ಫ್ಯಾಕ್ಟ್‌ಚೆಕ್: ಸೂಪರ್ ಮಾರ್ಕೆಟ್‌ನಲ್ಲಿ ಬೆಂಕಿ – ಮುಸ್ಲಿಮರು ಕಾರಣ ಎಂದು ಸುಳ್ಳು ಹಂಚಿಕೆ

ನವರಾತ್ರಿ ಹಬ್ಬದ ಸಂದರ್ಭದಲ್ಲಿ ಯುನೈಟೆಡ್ ಕಿಂಗ್‌ಡಂನ ಬರ್ಮಿಂಗ್‌ಹ್ಯಾಮ್‌ನಲ್ಲಿ ಹಿಂದೂ ದೇವಾಲಯಕ್ಕೆ ಬೆಂಕಿ ಹಚ್ಚಲಾಗಿದೆ ಎಂಬ ಹೇಳಿಕೆಯೊಂದಿಗೆ ವೀಡಿಯೊ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ದೇವಸ್ಥಾನದ ಹೊರಗೆ ಮುಸ್ಲಿಮರು ಹಿಂದೂಗಳನ್ನು ಥಳಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಪೊಲೀಸ್ ಅಧಿಕಾರಿಯೊಬ್ಬರು ಜಗಳವನ್ನು ನಿಲ್ಲಿಸಲು ಮಧ್ಯಪ್ರವೇಶಿಸುತ್ತಿರುವುದನ್ನು ಕ್ಲಿಪ್‌ನಲ್ಲಿ ತೋರಿಸಲಾಗಿದೆ.

ಬರ್ಮಿಂಗ್‌ಹ್ಯಾಮ್‌ನಲ್ಲಿ “ನವರಾತ್ರಿ ಸಮಯದಲ್ಲಿ ಮುಸ್ಲಿಮರು” ದೇವಸ್ಥಾನವನ್ನು ಸುಟ್ಟುಹಾಕಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : 

ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ದಿ ಕ್ವಿಂಟ್‌ ಮಾಡಿದ ಫ್ಯಾಕ್ಟ್‌ಚೆಕ್ ವರದಿಯೊಂದು ಲಭ್ಯವಾಗಿದ್ದು, ಸೆಪ್ಟೆಂಬರ್ 19 ರಂದು ಸೂಪರ್ಮಾರ್ಕೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ನಂತರ 12 ಅಗ್ನಿಶಾಮಕಗಳನ್ನು ಬಳಸಿ ಬೆಂಕಿಯನ್ನು ನಂದಿಸಲಾಗಿದೆ ಎಂದು ವರದಿ ಮಾಡಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಜಗಳ ಪ್ರಾರಂಭವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ವೆಸ್ಟ್ ಮಿಡ್‌ಲ್ಯಾಂಡ್ಸ್ ಅಗ್ನಿಶಾಮಕ ಸೇವೆಯ ಪ್ರಕಾರ, “ಬೆಂಕಿ ಆಕಸ್ಮಿಕವಾಗಿ ತಗುಲಿದ್ದು ಯಾವುದೇ ಪ್ರಾಣಹಾನಿಯಾಗಿಲ್ಲ ಮತ್ತು ಇದು ಮುಸ್ಲಿಮರು ನಡೆಸಿದ ಕೃತ್ಯ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಕೆಲವರು ಕಾರು ಪಾರ್ಕಿಂಗೆ ಸಂಬಂಧಿಸಿದಂತೆ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಅದನ್ನು ತಪ್ಪಾಗಿ ಈ ಪ್ರಕರಣದೊಂದಿಗೆ ಜೋಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದನ್ನು ಇಲ್ಲಿ ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ದಿನಾಂಕ 19 ಸೆಪ್ಟಂಬರ್ 2022 ರಂದು ಸೂಪರ್ ಮಾರ್ಕೆಟ್‌ನಲ್ಲಿ ಬೆಂಕಿ ಅವಘಡದ ಘಟನೆಯನ್ನು ಮುಸ್ಲಿಮರು ಹಿಂದೂ ದೇವಸ್ಥಾನಕ್ಕೆ ಬೆಂಕಿ ಹಚ್ಚಿದ್ದಾರೆ ಎಂಬ ಹೇಳಿಕೆಯೊಂದಿಗೆ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಇದು ಸುಳ್ಳು ಸುದ್ದಿ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ : ಕ್ವಿಂಟ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: ಹಾವೊಂದು ನಿಧಿ ಕಾಯುತ್ತಿರುವ ವಿಡಿಯೋದ ವಾಸ್ತವವೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights