ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿಯ ಹಳೆಯ ಫೋಟೋವನ್ನು ಭಾರತ ಐಕ್ಯತಾ ಯಾತ್ರೆಯ ಫೋಟೊ ಎಂದು ತಪ್ಪಾಗಿ ಹಂಚಿಕೆ
ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಬಿಜೆಪಿ ಆಡಳಿತವಿರುವ ಕರ್ನಾಟಕಕ್ಕೆ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿಯ ವಸ್ತ್ರ ಸಂಹಿತೆ ಬದಲಾಗಿದೆ. ಹಿಂದೂ ಧಾರ್ಮಿಕ ಉಡುಗಳಿಗೆ ಮೊರೆ ಹೋಗಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಪ್ರಸಾರ ಮಾಡಲಾಗುತ್ತಿದೆ.
‘ಕೇರಳದಲ್ಲಿ ಯಾತ್ರೆಯ ವೇಳೆ ಪ್ಯಾಂಟ್ ಹಾಗೂ ಟೀಶರ್ಟ್ ಧರಿಸಿದ್ದ ರಾಹುಲ್ ಅವರು ಕರ್ನಾಟಕವನ್ನು ಪ್ರವೇಶಿಸುತ್ತಿದ್ದಂತೆಯೇ ಬಿಳಿ ಕುರ್ತಾ, ಸ್ತೋತ್ರ ಮುದ್ರಿತವಾಗಿರುವ ಶಲ್ಯ ಹಾಗೂ ರುದ್ರಾಕ್ಷಿ ಮಾಲೆ ಧರಿಸಿದ್ದರು. ರಾಹುಲ್ ಗಾಂಧಿ ಬೇರೆ ಬೇರೆ ದಿರಿಸುಗಳಲ್ಲಿ ಕಾಣಿಸಿಕೊಂಡಿರುವ ಎರಡು ಚಿತ್ರಗಳನ್ನು ಕೊಲಾಜ್ ಮಾಡಿ, ಮಲಯಾಳಂ ಭಾಷೆಯಲ್ಲಿ ಟ್ವೀಟ್ ಮಾಡಲಾಗಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆನ್ನು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್:
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಫೋಟೋಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿಯವರು ವಾರಣಾಸಿಗೆ ಭೇಟಿ ನೀಡಿದ ಸಂದರ್ಭ ಎಂದು ದೃಢಪಟ್ಟಿದೆ.
ಈ ಚಿತ್ರವನ್ನು ಮಾರ್ಚ್ 4, 2022ರ ದಿ ಇಂಡಿಯನ್ ಎಕ್ಸ್‌ಪ್ರೆಸ್ಸನಲದಲಿ ವರದಿ ಮಾಡಲಾಗಿದೆ. ಈ ವರದಿಯ ಪ್ರಕಾರ, ಉತ್ತರ ಪ್ರದೇಶ ಚುನಾವಣಾ ಪ್ರಚಾರಕ್ಕಾಗಿ ವಾರಣಾಸಿಗೆ ಆಗಮಿಸಿದ ನಂತರ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದನ್ನು ಚಿತ್ರ ತೋರಿಸುತ್ತದೆ.
ರಾಹುಲ್ ಅವರು ಕೇರಳ ಹಾಗೂ ಕರ್ನಾಟಕದಲ್ಲಿ ಒಂದೇ ರೀತಿಯ ಬಟ್ಟೆ ಧರಿಸಿದ್ದಾರೆ. ಕುರ್ತಾ, ಶಲ್ಯ ಹಾಗೂ ರುದ್ರಾಕ್ಷಿ ಧರಿಸಿರುವ ಚಿತ್ರವು ಯಾತ್ರೆಗೆ ಸಂಬಂಧಿಸಿದ್ದಲ್ಲ ಎಂದು ಇಂಡಿಯಾಟುಡೇ ವರದಿ ಮಾಡಿದೆ. ಉತ್ತರ ಪ್ರದೇಶ ಚುನಾವಣಾ ಪ್ರಚಾರದ ವೇಳೆ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಅವರ ಜೊತೆ ಕಾಶಿ ವಿಶ್ವನಾಥ ಮಂದಿರಕ್ಕೆ ರಾಹುಲ್ ಭೇಟಿ ನೀಡಿದ್ದಾಗ ಈ ಚಿತ್ರವನ್ನು ಸೆರೆಹಿಡಿಯಲಾಗಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿದ್ದ ಚಿತ್ರವನ್ನು ಭಾರತ್ ಜೋಡೋ ಯಾತ್ರೆಯದ್ದು ಎಂದು ಲಿಂಕ್ ಮಾಡಲಾಗಿದೆ.
ರಾಹುಲ್ ಗಾಂಧಿ ತಮ್ಮ ಯಾತ್ರೆ ಪ್ರಾರಂಭ ಆದಾಗಿನಿಂದ ಇಲ್ಲಿಯವರೆಗೂ ಪೋಸ್ಟ್‌ನಲ್ಲಿ ಪ್ರತಿಪಾದನೆ ಮಾಡಿದಂತಹ ುದುಪುಗಳನ್ನು ಧರಿಸಿಲ್ಲ.
ರಾಹುಲ್ ಗಾಂಧಿಯವರ ಯೂಟ್ಯೂಬ್ ಪೇಜ್‌ನಲ್ಲಿ ಹಂಚಿಕೊಂಡಿರುವ ಕರ್ನಾಟಕದಲ್ಲಿ ಪಾದಯಾತ್ರೆಯ ವೀಡಿಯೊಗಳಲ್ಲಿ ಒಂದನ್ನು ಕೆಳಗೆ ನೀಡಲಾಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಮಾರ್ಚ್ 4, 2022ರಲ್ಲಿ ಉತ್ತರ ಪ್ರದೇಶದ ವಾರಣಾಸಿಯಗೆ ತಮ್ಮ ಸಹೋದರಿ ಪ್ರಿಯಾಂಕ ಅವರೊಂದಿಗೆ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಧರಿಸಿದ್ದ ಉಡುಪಿನ ಚಿತ್ರವನ್ನು, ಪ್ರಸ್ತುತ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯೊಂದಿಗೆ ಲಿಂಕ್ ಮಾಡಲಾಗಿದೆ. ಅಲ್ಲದೆ ಕರ್ನಾಟಕದಲ್ಲಿ BJP ಇರುವ ಕಾರಣಕ್ಕೆ ಈ ರೀತಿ ಬಟ್ಟೆ ಧರಿಸಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: RSS ಮೋಹನ್ ಭಾಗವತ್ ಮಾತಿನಲ್ಲಿ ಎಷ್ಟು ನಿಜ? ಎಷ್ಟು ಸುಳ್ಳು ?