ಫ್ಯಾಕ್ಟ್‌ಚೆಕ್ : ಧರ್ಮ ಒಡೆಯುವ ಕೆಲಸ ಮಾಡಿದಕ್ಕೆ ಪಶ್ಚಾತಾಪವಿದೆ ಎಂದು ಸಿದ್ದರಾಮಯ್ಯ ಹೇಳಿದರೆ?

ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋದ ಪಕ್ಷದ ನಾಯಕರಾದ ಸಿದ್ದರಾಮಯ್ಯ ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿದ್ದರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಮರ ಬಿದ್ದು ಇಬ್ಬರು ಮೃತಪಟ್ಟ ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಬಾಳೂರು ಗ್ರಾಮದ ರೈತರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಮೃತರ ಕುಟುಂಬಕ್ಕೆ ಶೀಘ್ರವೇ ಪರಿಹಾರ ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಂತರ ಬಾಳೆಹೊನ್ನೂರಿನ ಶ್ರೀ ಜಗದ್ಗುರು ರಂಬಾಪುರಿ ವೀರಸಿಂಹಾಸನ ಮಹಾ ಸಂಸ್ಥಾನ ಪೀಠಕ್ಕೆ ಭೇಟಿ ನೀಡಿ ಶ್ರೀ ಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದಿರುವ ವರದಿಗಳಾಗಿವೆ.

ಸದ್ಯ ಮಠದ ಸ್ವಾಮೀಜಿಯವರು ಸಿದ್ದರಾಮಯ್ಯ ಮತ್ತು ತಮ್ಮ ನಡುವೆ ನಡೆದ ಮಾತುಕತೆಯನ್ನು ಮಾಧ್ಯಮಗಳ ಮುಂದೆ ತೆರೆದಿಟ್ಟಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕೆಲವರ ಮಾತು ಕೇಳಿ ಧರ್ಮ ಒಡೆಯುವ ಕೆಲಸ ಮಾಡಿದೆ : ರಂಭಾಪುರಿ ಪೀಠದ ವೀರ ಸೋಮೇಶ್ವರ ಸ್ವಾಮೀಜಿ ಹೇಳಿಕೆ 

ತಮ್ಮ ರಾಜಕೀಯ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿದ್ದಲ್ಲದೆ, ರಂಭಾಪುರಿ ಸ್ವಾಮೀಜಿಗಳ ಆಶೀರ್ವಾದವನ್ನೂ ಪಡೆದುಕೊಂಡಿದ್ದಾರೆ. ಈಗ ಸ್ವಾಮಿಗಳು ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗದೆ.

ಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ರಂಭಾಪುರಿ ಸ್ವಾಮೀಜಿಗಳ ಮುಂದೆ ಪಶ್ಚಾತ್ತಾಪದ ಮಾತುಗಳನ್ನೂ ಆಡಿದ್ದಾರೆ. ಲಿಂಗಾಯತ ಧರ್ಮ ಒಡೆಯುವ ವಿಚಾರದ ಬಗ್ಗೆ ಮಾತನಾಡುತ್ತಾ, ಧರ್ಮ ಒಡೆಯುವುದು ನನ್ನ ಉದ್ದೇಶವಾಗಿರಲಿಲ್ಲ. ಕೆಲವರು ನನ್ನನ್ನು ದಾರಿ ತಪ್ಪಿಸಿದರು. ಈ ಸಾಹಸಕ್ಕೆ ಕೈ ಹಾಕಿ ಬಹಳ ದೊಡ್ಡ ತಪ್ಪು ಮಾಡಿದೆ ಎಂದು ಅವರು ಹೇಳಿದ್ದಾರೆ. ಇನ್ನೆಂದೂ ನಾನು ಧರ್ಮದ ವಿಚಾರದ ಬಗ್ಗೆ ಹೋಗುವುದಿಲ್ಲ. ರಾಜ್ಯದ ಜನರ ಹಾಗೂ ಅಭಿವೃದ್ಧಿಯ ಬಗ್ಗೆ ಮಾತ್ರ ಆದ್ಯತೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿರುವುದಾಗಿ ರಂಭಾಪುರಿ ಪೀಠದ ವೀರ ಸೋಮೇಶ್ವರ ಸ್ವಾಮೀಜಿ ಹೇಳಿದ್ದಾರೆ. ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ರಂಭಾಪುರಿ ಪೀಠದ ವೀರ ಸೋಮೇಶ್ವರ ಸ್ವಾಮೀಜಿ ಹೇಳಿಕೆಗೆ, ಸಿದ್ದರಾಮಯ್ಯ ಸ್ಪಷ್ಟನೆ :

ನಾನು ರಂಭಾಪುರಿ ಶ್ರೀಗಳ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ, ಪಶ್ಚಾತ್ತಾಪ ಪಟ್ಟಿಲ್ಲ, ಏನಾಯ್ತು ಅಂತ ವಿವರಿಸಿದ್ದೇನೆ ಎಂದು ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ  ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ತಿರುಚಿ ತಪ್ಪಾಗಿ ಅರ್ಥೈಸಿ ವರದಿ ಮಾಡಿದ್ದಾರೆ ಎಂದಿದ್ದಾರೆ. ಈ ಕುರಿತು ಪಬ್ಲಿಕ್  ಟಿವಿ ವರದಿ ಮಾಡಿದೆ.

ನಾನು ಯಾವುದೇ ಪಶ್ಚಾತಾಪದ ಮಾತುಗಳನ್ನು ಆಡಿಲ್ಲ. ನಾವು ಲಿಂಗಾಯಿತ ಧರ್ಮ ಮಾಡುವಾಗ ಏನೇನು ಮಾಡಿದ್ದೇನೆ ಅಂತ ಹೇಳಿದ್ದೀನಿ ಅಷ್ಟೇ. ಇದು ಅಪಪ್ರಚಾರ ಆಗಿದೆ. ಧರ್ಮದ ಬಗ್ಗೆ ನಾನೇನು ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ. ಶ್ಯಾಮನೂರು ಶಿವಶಂಕರಪ್ಪ ಅವರು ವೀರಶೈವ ಧರ್ಮ ಮಾಡಿ ಅಂತ ಅರ್ಜಿ ಕೊಟ್ಟರು ಆಗಿನಿಂದ ಇದು ಶುರುವಾಯ್ತು ಅಷ್ಟೇ ಎಂದು ಹೇಳಿದರು ಎಂದು ವರದಿಯಾಗಿದೆ.

ಒಟ್ಟಾರೆಯಾಗಿ ಹೇಳುವುದಾರೆ ವಿರೋದ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ರಂಭಾಪುರಿ ಪೀಠದ ವೀರ ಸೋಮೇಶ್ವರ ಸ್ವಾಮೀಜಿ ನಡುವೆ ನಡೆದಿರುವ ಮಾತುಕತೆಯಲ್ಲಿ ಏನೆಲ್ಲ ನಡೆದಿದೆ ಎಂದು ಮತ್ತಷ್ಟು ತನಿಖೆಯ ಮೂಲಕ ಸತ್ಯಾಂಶ ಹೊರಬರಬೇಕಿದೆ. ಸದ್ಯಕ್ಕೆ ಸೋಮೇಶ್ವರ ಸ್ವಾಮೀಜಿ ನೀಡಿರುವ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು ಮುಂದೆ ವೀರಶೈವ ಧರ್ಮದ ವಿಚಾರ ಹೇಗೆ ರಾಜಕೀಯ ತಿರುವು ಪಡೆಯುತ್ತದೆ ಎಂದು ಕಾದು ನೋಡಬೇಕಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಗಾಂಧಿ ಚಿತ್ರಕ್ಕೆ ಗುಂಡು ಹಾರಿಸಿ ನಾಥುರಾಮ್ ಗೋಡ್ಸೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿಡಿಯೋ ಇತ್ತೀಚಿನದಲ್ಲ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights