ಫ್ಯಾಕ್ಟ್‌ಚೆಕ್: RSS ನವರನ್ನು ಮುಗಿಸುತ್ತೇವೆ ಎಂದು ಘೋಷಣೆ ಕೂಗಿದ್ದು ಉತ್ತರ ಪ್ರದೇಶದಲ್ಲಲ್ಲ

ಉತ್ತರ ಪ್ರದೇಶದಲ್ಲಿ RSS ವಿರುದ್ಧ ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಿರುವ ಗುಂಪು ಎಂದು ಪ್ರತಿಪಾದಿಸಿ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.  ಎರಡು ವೀಡಿಯೊಗಳನ್ನು ಒಳಗೊಂಡಿರುವ ಫೇಸ್‌ಬುಕ್ ಪೋಸ್ಟ್ ವೈರಲ್ ಆಗಿದ್ದು, ಒಂದರಲ್ಲಿ ಪ್ರತಿಭಟನಾಕಾರರು ಹಿಂದುತ್ವ ಸಂಘಟನೆಯ ವಿರುದ್ಧ ಪ್ರಚೋದನಕಾರಿ ಘೋಷಣೆಗಳನ್ನು ಕೂಗುವುದನ್ನು, ಮತ್ತೊಂದು ವಿಡಿಯೋದಲ್ಲಿ ಪೊಲೀಸ್ ಸಿಬ್ಬಂದಿ ಕೆಲವರನ್ನು ವಶಕ್ಕೆ ಪಡೆಯುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಸರ್ಕಾರ, ಹಿಂದೂ ಸಂಘಟನೆಯ ವಿರುದ್ಧ ಪ್ರತಿಭಟನೆಗೆ ಇಳಿದವರ ವಿರುದ್ಧ ಹೇಗೆ ಕ್ರಮ ತೆಗೆದುಕೊಂಡಿದೆ ನೋಡಿ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೋ ಪೋಸ್ಟ್‌ ಉತ್ತರ ಪ್ರದೇಶಕ್ಕೆ ಸಂಬಂಧಿಸಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ. ಹಿಂದೂ ವರದಿಯ ಪ್ರಕಾರ ಘಟನೆಯು ತೆಲಂಗಾಣದ ನಲ್ಗೊಂಡದಲ್ಲಿ ಘಟನೆ ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ರಾಯಲ್ ಟೈಮ್ ಹೌಸ್’ ಎಂಬ ಅಂಗಡಿಯಿಂದ ಸ್ಥಳದ ಬಗ್ಗೆ ಸುಳಿವು ಸಿಕ್ಕಿತು, ಅದರ ನೇಮ್ ಬೋರ್ಡ್ ವೈರಲ್ ವೀಡಿಯೊದಲ್ಲಿ ಗೋಚರಿಸುತ್ತದೆ.

The shop ‘Royal Time House’, featured in the video.

Search result on Justdial.

ಎರಡನೇ ವೀಡಿಯೋದಲ್ಲಿ, ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನ ವಶಕ್ಕೆ ಪಡೆಯುತ್ತಿರುವ ದೃಶ್ಯಗಳು, ಈ ದೃಶ್ಯಗಳು ತೆಲಂಗಾಣದಲ್ಲಿ ನಡೆದ ಗಲಭೆಗೆ ಸಂಬಂಧಿಸಿವೆ ಎಂದು ಮಾಹಿತಿ ಲಭ್ಯವಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ಹೈದರಾಬಾದ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ತೀವ್ರ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಜನರನ್ನು ಕಸ್ಟಡಿಗೆ ತೆಗೆದುಕೊಳ್ಳುವ ಹಲವು ಸುದ್ದಿ ವರದಿಗಳು ಕಂಡುಬಂದಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ಹಿಂದುತ್ವದ ಸಂಘಟನೆಗಳ ವಿರುದ್ದ ಪ್ರಚೋದನಕಾರಿ ಘೋಷಣೆ ಕೂಗಿದ ಪ್ರತಿಭಟನೆಕಾರರನ್ನು ವಶಕ್ಕೆ ಪಡೆದು ಚಾರ್ಜ್ ಮಾಡಲಾದ ಘಟನೆ ನಡೆದಿರುವುದು ತೆಲಂಗಾಣದಲ್ಲಿ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಇದನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಕೃಪೆ: ದಿ ಹಿಂದೂ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: ತೆಲಂಗಾಣದಲ್ಲಿ ಕೋಳಿ ಮತ್ತು ಮದ್ಯ ಹಂಚಿದ್ದು BJP ನಾಯಕರೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights