ಫ್ಯಾಕ್ಟ್‌ಚೆಕ್: ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸಿದ್ದು ಮುಸ್ಲಿಮರೇ?

ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ ಎಂಬ ಹೇಳಿಕೆಯೊಂದಿದೆ, ಬಾಬಾ ಸಾಹೇಬರ ಹಾನಿಗೊಳಗಾಗಿರುವ ಪ್ರತಿಮೆಯ ಫೋಟೋದೊಂದಿಗೆ ದಲಿತ ಮತ್ತು ಮುಸ್ಲಿಮರ ನಡುವೆ ನಡೆದ ಘರ್ಷಣೆ ವೇಳೆ ಈ ಘಟನೆ  ನಡೆದಿದೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

https://twitter.com/IamSoldier11/status/1580152169302396933?ref_src=twsrc%5Etfw%7Ctwcamp%5Etweetembed%7Ctwterm%5E1580152169302396933%7Ctwgr%5Efdb5a87b4059e40b9c02b763b0f9c2766035501b%7Ctwcon%5Es1_&ref_url=https%3A%2F%2Fthelogicalindian.com%2Ffact-check%2Fold-image-of-damaged-statue-of-br-ambedkar-goes-viral-38144

ಪಶ್ಚಿಮ ಬಂಗಾಳದಲ್ಲಿ ದಲಿತರು ಮತ್ತು ಮುಸ್ಲಿಮರ ನಡುವೆ ಘರ್ಷಣೆ ನಡೆದಿದೆ ಎಂದು ಆರೋಪಿಸಿದ್ದು,ಇದರಲ್ಲಿ ಕೆಲವು ಸಮಾಜಘಾತುಕ ಶಕ್ತಿಗಳು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಎಂದು ಹೇಳಲಾಗಿದೆ.

ಫೇಸ್‌ಬುಕ್ ಮತ್ತು ಟ್ವಿಟರ್‌ಗಳಲ್ಲಿ ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಈ ವೈರಲ್ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಅಗಿರುವ ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸಿರುವ ಘಟನೆಯು 6 ತಿಂಗಳ ಹಿಂದೆ ನಡೆದ ಘಟನೆ ಎಂದು ದಿ ಲಾಜಿಕಲ್ ಇಂಡಿಯನ್ ಫ್ಯಾಕ್ಟ್‌ಚೆಕ್ ವರದಿಯನ್ನು ಪ್ರಕಟಿಸಿದೆ.

ಪಶ್ಚಿಮ ಬಂಗಾಳದಲ್ಲಿ ಇಂತಹ ಘಟನೆಗಳು ನಡೆದ ವರದಿಗಳನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ಘಟನೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿದೆ ಎಂಬ ದೃಢೀಕರಿಸುವ ಯಾವುದೇ ಸುದ್ದಿ ವರದಿಗಳು ಲಭ್ಯವಾಗಿಲ್ಲ.

ಆದರೆ ಇದೇ ಕೀವರ್ಡ್‌ಳನ್ನು ಬಳಸಿ ಮತ್ತಷ್ಟು ಸರ್ಚ್ ಆಪ್ಶನ್‌ನಲ್ಲಿ ಹುಡುಕಿದಾಗ, 15 ಮಾರ್ಚ್ 2022 ರಂದು ದಿ ಕ್ವಿಂಟ್ ಮಾಡಿದ ವರದಿಯೊಂದು ಲಭ್ಯವಾಗಿದೆ. ವರದಿಯ ಪ್ರಕಾರ, ವೈರಲ್ ಘಟನೆ ಮಧ್ಯಪ್ರದೇಶದ ಸೆಹೋರ್‌ನ ಮುಸ್ಕ್ರಾ ಗ್ರಾಮದಲ್ಲಿ ನಡೆದಿದೆ. ಮೂಲಗಳ ಪ್ರಕಾರ, ಭೀಮ್ ರಾವ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ರಾತ್ರಿ ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದಾರೆ.

Image Credit: The Quint

2022 ರ ಮಾರ್ಚ್ 15 ರ ಅಮರ್ ಉಜಾಲಾ ಅವರ ವರದಿಯ ಪ್ರಕಾರ, ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಈ ಕೃತ್ಯವು ಮಾದಕ ವ್ಯಸನಿಯಿಂದ ಆಗಿರಬಹುದು ಎಂದು ಮಂಡಿ ಪೊಲೀಸ್ ಠಾಣೆಯ ಉಸ್ತುವಾರಿ ಹರಿಸಿಂಗ್ ಪರ್ಮಾರ್ ಅವರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

Image Credit: Amar Ujala

“ಹಲವು ಹಳ್ಳಿಗಳ ಜನರು ಪ್ರತಿಮೆ ಸ್ಥಾಪಿಸುವ ರಸ್ತೆಯನ್ನು ಬಳಸುತ್ತಾರೆ. ಬಹುಶಃ ಮಾದಕ ವ್ಯಸನಿಗಳು ಅಂಬೇಡ್ಕರ್ ಅವರ ಪ್ರತಿಮೆಗೆ ಹಾನಿ ಮಾಡಿರಬಹುದು. ಪೊಲೀಸರು ಶೀಘ್ರದಲ್ಲೇ ತನಿಖೆ ಪೂರ್ಣಗೊಳಿಸಿ ಆರೋಪಿಗಳನ್ನು ಬಂಧಿಸುತ್ತಾರೆ” ಎಂದು ಹರೀಶ್ ಪರ್ಮಾರ್ ಮಾಧ್ಯಮಗಳಿಗೆ ತಿಳಿಸಿದ್ದರು.

ಘಟನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ದಿ ಲಾಜಿಕಲ್ ಇಂಡಿಯನ್ ತಂಡವು ಸೆಹೋರ್ ಪೊಲೀಸರನ್ನೂ ಸಂಪರ್ಕಿಸಿದಾಗ SHO ಹರಿಸಿಂಗ್‌ ಪರ್ಮಾರ್‌ ಮಾತನಾಡಿ, ‘‘ಈ ಪ್ರಕರಣದಲ್ಲಿ ದಲಿತ-ಮುಸ್ಲಿಂ ಘರ್ಷಣೆಯ ಯಾವುದೇ ಘಟನೆ ನಡೆದಿಲ್ಲ. ಬಹುಶಃ ಮಾದಕ ವ್ಯಸನಿಗಳು ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡಿರಬಹುದು. ಆಗಸ್ಟ್ 15ರಂದು ಹೊಸ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಅಂಬೇಡ್ಕರ್‌ ಪ್ರತಿಮೆಯನ್ನು ವಿರೂಪಹೊಳಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ಅಲ್ಲ, ಈ ಘಟನೆ ನಡೆದಿರುವುದು ಮಧ್ಯಪ್ರದೇಶದ ಸೆಹೋರ್‌ನ ಮುಸ್ಕ್ರಾ ಎಂಬ ಗ್ರಾಮದಲ್ಲಿ.

ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯು ದಲಿತ ಮತ್ತು ಮುಸ್ಲಿಮ್ಮರ ನಡುವೆ ಕಂದಕವನ್ನು ಸೃಷ್ಟಿಸುವಂತಿದ್ದು, ದಲಿತ ಮತ್ತು ಮುಸ್ಲಿಮರ ನಡುವೆ ಘರ್ಷಣೆ ನಡೆದಿದ್ದು, ಅದೇ ಸಂದರ್ಭದಲ್ಲಿ ಅಂಬೇಡ್ಕರ್ ಪ್ರತಿಮೆನ್ನು ಭಗ್ನಗೊಳಿಸಿದ್ದಾರೆ ಎಂದು ಬಿಂಬಿಸಿ ಕೋಮು ಪ್ರಚೋದನೆ ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ಕೃತ್ಯ ಮುಸ್ಲಿಮರಿಂದ ನಡೆದಿದೆ ಎನ್ನುಲು ಯಾವುದೇ ಆಧಾರಗಳಿಲ್ಲ ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ದಿ ಲಾಜಿಕಲ್ ಇಂಡಿಯನ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದು ಗುಜರಾತಿಗಳೆ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights