ಫ್ಯಾಕ್ಟ್‌ಚೆಕ್ : ‘ಪ್ರಾಜೆಕ್ಟ್‌ ಚೀತಾ’ ಕಾರ್ಯಕ್ರಮಕ್ಕಾಗಿ ಮರಗಳನ್ನು ನೆಲಸಮ ಮಾಡಿದ್ದು ನಿಜವೇ ?

ನಮೀಬಿಯಾದಿಂದ ಭಾರತಕ್ಕೆ ತರಲಾದ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಕಳೆದ ವಾರ ಬಿಡುಗಡೆ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಸುಮಾರು 300 ಜನ ಭಾಗವಹಿಸಿದ್ದು, ಇದಕ್ಕಾಗಿ ಮರಗಳನ್ನು ಕಡಿಯಲಾಗಿತ್ತು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಹಾಗಿದ್ದರೆ ಮಾಧ್ಯಮಗಳಲ್ಲಿ ಪ್ರಸರವಾಗಿರುವ ಸುದ್ದಿ ನಿಜವೇ ಎಂದು ಪರಿಶೀಲಿಸೋಣ.

A media report with the stamp FAKE claims that a large no of trees were cut in Kuno Wildlife Sanctuary to make arrangements for PM's visit for the release of 8 Cheetahs The headline reads 'This claim is Fake'

 

ಫ್ಯಾಕ್ಟ್‌ಚೆಕ್ :

ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಲವಲವಿಕೆಯಿಂದ ವಿಹರಿಸಿದ ಚೀತಾಗಳು ‘ಕಾರ್ಯಕ್ರಮದಲ್ಲಿ 300 ಅತಿಥಿಗಳು ಭಾಗವಹಿಸಿಲ್ಲ ಮತ್ತು ಅಷ್ಟು ಮಂದಿಗೆ ಟೆಂಟ್‌ಗಳನ್ನು ನಿರ್ಮಿಸಲಾಗಿಲ್ಲ. ಸಸಾಯ್‌ಪುರ ರೆಸಾರ್ಟ್‌ನಲ್ಲಿ ಅತಿಥಿಗಳಿಗೆ ಹಾಗೂ ಅಧಿಕಾರಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿತ್ತು. ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಟೆಂಟ್‌ಗಳನ್ನು ನಿರ್ಮಿಸಿರುವ ವರದಿ ಸುಳ್ಳು’ ಎಂದು PIB ತಿಳಿಸಿದೆ.

ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಪ್ರಧಾನಿ ಮೋದಿ ಅವರು 8 ಚೀತಾಗಳನ್ನು ಬಿಡುಗಡೆ ಮಾಡಿದ್ದ ಕಾರ್ಯಕ್ರಮದಲ್ಲಿ 300 ಅತಿಥಿಗಳು ಭಾಗವಹಿಸಿದ್ದರು ಮತ್ತು ಅದಕ್ಕಾಗಿ ಮರಗಳನ್ನು ಕಡಿಯಲಾಗಿತ್ತು ಎಂಬ ವರದಿಗಳು ಸುಳ್ಳು ಎಂದು ‘ಪಿಐಬಿ ಫ್ಯಾಕ್ಟ್‌ಚೆಕ್’ ಟ್ವೀಟ್ ಮಾಡಿದೆ. ಸಸಾಯ್‌ಪುರ ‘ಎಫ್‌ಆರ್‌ಎಚ್ ಮತ್ತು ಟೂರಿಸಂ ಜಂಗಲ್ ಲಾಡ್ಜ್’ನಲ್ಲಿ ಅತಿಥಿಗಳಿಗೆ ವ್ಯವಸ್ಥೆ ಮಾಡಲಾಗಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೋದಿ ಅವರು ಚೀತಾಗಳನ್ನು ಬಿಡುಗಡೆ ಮಾಡುವ ಕಾರ್ಯಕ್ರಮಕ್ಕೆ ಬರುವ VIPಗಳಿಗಾಗಿ ಟೆಂಟ್‌ಗಳನ್ನು ನಿರ್ಮಿಸಲಾಗಿತ್ತು, ಇದಕ್ಕಾಗಿ ಹಲವು ಮರಗಳನ್ನು ಕಡಿಯಲಾಗಿದೆ ಎಂದು ವರದಿಗಳಲ್ಲಿ ಉಲ್ಲೇಖಿಸಿದ್ದು, ಹೆಲಿಪ್ಯಾಡ್‌ಗಳನ್ನು ನಿರ್ಮಾಣ ಮಾಡುವುದಕ್ಕಾಗಿಯೂ ಮರಗಳನ್ನು ಕಡಿಯಲಾಗಿದೆ ಎಂದು ಆರೋಪಿಸಲಾಗಗಿದೆ. ‘ಹೆಲಿಪ್ಯಾಡ್‌ಗಳ ನಿರ್ಮಾಣಕ್ಕಾಗಿ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಮರಗಳನ್ನು ಕಡಿದಿಲ್ಲ. ಅದಕ್ಕಾಗಿ ಆಯ್ಕೆ ಮಾಡಿದ್ದ ಪ್ರದೇಶದಲ್ಲಿ ಮರಗಳು ಇರಲಿಲ್ಲ. ಹೀಗಾಗಿ ಮರಗಳನ್ನು ಕಡಿಯಲಾಗಿದೆ ಎಂಬ ವರದಿ ಸಂಪೂರ್ಣ ಸುಳ್ಳು’ ಎಂದು ಅರಣ್ಯ ಇಲಾಖೆ ಹೇಳಿದೆ.

ಹಾಗಾಗಿ ಮಾಧ್ಯಮಗಳಲ್ಲಿ  ಮೋದಿ ಕಾರ್ಯಕ್ರಮಕ್ಕಾಗಿ ಎಂದು ಮರಗಳನ್ನು ಕಡಿಯಲಾಗಿದೆ ಎಂದು ಮಾಧ್ಯಮಗಳು ಪ್ರಸಾರವಾದ ಮಾಡಿದ ಸುದ್ದಿ ಸುಳ್ಳು ಎಂದು ಸ್ಪಷ್ಟವಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: ಹಿಂದೂಗಳನ್ನು ಹೊರಹಾಕಬೇಕೆಂದು ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಹೇಳಿಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights