ಫ್ಯಾಕ್ಟ್‌ಚೆಕ್ : ಈ ಮೇಘ ಸ್ಪೋಟ ಬೆಂಗಳೂರಿನಲ್ಲಿ ಸಂಭವಿಸಿದ್ದು ನಿಜವೇ?

ಇತ್ತೀಚೆಗೆ ಬೆಂಗಳೂರಿನಲ್ಲಿ ಸೆರೆಹಿಡಿಯಲಾದ ಮೇಘಸ್ಫೋಟದ ದೃಶ್ಯಗಳು ಎಂದು ಹೇಳುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೈರಲ್ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಮೇಘಸ್ಫೋಟದ ವೈರಲ್ ವಿಡಿಯೋ ನಿಜವೇ ಪರಿಶೀಲಿಸಿ ಎಂದು ನಮ್ಮ ಏನ್‌ಸುದ್ದಿ.ಕಾಂ ವಾಟ್ಸಾಪ್ ಗೆ ಹಲವು ಮನವಿ ಸಂದೇಶಗಳು ಬಂದಿದ್ದು, ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ , 25 ಫೆಬ್ರವರಿ 2020 ರಂದು ಕೇನ್ ಆರ್ಟಿ ಎಂಬ ಛಾಯಾಗ್ರಾಹಕ ಮಾಡಿದ ಫೇಸ್‌ಬುಕ್ ಪೋಸ್ಟ್‌ನಲ್ಲಿ ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವೀಡಿಯೊ ಕಂಡುಬಂದಿದೆ. ಕೇನ್ ಆರ್ಟಿ ಈ ವೀಡಿಯೊವನ್ನು ಪ್ರಕಟಿಸಿ, “ಆಸ್ಟ್ರೇಲಿಯಾದ ಪರ್ತ್ ವಿಮಾನ ನಿಲ್ದಾಣದ ಬಳಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ” ಎಂದು ಬರೆದಿದ್ದಾರೆ.

‘ಡೈಲಿ ಮೇಲ್’ ಸೇರಿದಂತೆ ಹಲವಾರು ಹವಾಮಾನ ಸುದ್ದಿ ವೆಬ್‌ಸೈಟ್‌ಗಳು ಛಾಯಾಗ್ರಾಹಕ ಕೇನ್ ಆರ್ಟಿಯ ವೀಡಿಯೊಗೆ ಮನ್ನಣೆ ನೀಡುವ ಲೇಖನಗಳನ್ನು ಪ್ರಕಟಿಸಿದವು. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವನ್ನು ಆಸ್ಟ್ರೇಲಿಯಾ ಮೂಲದ ಕೇನ್ ಆರ್ಟಿ ಎಂಬ ಛಾಯಾಗ್ರಾಹಕ ಟೈಮ್-ಲ್ಯಾಪ್ಸ್ ವೈಶಿಷ್ಟ್ಯವನ್ನು ಬಳಸಿಕೊಂಡು 2020 ರಲ್ಲಿ ಆಸ್ಟ್ರೇಲಿಯಾದ ಪರ್ತ್ ವಿಮಾನ ನಿಲ್ದಾಣದ ಬಳಿ ವೀಡಿಯೊವನ್ನು ಸೆರೆಹಿಡಿಯಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯ ಈ ವಿಡಿಯವನ್ನು ಬೆಂಗಳೂರಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: ಸಮುದ್ರ ಮಧ್ಯದಲ್ಲಿ ದೈತ್ಯಾಕಾರದ ಹಾವು ಹೆಡೆ ಎತ್ತಿರುವುದು ನಿಜವಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights