ಫ್ಯಾಕ್ಟ್‌ಚೆಕ್ : ಮಂಗಳೂರಿನಲ್ಲಿ ನಡೆದ ಮೋದಿ ಕಾರ್ಯಕ್ರಮಕ್ಕೆ ಯು.ಟಿ.ಖಾದರ್ ಭಾಗವಹಿಸಿದ್ದು ನಿಜವೇ ?

ಮಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ 3,800 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿರುವ ಅವರು, ‘ಜನರ ಜೀವನಮಟ್ಟ ಸುಧಾರಿಸಲು ಹಾಗೂ ದೇಶದ ಆರ್ಥಿಕ ಪ್ರಗತಿ ಸಾಧಿಸಲು ಡಬಲ್ ಎಂಜಿನ್ ಸರ್ಕಾರ ನೆರವಾಗುತ್ತಿದೆ. ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಹೊಸ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ’ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ರಾಜ್ಯದ BJP ಯ ನಾಯಕರಾದ ಮಾಜಿ ಮುಖ್ಯಮಂತ್ರಿ B S ಯಡ್ಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, BJP ಯ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಸಂಸದ ಪ್ರಹ್ಲಾದ್ ಜೋಶಿ ಇನ್ನು ಮುಂತಾದ ಪ್ರಮುಖರು ಭಾಗವಹಿಸದ್ದರು  ಇದನ್ನು ಎಲ್ಲಾ ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನ ಶಾಸಕರಾದ ಯು.ಟಿ.ಖಾದರ್ ಭಾಗವಹಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟೊಂದು ವೈರಲ್ ಆಗಿದೆ. ” ದಿನವಿಡೀ ಮೋದಿಯನ್ನು ಬಯ್ಯುವ ಖಾದರ್ ಪಾಸ್ ಮಾಡಿ ಒಳಗೆ ಬಂದಿದ್ದಾನೆ” ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಮಂಗಳೂರಿನ ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಕಾಂಗ್ರೆಸ್‌ನ ಶಾಸಕರಾದ ಯು.ಟಿ.ಖಾದರ್ ಭಾಗವಹಿಸಿದ್ದರೆ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಪ್ರಧಾನಿ ನರೇಂದ್ರ ಮೋದಿಯವರ ಭಾಗವಹಿಸಿದ್ದ ಮಂಗಳೂರಿನ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಶಾಸಕರಾದ ಯು.ಟಿ.ಖಾದರ್ ಭಾಗವಹಿಸಿದ್ದರೆ ಎಂದು ತಿಳಿಯಲು ಸುದ್ದಿ ಮಾಧ್ಯಮಗಳ ವರದಿಗಳನ್ನು ಪರಿಶೀಲಿಸಿದಾಗ ಯಾವುದೇ ಮಾಧ್ಯಮಗಳಲ್ಲಿಯೂ ಯು.ಟಿ.ಖಾದರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಗ್ಗೆ ವರದಿಗಳು ಕಂಡುಬಂದಿಲ್ಲ. ಮತ್ತಷ್ಟು ಪರಿಶೀಲನೆ ಮಾಡಿದಾಗ ಸೆಪ್ಟಂಬರ್ 2ರಂದು ಖಾದರ್ ಅವರಿಗೆ ಕೋವಿಡ್ ಪಾಸಿಟೀವ್‌ ಧೃಡಪಟ್ಟಿದೆ ಎಂಬ ಪ್ರಜಾವಾಣಿ ವರದಿ ಲಭ್ಯವಾಯಿತು.

ವಿಧಾನಸಭೆಯ ವಿರೋಧಪಕ್ಷದ ಉಪನಾಯಕ ಯು.ಟಿ.ಖಾದರ್ ಗೆ ಕೋವಿಡ್ ದೃಢಪಟ್ಟಿದೆ. ಅವರು ಮೂರು ದಿನಗಳ ಕಾಲ ತಮ್ಮ ಎಲ್ಲಾ ನಿಗದಿತ ಕಾರ್ಯಕ್ರಮಗಳು ರದ್ದುಪಡಿಸಿದ್ದಾರೆ. ಎಂದು ಪ್ರಜಾವಾಣಿ ಮಾಡಿದ ವರದಿ ಲಭ್ಯವಾಗಿದೆ.

ಯು.ಟಿ.ಖಾದರ್ ಅವರ ಆಪ್ತ ಕಾರ್ಯದರ್ಶಿ ಪ್ರತಿಕ್ರಿಯೆ :

ಯು.ಟಿ.ಖಾದರ್ ಅವರ ಆಪ್ತ ಕಾರ್ಯದರ್ಶಿಯವರನ್ನು ಸಂಪರ್ಕಿಸಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಪೋಸ್ಟ್‌ ಬಗ್ಗೆ  ವಿಚಾರಿಸಿದಾಗ ” ಯು.ಟಿ. ಖಾದರ್ ಅವರು ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿರುವ ಸುದ್ದಿ ಸುಳ್ಳು, ಖಾದರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಕ್ಷೇತ್ರದ ಶಾಸಕರು ಪ್ರೋಟೋಕಾಲ್ ಪ್ರಕಾರ ಜಿಲ್ಲಾಡಳಿತ ಅಥವಾ ಪೊಲೀಸ್‌ ಇಲಾಖೆ ಪಾಸನ್ನು ಸಿದ್ದಪಡಿಸಿರಬಹುದು, ಅದನ್ನ ಹಂಚಿಕೊಂಡು ಖಾದರ್ ಅವರು ಮೋದಿ ಕಾರ್ಯಕ್ರಮದಲ್ಲಿ ಭಾಗವಸಿದ್ದಾರೆ ಎಂದು ಸುಳ್ಳು ಪೋಸ್ಟ್‌ಅನ್ನು ಹಂಚಿಕೊಂಡಿರಬುಹುದು” ಎಂದರು.

ಪೋಸ್ಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಕಾಂತ್ ಎಂಬ ಮಂಗಳೂರಿನ ಯುವಕ “ನಮ್ಮ ಪ್ರಧಾನಿ ಮಂಗಳೂರಿಗೆ ಬಂದು ಜನರ ಜೀವನಮಟ್ಟ ಸುಧಾರಿಸಲು ಹಾಗೂ ದೇಶದ ಆರ್ಥಿಕ ಪ್ರಗತಿ ಸಾಧಿಸಲು ಡಬಲ್ ಎಂಜಿನ್ ಸರ್ಕಾರ ನೆರವಾಗುತ್ತಿದೆ. ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಹೊಸ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ’ ಎಂದು ಹೇಳಿದ್ದಾರೆ. ಆದರೆ ಈ ಹಿಂದೆ (2014ರಲ್ಲಿ) ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದರು, ಅದೆಲ್ಲಿ ಎಂದು ಪ್ರಶ್ನಿಸಿದ್ದಾರೆ. BJP ಯ IT Cell ಮತ್ತು ಬೆಂಬಲಿಗರು ಇಂತಹ ಸುಳ್ಳುಗಳನ್ನು ಹರಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ನಿಲ್ಲಿಸಲಿ ಎಂದು ಪ್ರತಿಕ್ರಿಯಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾರೆ, ಮಂಗಳೂರಿನಲ್ಲಿ ನಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಶಾಸಕರಾದ ಯು.ಟಿ.ಖಾದರ್ ಭಾಗವಹಿಸಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ಸುಳ್ಳು.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: ವಾಹನ ಸವಾರರು 12 ಗಂಟೆಗಳ ಒಳಗೆ ವಾಪಸ್ಸಾದರೆ ಟೋಲ್ ಶುಲ್ಕ ಫ್ರಿ ಎಂಬುದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights