ಫ್ಯಾಕ್ಟ್‌ಚೆಕ್ : ನಮೀಬಿಯಾದಿಂದ ಭಾರತಕ್ಕೆ ಬಂದ ಚೀತಾಗಳಿಂದ ದಾಳಿ ನಡೆದಿದೆ ಎಂಬುದು ಎಷ್ಟು ಸತ್ಯ ?

2022 ರ ಸೆಪ್ಟೆಂಬರ್ 17 ರಂದು ನಮೀಬಿಯಾದಿಂದ ಭಾರತಕ್ಕೆ 8 ಚೀತಾಗಳನ್ನು ಕರೆತರಲಾಗಿದೆ. ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ‘ಪ್ರಾಜೆಕ್ಟ್ ಚೀತಾ’ ಹೆಸರಿನಲ್ಲಿ ಆಫ್ರಿಕನ್ ಚೀತಾಗಳನ್ನು ಕಾಡಿಗೆ ಬಿಡುಗಡೆ ಮಾಡಲಾಗಿದೆ. ಈಗ ಈ ಚೀತಾಗಳು ಪ್ರಾಣಿ ಮತ್ತು ಮನುಷ್ಯರ ಮೇಲೆ ದಾಳಿ ಮಾಡಲು ಪ್ರಾರಂಭಿಸಿವೆ ಎಂಬ ಹೇಳಿಕೆಯೊಂದಿಗೆ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ರಸ್ತೆ ಬದಿಯಲ್ಲಿ ಹುಲ್ಲು ಮೇಯುತ್ತಿದ್ದ ಹಸುವಿನ ಮೇಲೆ ಚೀತಾವೊಂದು ದಾಳಿಮಾಡಿದೆ ಎನ್ನುವ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ಜಿಂಕೆ, ಈಗ ಹಸು ಮುಂದೆ ಮನುಷ್ಯನನ್ನು ತಿಂದರೂ ಆಶ್ಚರ್ಯ ಪಡಬೇಕಿಲ್ಲ ಮೋದಿಜೀ ನೋಡಿ ನಿಮ್ಮ ‘ಪ್ರಾಜೆಕ್ಟ್‌ ಚೀತಾ’ ದ ಪರಿಸ್ಥಿತಿಯನ್ನು ಎಂಬ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೊಣ.

ಫ್ಯಾಕ್ಟ್‌ಚೆಕ್ :

ರಸ್ತೆಬದಿಯಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ದಾಳಿ ನಡೆಸಿರುವ ಚೀತಾ ಎಂದು ಹೇಳಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ಆಗಸ್ಟ್ 2022 ರಲ್ಲಿ ಈ ಘಟನೆ ಉತ್ತರಖಂಡದಲ್ಲಿ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.

ಉತ್ತರಾಖಂಡದ ರಾಣಿಖೇತ್ ಬಳಿ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ ಹೊತ್ತೊಯ್ದಿರುವ ಘಟನೆಯ ಆಗಸ್ಟ್‌ನಲ್ಲಿ ವರದಿಯಾಗಿತ್ತು. ಈ ಘಟನೆಗೂ, ‘ಪ್ರಾಜೆಕ್ಟ್‌ ಚೀತಾ’ ಯೋಜನೆಯಡಿಯಲ್ಲಿ ನಮೀಬಿಯಾದಿಂದ ಬಂದಿರುವ ಚೀತಾಗಳಿಗೂ ಸಂಬಂಧವಿಲ್ಲ.

ಅಲ್ಲದೆ, ‘ದಿ ಹಿಂದೂ’ ಪತ್ರಿಕೆ ಮಾಡಿದ ವರದಿಯ ಪ್ರಕಾರ, ಹೊಸದಾಗಿ ತಂದ ಚೀತಾಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಿದ ಆವರಣದಲ್ಲಿ ಬಿಡುಗಡೆ ಮಾಡಲಾಗುತ್ತದೆ, ಅಲ್ಲಿ ಅವು ಒಂದು ತಿಂಗಳು ವಾಸಿಸುತ್ತವೆ. ಅಲ್ಲದೆ, ಚೀತಾಗಳಿಗೆ ರೇಡಿಯೋ ಕಾಲರ್‌ಗಳನ್ನು ಅಳವಡಿಸಲಾಗಿದ್ದು, ಅವುಗಳ ಚಲನವಲನಗಳನ್ನು ಮೀಸಲಾದ ಟ್ರ್ಯಾಕಿಂಗ್ ತಂಡವು ಟ್ರ್ಯಾಕ್ ಮಾಡುತ್ತದೆ.

1952 ರಲ್ಲಿ ಭಾರತದಲ್ಲಿ ಚಿರತೆಗಳು ನಶಿಸಿ ಹೋಗಿವೆ ಎಂದು  PIB ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಚೀತಾ, ಚಿರತೆ ಮತ್ತು ಜಾಗ್ವಾರ್ ನಡುವೆ ಇರುವ ವ್ಯತ್ಯಾಸಗಳು
ಚೀತಾ, ಚಿರತೆ ಮತ್ತು ಜಾಗ್ವಾರ್ ನಡುವೆ ಇರುವ ವ್ಯತ್ಯಾಸಗಳು

ಒಟ್ಟಾರೆಯಾಗಿ ಹೇಳುವುದಾದರೆ, ಚಿರತೆಯೊಂದು ಹಸುವನ್ನು ಕೊಲ್ಲುವ ಹಳೆಯ ವೀಡಿಯೊವನ್ನು ‘ಪ್ರಾಜೆಕ್ಟ್ ಚೀತಾ’ ಅಡಿಯಲ್ಲಿ ಹೊಸದಾಗಿ ತಂದ ಚೀತಾ ಹಸುವನ್ನು ಬೇಟೆಯಾಡುತ್ತಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಚಿರತೆ ಹಸುವಿನ ಮೇಲೆ ದಾಳಿ ಮಾಡಿದ ಘಟನೆಯು 2022 ರ ಆಗಸ್ಟ್‌ನಲ್ಲಿ ಉತ್ತರಾಖಂಡದ ರಾಣಿಖೇತ್ ಬಳಿ ನಡೆದಿದೆ ಎಂದು ಹೆಚ್ಚಿನ ಸಂಶೋಧನೆಯಿಂದ ತಿಳಿದುಬಂದಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: ಸ್ಮೃತಿ ಇರಾನಿ ತಮ್ಮ ಲ್ಯಾಪ್‌ಟಾಪ್‌ನಲ್ಲಿ ಭಾರತ್ ಜೋಡೋ ಯಾತ್ರೆ ನೋಡುತ್ತಿದ್ದರೆ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights