪಿಕೊಳ್ಳದಿರುವ ಬಗ್ಗೆ ಸಿನ್ಹಾ ಅವರು ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇಂತಹ ಹೇಳಿಕೆಗಳನ್ನು ನೀವು ಬೆಂಬಲಿಸುತ್ತೀರಾ ಎಂದು ಪ್ರಶ್ನಿಸುವ ಮೂಲಕ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜೂನ್ 6 ರಂದು ಮತ್ತೊಂದು ಟ್ವೀಟ್‌ನಲ್ಲಿ ಸಿನ್ಹಾ ಮತ್ತೊಮ್ಮೆ  ಪ್ರಧಾನಿ ಮೋದಿಯನ್ನು ಪ್ರಶ್ನಿಸಿದರು.

ಜೂನ್ 11 ರಂದು ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ಅಭಿಪ್ರಾಯದಲ್ಲಿ, ಭಾರತವು ಜಾಗತಿಕವಾಗಿ ಹೇಗೆ ಗೌರವವನ್ನು ಗಳಿಸಿದೆ ಎಂಬುದರ ಕುರಿತು ಸಿನ್ಹಾ ಬರೆದಿದ್ದಾರೆ ಆದರೆ ಶರ್ಮಾ ನೀಡಿದ ಹೇಳಿಕೆಗಳು ಭಾರತದ ಸ್ಥಾನಮಾನವನ್ನು ಹಾಳುಮಾಡಿದೆ ಎಂದಿದ್ದಾರೆ.

ಇತ್ತೀಚೆಗೆ, ಸಿನ್ಹಾ ಟ್ವಿಟ್ಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಮತ್ತು ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ವಿರುದ್ದ ಕೇಂದ್ರ ಸರ್ಕಾರ ನಡೆದುಕೊಂಡ ರೀತಿಗೆ ನೂಪುರ್ ಶರ್ಮಾ ಅವರ ಪರಿಸ್ಥಿತಿಯೊಂದಿಗೆ ಹೋಲಿಸಿದ್ದಾರೆ ಮತ್ತು ಅವರ ಹೇಳಿಕೆಗಳ ಬಗ್ಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವ ಬಗ್ಗೆ ಪ್ರಶ್ನಿಸಿದ್ದಾರೆ.

ನಾಲ್ಕು ವರ್ಷಗಳ ಹಿಂದಿನ ಟ್ವೀಟ್‌ಗೆ ಸಂಬಂಧಿಸಿದಂತೆ ಜುಬೈರ್ ಅವರನ್ನು ಜೂನ್ 27 ರಂದು ಬಂಧಿಸಲಾಯಿತು ಅವರಿಗೆ ಜಾಮೀನು ದೊರೆಯದೆ ಅಂದಿನಿಂದ ಬಂಧನದಲ್ಲಿದ್ದಾರೆ. ಅವರ ವಿರುದ್ಧ ಇನ್ನೂ ಹಲವು ಎಫ್‌ಐಆರ್‌ಗಳು ದಾಖಲಾಗಿವೆ.

ಆಂಗ್ಲ ಸುದ್ದಿ ನಿಯತಕಾಲಿಕೆ ಇಂಡಿಯಾ ಟುಡೇ 8 ಜುಲೈ 2022 ರಂದು ಪೋಸ್ಟ್ ಮಾಡಿದ ವರದಿಯ ಪ್ರಕಾರ, ಸಿನ್ಹಾ ಗುಜರಾತ್‌ನ ವಿಧಾನಸೌಧಕ್ಕೆ ಭೇಟಿ ನೀಡಿದ್ದರು ಮತ್ತು ಶರ್ಮಾ ಅವರನ್ನು ಬೆಂಬಲಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಕುರಿತು ಉದಯಪುರ ಮತ್ತು ಅಮರಾವತಿಯಲ್ಲಿ ನಡೆದ ಕೊಲೆಗಳ ಬಗ್ಗೆ ಮಾತನಾಡಿದರು.

ಇಲ್ಲಿ ಉಲ್ಲೇಖ ಮಾಡಲಾಗಿರುವ ಆಧಾರಗಳ ಮೇಲೆ ಹೇಳುವುದಾದರೆ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸಲು ಆದೇಶ ಹೊರಡಿಸಲಾಗುವುದು ಎಂದು ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಹೇಳಿದ್ದಾರೆ ಎನ್ನುವ ಯಾವುದೇ ಹೇಳಿಕೆಯು ಲಭ್ಯವಾಗಿಲ್ಲ ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾಗಿರುವ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಮಗುವಿಗೆ ಕಚ್ಚಿದ 30 ಸೆಕೆಂಡುಗಳಲ್ಲಿ ಸಾವನಪ್ಪಿದ ಹಾವು! ನಡೆದಿದ್ದೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights