ಫ್ಯಾಕ್ಟ್‌ಚೆಕ್: ವ್ಯಕ್ತಿಯೊಬ್ಬ ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದ ಈ ಘಟನೆ ಭಾರತದ್ದಲ್ಲ

ವ್ಯಕ್ತಿಯೊಬ್ಬ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿ ಅದನ್ನು ತಾನೇ ಮಾಡಿರುವದಾಗಿ ಒಪ್ಪಿಕೊಳ್ಳುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಒಪ್ಪಿಕೊಳ್ಳುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವ್ಯಕ್ತಿ ಭಾರತದ ಮುಸ್ಲಿಂ ಎಂದು ಪ್ರತಿಪಾದಿಸಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.

ಈ ವಿಡಿಯೋ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್: 

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋವನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವೀಡಿಯೊದಲ್ಲಿ, ವ್ಯಕ್ತಿ ತಾನು ‘ಶಾಹ್ ಟೌನ್’ ನಿವಾಸಿ ಎಂದು ಹೇಳಿದ್ದಾನೆ. ಈ ಪ್ರದೇಶವು ಪಾಕಿಸ್ತಾನದ ಕರಾಚಿಯಲ್ಲಿದೆ. ಇದರಿಂದ ಸೂಚನೆಯನ್ನು ತೆಗೆದುಕೊಂಡು, ಸುದ್ದಿ ವರದಿಗಳಿಗಾಗಿ ಸರ್ಚ್ ಮಾಡಿದಾಗ, 21 ಅಕ್ಟೋಬರ್ 2022 ರಂದು ‘4News Pakistan’ Facebook ಪುಟದಿಂದ ಅಪ್‌ಲೋಡ್ ಮಾಡಿದ ಅದೇ ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ.

ಅಕ್ಟೋಬರ್ 22 ರಂದು ‘ಸಿಟಿ ನ್ಯೂಸ್ ಎಚ್‌ಡಿ ಪ್ಲಸ್’ ಪುಟದಿಂದ ಪೋಸ್ಟ್ ಮಾಡಿದ ಫೇಸ್‌ಬುಕ್ ವೀಡಿಯೊ ಈ ಘಟನೆಯನ್ನು ಬುಲೆಟಿನ್‌ನ ಕೊನೆಯಲ್ಲಿ ಸಂಕ್ಷಿಪ್ತವಾಗಿ ವರದಿ ಮಾಡಿದೆ.

ಮಾಧ್ಯಮ ವರದಿಗಳ ಪ್ರಕಾರ, ಆರೋಪಿ ಮುಸ್ತಾಕ್ ಅಹ್ಮದ್ ತನ್ನ ಪತ್ನಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದಾಗ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಈ ವಿಷಯದ ಬಗ್ಗೆ ಮೌನವಾಗಿರುವಂತೆ ಮಗಳಿಗೆ ಬೆದರಿಕೆ ಹಾಕಿದ್ದ, ಆದರೆ ಅಂತಿಮವಾಗಿ ಸಂತ್ರಸ್ಥ ಮಗಳು ದೂರು ದಾಖಲಿಸಿದ್ದಾರೆ. ನಂತರ ಮುಸ್ತಾಕ್‌ನನ್ನು ಬಂಧಿಸಲಾಗಿದೆ.

ಒಟ್ಟಾರೆಯಾಹಿ ಹೇಳುವುದಾದರೆ, ಮಾಧ್ಯಮ ವರದಿಗಳ ಪ್ರಕಾರ, ಆರೋಪಿ ಮುಸ್ತಾಕ್ ಅಹ್ಮದ್, ಪಾಕಿಸ್ತಾನದ ಕರಾಚಿ ನಿವಾಸಿ, ತನ್ನ ಪತ್ನಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದಾಗ ತನ್ನ ವಯಸ್ಕ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗಳ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿದೆ. ಈ ಘಟನೆ ಭಾರತದಲ್ಲ, ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ನಮಗೆ ಕಾಶ್ಮೀರದ ಬದಲು ವಿರಾಟ್ ಕೊಹ್ಲಿ ಕೊಡಿ ಎಂದು ಕೇಳಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights