ಫ್ಯಾಕ್ಟ್‌ಚೆಕ್ : ಸ್ವಾಮಿ ವಿವೇಕಾನಂದರ ಪ್ರತಿಮೆಗೆ ರಾಹುಲ್ ಗಾಂಧಿ ನಮನ ಸಲ್ಲಿಸದೆ ಅಗೌರವ ತೋರಿದರೆ ?
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರು ಶನಿವಾರ ದೇಶದ್ರೋಹದ ಆರೋಪದ ಜೊತೆಗೆ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಅಗೌರವ ತೋರಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಮಾಡಿದ್ದಾರೆ.
Joined #Janaspandana program in Bengaluru to commemorate PM @narendramodi Ji & CM @BSBommai Ji led double engine Government’s development and welfare initiatives in the state of Karnataka. pic.twitter.com/aZK4gi86Ps
— Smriti Z Irani (@smritiirani) September 10, 2022
ದೊಡ್ಡಬಳ್ಳಾಪುದಲ್ಲಿ ನಡೆದ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸ್ಮೃತಿ ಇರಾನಿ ಅವರು, “ರಾಹುಲ್ ಗಾಂಧಿ ತಮ್ಮ ಹೋರಾಟದ ಬಗ್ಗೆ ಹೇಳಿದ್ದಾರೆ. ಆವರ ಹೋರಾಟ ಈಗ ಭಾರತದ ವಿರುದ್ಧವಾಗಿದೆ. ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯ ಪಾತ್ರ ನಿಮಗೆ ಗೊತ್ತಿದೆ. ಈಗ, ಹೋರಾಟ ಒಂದು ರಾಜಕೀಯ ಪಕ್ಷ ಮತ್ತು ಇನ್ನೊಂದು ಪಕ್ಷದ ನಡುವೆ ಅಲ್ಲ. ಇದು ಭಾರತದ ರಾಜ್ಯದ ರಚನೆಯ ವಿರುದ್ಧ. ಎಂದು ಇರಾನಿ ಕಿಡಿಕಾರಿದ್ದಾರೆ.
ರಾಹುಲ್ ಗಾಂಧಿ ಸ್ವಾಮಿ ವಿವೇಕಾನಂದ ಪ್ರತಿಮೆಗೆ ಅಗೌರವ ತೋರಿಲ್ಲ:
“ರಾಹುಲ್ ಅವರು ತಮ್ಮ ಕುಟುಂಬದ ಅನುಯಾಯಿಗಳಲ್ಲದ ಕಾರಣ ಕನ್ಯಾಕುಮಾರಿಯಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿಲ್ಲ. ಅವರು ದೇಶದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಫೋಟೋಗಳನ್ನು ಪ್ರಚಾರದಿಂದ ತೆಗೆದುಹಾಕಿದ್ದಾರೆ ಎಂದು ರಾಹುಲ್ ಕುರಿತು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ “ಸಿಲ್ಲಿ ಸೋಲ್ ಯಾವಾಗಲೂ ಸುಳ್ಳು ಹೇಳುತ್ತದೆ ಎಂದು ಹೇಳಿದೆ.
Chal Jhoothi…
इतना 'Silly' झूठ बोलते हुए शर्म नही आती? pic.twitter.com/CrRuBwIo4G— Srinivas BV (@srinivasiyc) September 12, 2022
ಯೂತ್ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀನಿವಾಸ್ BV ಅವರು ಟ್ವೀಟ್ ಮಾಡಿದ್ದು ಸ್ಮೃತಿ ಇರಾನಿ ಇಷ್ಟೋಂದು ಬಾಲಿಶವೇ ನೀವು, ನಾಚಿಕೆಯಾಗುವುದಿಲ್ಲವೇ ನಿಮಗೆ ಎಂದು ರಾಹುಲ್ ಗಾಂಧಿ ಕುರಿತ ಸ್ಮೃತಿ ಇರಾನಿ ಹೇಳಿಕೆಗೆ ತೀಕ್ಷ್ಣವಾಗಿ ಕುಟುಕಿದ್ದಾರೆ.
ಕನ್ಯಾಕುಮಾರಿಯಿಂದ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರೊಂದಿಗೆ ಸ್ವಾಮಿ ವಿವೇಕಾನಂದರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿರುವ ವಿಡಿಯೋವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದೆ. ಹಾಗಾಗಿ ರಾಹುಲ್ ಗಾಂಧಿ ವಿವೇಕಾನಂದರ ಪ್ರತಿಮೆಗೆ ಗೌರವ ನಮನ ಸಲ್ಲಿಸಿರುವುದು ಸ್ಪಷ್ಟವಾಗಿದೆ.
ಒಟ್ಟಾರೆಯಾ ಹೇಳುವುದಾದರೆ, ರಾಜ್ಯ BJP ಸರ್ಕಾರದ ಸಾಧನೆಯನ್ನು ಜನರ ಮುಂದಿಡಲು ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸ್ಮೃತಿ ಇರಾನಿ, ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಮುಂದಾಳತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿಯಲ್ಲಿರುವ ಸ್ವಾಮಿ ವಿವೇಕಾನಂದ ಪ್ರತಿಮೆಗೆ ಅಗೌರವ ತೋರಿದ್ದಾರೆ ಎಂದು ತಪ್ಪಾಗಿ ಆರೋಪ ಮಾಡಿದ್ದಾರೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: ವ್ಯಕ್ತಿಯ ಮೃತ ದೇಹವನ್ನು ಎಳೆದೊಯ್ಯುತ್ತಿರುವ ಮೊಸಳೆಯ ವಿಡಿಯೊ ಬಿಹಾರದ್ದಲ್ಲ

