ಫ್ಯಾಕ್ಟ್‌ಚೆಕ್: ಸ್ಮೃತಿ ಇರಾನಿ ತಮ್ಮ ಲ್ಯಾಪ್‌ಟಾಪ್‌ನಲ್ಲಿ ಭಾರತ್ ಜೋಡೋ ಯಾತ್ರೆ ನೋಡುತ್ತಿದ್ದರೆ?

ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯಾತ್ರೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಅದೇ ಸಂದರ್ಭದಲ್ಲಿ ಭಾರತ ಜೋಡೊ ಯಾತ್ರೆಯದ್ದು ಎನ್ನಲಾದ ಹಲವು ಫೋಟೊಗಳು ಹರಿದಾಡುತ್ತಿವೆ. ಅದರಲ್ಲಿ ‘ಭಾರತ್ ಜೋಡೋ ಯಾತ್ರೆ’ಯ ನೇತೃತ್ವ ವಹಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಫೋಟೋವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನೋಡುತ್ತಿದ್ದಾರೆ ಎನ್ನುವ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಫೋಟೋವನ್ನು ವೈರಲ್ ಮಾಡಲಾಗಿದೆ. ಇರಾನಿ ಅವರು ರಾಹುಲ್ ಗಾಂಧಿಯವರ ಪ್ರಚಾರದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಿಕೊಂಡು ಫೋಟೋನ್ನು ಹಂಚಿಕೊಂಡಿದ್ದಾರೆ.

ಭಾರತದ ಪ್ರವಾಸದಲ್ಲಿ ಇರುವ ಇರಾನಿ ರಾಹುಲ್ ಗಾಂಧಿ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಫೇಸ್‌ಬುಕ್‌ನಲ್ಲಿ ಫೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಈ ಫೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಸ್ಮೃತಿ ಇರಾನಿ ಫೋಟೋಗಳನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ಡಿಸೆಂಬರ್ 8, 2020 ರಂದು ಸ್ಮೃತಿ ಇರಾನಿ ಅವರ ಅಧಿಕೃತ ಪ್ರೊಫೈಲ್ ನಲ್ಲಿ ಅಪ್‌ಲೋಡ್ ಮಾಡಿದ Instagram ಪೋಸ್ಟ್‌ನಲ್ಲಿ ಮೂಲ ಫೋಟೋಗಳು ಕಂಡುಬಂದಿವೆ. ಈ ಫೋಟೋಗಳಿಗೆ  “pandemic mornings” ಎಂದು ಶೀರ್ಷಿಕೆ ನೀಡಿದ್ದಾರೆ.

 

View this post on Instagram

 

A post shared by Smriti Irani (@smritiiraniofficial)

ಪೋಸ್ಟ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೋವನ್ನು ಸ್ಮೃತಿ ಇರಾನಿಯವರು 2020ರಲ್ಲಿ ಕೊರೋನಾ ಸಂದರ್ಭದಲ್ಲಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಫೊಟೋದಿಂದ ತೆಗೆಯಲಾಗಿದ್ದು, ಅವರ ಮೂಲ ಪೋಟೋವನ್ನು ಎಡಿಟ್ ಮಾಡಿ, ಟೇಬಲ್ ಮೇಲೆ ಇರುವ ಗಾಜಿನ ಲೋಟ ಮತ್ತು ಲ್ಯಾಪ್ ಟಾಪ್‌ನಲ್ಲಿರುವ ಚಿತ್ರಕ್ಕೆ ರಾಹುಲ್ ಗಾಂಧಿಯ ಫೋಟೋವನ್ನು ಸೇರಿಸುವ ಮೂಲಕ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ. ಮೂಲ ಚಿತ್ರದಲ್ಲಿ ಅವರು ಬೇರೆ ಏನನ್ನೋ ನೋಡುತ್ತಿದ್ದಾರೆಯೆ ಹೊರತು ರಾಹುಲ್ ಗಾಂಧಿ ಚಿತ್ರವನ್ನಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, 2020ರಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್‌ ಮಾಡಲಾದ ಪೋಟೋವನ್ನು ತಿರುಚಿ ಬಾರತ್ ಜೋಡೋ ಯಾತ್ರಯ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ : ಬೂಮ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ಫೋಟೋ ತೆಗೆಯುವ ವೇಳೆ ಕ್ಯಾಮರಾದ ಕ್ಯಾಪ್ ತೆಗೆದಿರಲಿಲ್ಲವೇ ? ಈ ಸ್ಟೋರಿ ಓದಿ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights