ಫ್ಯಾಕ್ಟ್‌ಚೆಕ್ : ಭಾರತದ ರಾಷ್ಟ್ರಧ್ವಜವನ್ನು ಸುಡುತ್ತಿರುವ ಈ ವ್ಯಕ್ತಿಯ ಬಂಧನ ಇನ್ನೂ ಆಗಿಲ್ಲವೇ ?

ವ್ಯಕ್ತಿಯೊಬ್ಬರು ಭಾರತದ ರಾಷ್ಟ್ರಧ್ವಜವನ್ನು ಸುಟ್ಟು ಹಾಕುತ್ತಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಇಸ್ಟಾಗ್ರಾಮ್ ಪೋಸ್ಟ್ ಮೂಲಕ ಹಂಚಿಕೊಳ್ಳಲಾಗುತ್ತಿದೆ. ಧ್ವಜವನ್ನು ಸುಟ್ಟ ಕಿಡಿಗೇಡಿಯನ್ನು ಬಂಧಿಸುವಂತೆ ಪೋಸ್ಟ್‌ನಲ್ಲಿ ಒತ್ತಾಯಿಸಲಾಗಿದೆ. ಆದರೆ ಈತ ಎಲ್ಲಿಯವ?  ಏಕೆ ಈ ಕೃತ್ಯ ಎಸಗಿದ್ದಾನೆ ಎನ್ನುವ ಯಾವ ವಿವರಣೆಯೂ ಪೋಸ್ಟ್‌ನಲ್ಲಿ ಪ್ರಸ್ತಾಪಿಸಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಪೋಸ್ಟ್‌ನ ಫೋಟೋವನ್ನು ಗೂಗಲ್ ರಿವರ್ಸ್  ಇಮೇಜ್ ಸರ್ಚ್ ಮಾಡಿದಾಗ ‘ದಿ ನ್ಯೂಸ್ ಮಿನಿಟ್‌‘ ಘಟನೆಗೆ ಸಂಬಂಧಿಸಿದಂತೆ ಮಾಡಿರುವ ವರದಿಯೂ ಲಭ್ಯವಾಯಿತು. ಫೋಟೋಗಳಲ್ಲಿ ಧ್ವಜವನ್ನು ಸುಡುತ್ತಿರುವ  ವ್ಯಕ್ತಿಯು ವ್ಯವಸ್ಥೆಯ ವಿರುದ್ಧ ತನ್ನ ಹತಾಶೆಯನ್ನು ವ್ಯಕ್ತಪಡಿಸಲು ಹಾಗೆ ಮಾಡಿದ್ದಾನೆ ಎಂದು ವರದಿಯಾಗಿದೆ. ಈ ಘಟನೆ 2016 ರಲ್ಲಿ ತಮಿಳುನಾಡಿನಲ್ಲಿ ನಡೆದಿದೆ. ಹಲವು ಸುದ್ದಿ ಸಂಸ್ಥೆಗಳು ಘಟನೆಯನ್ನು ವರದಿ ಮಾಡಿವೆ. ಧ್ವಜವನ್ನು ಸುಡುತ್ತಿರುವ ಚಿತ್ರಗಳನ್ನು ತನ್ನ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಪೋಸ್ಟ್ ಮಾಡಿದ ನಂತರ ಈ ವ್ಯಕ್ತಿಯು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸುದ್ದಿ ಆಗಿದ್ದನ್ನು. ಈ ವರದಿಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಓದಬಹುದು.

ಕೃತ್ಯ ಎಸಗಿದ್ದ  ದಿಲೀಪನ್ ಮಹೇಂದ್ರನ್  ಎಂಬ ಈ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ರಾಷ್ಟ್ರದ ಗೌರವಕ್ಕೆ ಅವಮಾನ ತಡೆ ಕಾಯ್ದೆ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. 2016ರಲ್ಲಿ ದಿಲೀಪನ್ ಬಂಧನವೂ ಆಗಿದೆ. ಘಟನೆ ನಡೆದು 6ವರ್ಷ ಕಳೆದರೂ ಸಾಮಾಜಿಕ ಜಾಲತಾಣಗಳಲ್ಲಿ ಈ ಚಿತ್ರಗಳನ್ನು ಪೋಸ್ಟ್ ಮಾಡುತ್ತ, ಕಳೆದ ಮೂರು ವರ್ಷಗಳಿಂದ ಅವರನ್ನು ಬಂಧಿಸಿಲ್ಲ ಎಂದು ದಾರಿ ತಪ್ಪಿಸುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಈ ಫೋಟೋಗಳಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಸುಡುತ್ತಿರುವ ವ್ಯಕ್ತಿಯನ್ನು ಈಗಾಗಲೇ ಬಂಧಿಸಲಾಗಿದೆ,  ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಕೃತ್ಯ ಎಸಗಿದ ವ್ಯಕ್ತಿಯನ್ನು ಬಂಧಿಸಿಲ್ಲ, ಈತನ ಬಂಧನವಾಗುವವರೆಗೂ ಶೇರ್ ಮಾಡಿ ಎನ್ನುವ ಪೋಸ್ಟ್‌ಗಳು ಸಾಮಾನ್ಯವಾಗಿ ಕಾಣುತ್ತಿರುತ್ತವೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಮೋದಿ, ಶಿಂಧೆ ಮತ್ತು ದ್ರೌಪದಿ ಮುರ್ಮು ಅವರ ಹರೆಯದಲ್ಲಿನ ಫೋಟೋ ಎಂಬುದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights