ಫ್ಯಾಕ್ಟ್‌ಚೆಕ್: ಭಾರತಕ್ಕೆ ರಾಹುಲ್ ಗಾಂಧಿ ನಾಯಕತ್ವದ ಅವಶ್ಯಕತೆ ಇದೆ ಎಂದು RSSನ ಭಾಗವತ್ ಹೇಳಿದರೆ?

ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಬಹಳ ಹುಮ್ಮಸ್ಸಿನಿಂದ ಹೆಜ್ಜೆ ಹಾಕುತ್ತಿದ್ದಾರೆ. ತಮಿಳುನಾಡು ಮತ್ತು ಕೇರಳ ರಾಜ್ಯದಲ್ಲಿ ಯಶಸ್ವಿಯಾಗಿ ಯಾತ್ರೆ ಮುಗಿಸಿ ಕರ್ನಾಟಕಕ್ಕೆ ಕಾಲಿಡುವ ಸಂದರ್ಭ ಬಂದಿದೆ. ಇದೇ ವೇಳೆ ರಾಹುಲ್ ಗಾಂಧಿ ನಾಯಕತ್ವದ ಕುರಿತು RSS ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ರ್‌ಗಳುನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ರಾಹುಲ್ ಗಾಂಧಿ ಭವಿಷ್ಯದ ನಾಯಕ. ಅವನನ್ನು ಲಘುವಾಗಿ ಪರಿಗಣಿಸಿದರೆ ಭಾರಿ ಬೆಲೆ ತೆರಬೇಕಾಗುತ್ತದೆ. ಅವರ ಕುಟುಂಬದ ಇತಿಹಾಸವನ್ನು ತಿಳಿದ ಮೇಲು ರಾಹುಲ್ ಗಾಂಧಿಯನ್ನು ಲಘುವಾಗಿ ಪರಿಗಣಿಸುವುದು ಸರಿಯಲ್ಲ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ (ಇಲ್ಲಿ ಮತ್ತು ಇಲ್ಲಿ) ಹಲವು ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ.

RSS ಮುಖ್ಯಸ್ಥ ಮೋಹನ್ ಭಾಗವತ್ ನಿಜವಾಗಿಯೂ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬಗ್ಗೆ ಈ ಮಾತುಗಳನ್ನು ಹೇಳಿದ್ದಾರೆಯೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಹುಲ್ ಗಾಂಧಿ ನಾಯಕತ್ವ ಕುರಿತು ಇತ್ತೀಚೆಗೆ ಮಾತನಾಡಿದ್ದಾರೆಯೇ ಎಂದು ಪರಿಶೀಲಿಸಲು ಸಂಬಂಧಿತ ಕೀವರ್ಡ್‌ಗಳೊಂದಿಗೆ ಸರ್ಚ್ ಮಾಡಲಾಗಿದ್ದು, ಮೋಹನ್ ಭಾಗವತ್ ಹೇಳಿಕೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮೂಲಗಳು ಕಂಡುಬಂದಿಲ್ಲ. ಇದಲ್ಲದೆ, ನಾವು RSS ಮತ್ತು ಮೋಹನ್ ಭಾಗವತ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಸಂಬಂಧಿತ ಟ್ವೀಟ್‌ಗಳನ್ನು ಪರಿಶೀಲಿಸಿದಾಗಲೂ, ಅವರು ವೈರಲ್ ಪೋಸ್ಟ್‌ನ ಹೇಳಿಕೆಯನ್ನು ಬೆಂಬಲಿಸುವ ಯಾವುದೇ ಟ್ವೀಟ್ ಕಂಡುಬಂದಿಲ್ಲ.

ವೈರಲ್ ಪೋಸ್ಟ್‌ನಲ್ಲಿರುವ ಮೋಹನ್ ಭಾಗವತ್ ಅವರ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ ‘‘The Future of Bharat: An RSS Perspective’ ಈವೆಂಟ್‌ನಲ್ಲಿ ಸೆರೆಹಿಡಿಯಲಾದ ಭಾಗವತ್ ಅವರ ಅದೇ ಚಿತ್ರದೊಂದಿಗೆ ಟೈಮ್ಸ್ ಆಫ್ ಇಂಡಿಯಾ ಲೇಖನ ಲಭ್ಯವಾಗಿದೆ. 2018 ರ ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಮೋಹನ್ ಭಾಗವತ್ ಅವರು, ‘ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿದೆ’ ಎಂದು ಹೇಳಿದ್ದಾರೆ. ಆದರೆ, ಈ ಸಮಾರಂಭದಲ್ಲಿ ಮೋಹನ್ ಭಾಗವತ್ ಅವರು ರಾಹುಲ್ ಗಾಂಧಿ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಕಾರ್ಯಕ್ರಮದ ಸಂಪೂರ್ಣ ಭಾಷಣವನ್ನು ಇಲ್ಲಿ ನೋಡಬಹುದು. ಈ ಎಲ್ಲಾ ಆಧಾರಗಳೊಂದಿಗೆ,  ಮೋಹನ್‌ ಭಾಗವತ್ ಅವರು ಈ ಹೇಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ರಾಹುಲ್ ಗಾಂಧಿ ಕುರಿತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ವೈರಲ್ ಹೇಳಿಕೆ ನೀಡಿಲ್ಲ, ಒಂದು ವೇಳೆ ಮೋಹನ್ ಭಾಗವತ್ ಅವರು ಹೇಳಿಕೆ ನೀಡಿದ್ದು ನಿಜವೇ ಆಗಿದ್ದರೆ, ಮಾಧ್ಯಮಗಳು ಹೆಚ್ಚಿನ ವರದಿಗಳನ್ನು ಮಾಡುತ್ತಿದ್ದವು. ಆದರೆ ಅಂತಹ ಯಾವುದೇ ಗಂಭೀರ ವರದಿಗಳು ಕಂಡುಬಂದಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ಸುಳ್ಳು.

ಕೃಪೆ : ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಹಸು ಮತ್ತು ಚಿರತೆಯ ಮುದ್ದಾಟದ ಪೋಟೋ ವೈರಲ್ ! ಈ ಘಟನೆ ನಡೆದಿದ್ದೆಲ್ಲಿ ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights