ಫ್ಯಾಕ್ಟ್‌ಚೆಕ್ : ಪಂಜಾಬ್ CM ಭಗವಂತ್ ಮಾನ್ ಆಸ್ಪತ್ರೆಗೆ ದಾಖಲಾಗಿದ್ದ ಹಳೆಯ ಚಿತ್ರವನ್ನು ಇತ್ತೀಚಿನದ್ದು ಎಂದು ಹಂಚಿಕೆ

ಪಂಜಾಬ್ “ಸಿಎಂ ಭಗವಂತ್ ಮಾನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೊಟ್ಟೆಯ ಸೋಂಕಿನಿಂದ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಗವಂತ ಮಾನ್‌ಗಾಗಿ ಎರಡು ಪದಗಳನ್ನು ಬರೆಯಿರಿ” ಎಂದು ಪಂಜಾಬಿ ಭಾಷೆಯಲ್ಲಿ ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಫೇಸ್‌ಬುಕ್ ಬಳಕೆದಾರರೊಬ್ಬರು ಜುಲೈ 21 ರಂದು ಈ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಹಾಗಿದ್ದರೆ ಭಗವಂತ್ ಮಾನ್ ಅವರ ಆರೋಗ್ಯ ಹದಗೆಟ್ಟು ಆಸ್ತ್ರೆಗೆ ದಾಖಲಾಗಿದ್ದು ನಿಜವೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

 

ಫ್ಯಾಕ್ಟ್‌ಚೆಕ್ :

ಸಿಎಂ ಭಗವಂತ್ ಮಾನ್ ಅವರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ಅನ್ನು ಗೂಗಲ್ ರಿವರ್ಸ್ ಇಮೇಜ್ ಮೂಲಕ ಫೋಟೋವನ್ನು ಸರ್ಚ್ ಮಾಡಿದಾಗ ಅದೇ ಫೋಟೋದೊಂದಿಗೆ ಈ ಸುದ್ದಿ ಲಿಂಕ್  ನಾವು ಕಂಡುಕೊಂಡಿದ್ದೇವೆ. ಈ ವರದಿಯಲ್ಲಿ 01 ಆಗಸ್ಟ್ 2018 ರಂದು “ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ಸಂಸದ ಭಗವಂತ್ ಮಾನ್ ಅವರು ಹೊಟ್ಟೆಯ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಹೇಳಲಾಗಿದೆ.

01 ಆಗಸ್ಟ್ 2018 ರಂದು  “ಭಗವಂತ್ ಮಾನ್ ಅವರನ್ನು ಕಿಡ್ನಿ ಸ್ಟೋನ್ ಚಿಕಿತ್ಸೆಗಾಗಿ ಎಂದು  ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ನಂತರ ಕೇಜ್ರಿವಾಲ್, ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಭಗವಂತ್ ಮಾನ್ ಅವರ ಭೇಟಿಯಾಗಲು ಆಸ್ಪತ್ರೆಗೆ ಬಂದರು” ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಪಂಜಾಬ್‌ ಜನರಿಗೆ ಪವಿತ್ರವಾದ ‘ಕಾಲಿ ಬೇನ್‌’ ಜಲಾಶಯದ 22ನೇ ವಾರ್ಷಿಕೋತ್ಸವದ ಕಾರ್ಯಕ್ರಮಕ್ಕೆ ಸುಲ್ತಾನ್‌ಪುರದ ಲೋಧಿಗೆ ನಗರಕ್ಕೆ ಭೇಟಿ ನೀಡಿದ್ದ ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಅಲ್ಲಿನ ನೀರು ಕುಡಿದಿದ್ದರು. ಬಳಿಕ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಾನ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಜಲಾಶಯದ ನೀರು ಕಲುಷಿತವಾಗಿದ್ದರಿಂದ ಹೊಟ್ಟೆನೋವು ಸಂಭವಿಸಿರಬಹುದು ಎನ್ನಲಾಗಿದೆ.

 

ಕೆಲವು ದಿನಗಳ ಹಿಂದೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್  ಅವರ ಆರೋಗ್ಯ ಹಠಾತ್ ಹದಗೆಟ್ಟಿದ್ದು ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಇದಕ್ಕೆ ಪೂರಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರವೊಂದು ವೈರಲಾಗಿದ್ದು ಚಿತ್ರದಲ್ಲಿ ಭಗವಂತ್ ಮಾನ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದಾರೆ. ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ, ಇದು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿರುವ ಭಗವಂತ್ ಮಾನ್ ಅವರ ಚಿತ್ರ ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಆದರೆ  ವೈರಲ್ ಚಿತ್ರವು 2018 ರದ್ದ ಎಂದು ಖಚಿತವಾಗಿದೆ. ಕಿಡ್ನಿ ಸ್ಟೋನ್ ಚಿಕಿತ್ಸೆಗಾಗಿ ಭಗವಂತ್ ಮಾನ್ ಅವರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ (RML) ದಾಖಲಿಸಿದಾಗಿನ ಚಿತ್ರ ಇದಾಗಿದೆ. ಒಟ್ಟಾರೆಯಾಗಿ ಹೇಳುವುದಾದರೆ ಭಗವಂತ್ ಮಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ  ವೈರಲ್  ಚಿತ್ರವು 2018ರದ್ದು. ಕಿಡ್ನಿ ಸ್ಟೋನ್ ಚಿಕಿತ್ಸೆಗಾಗಿ ಭಗವಂತ್ ಮಾನ್ ಅವರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದಾಗಿನ ಚಿತ್ರವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಕುಡಿದ ಅಮಲಿನಲ್ಲಿ ವಧು ಬದಲಿಗೆ ಅತ್ತಿಗೆಯ ಕೊರಳಿಗೆ ಹಾರ ಹಾಕಿದ ವರ! ವಾಸ್ತವವೇನು ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights