ಫ್ಯಾಕ್ಟ್‌ಚೆಕ್: ಡೊನಾಲ್ಡ್ ಟ್ರಂಪ್ ಟ್ವಿಟರ್ ಖಾತೆಯ ಮೇಲಿನ ನಿರ್ಬಂಧ ತೆಗೆಯಲಾಗಿದೆಯೆ?
ಎಲಾನ್ ಮಸ್ಕ್ ತೆಕ್ಕೆಗೆ ಟ್ವಿಟರ್ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಟ್ರಂಪ್ ಅವರ ಟ್ವಿಟರ್ ಖಾತೆ ಮೇಲಿನ ಶಾಶ್ವತ ನಿರ್ಬಂಧ ವಾಪಸ್ ತೆಗೆದುಕೊಳ್ಳಲಾಗುತ್ತದೆಯೇ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಡೊನಾಲ್ಡ್ ಟ್ರಂಪ್ ಟ್ವಿಟರ್‌ಗೆ ಮರಳಿದ್ದಾರೆ ಎಂದು ಹೇಳುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಡೊನಾಲ್ಡ್ ಟ್ರಂಪ್ ಮಾಡಿದ ಟ್ವಿಟರ್ ಪೋಸ್ಟ್ ಎಂದು ಸ್ಕ್ರೀನ್‌ಶಾಟ್ ಗಳನ್ನು ಹರಡಲಾಗುತ್ತಿದೆ.
View this post on Instagram
ಟ್ರಂಪ್ ಅವರ ಟ್ವಿಟರ್ ಖಾತೆ ಮೇಲಿನ ಶಾಶ್ವತ ನಿರ್ಬಂಧ ವಾಪಸ್ ತೆಗೆದುಕೊಳ್ಳಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ಸುದ್ದಿ ನಿಜವೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್:
ಸ್ಪೇಸ್‌ಎಕ್ಸ್ ಮತ್ತು ಟೆಸ್ಲಾ ಸಿಇಒ ಎಲೋನ್ ಮಸ್ಕ್ ಟ್ವಿಟರ್ ಅನ್ನು ಖರೀದಿಸಿದ ನಂತರ, ಡೊನಾಲ್ಡ್ ಟ್ರಂಪ್ ಅವರ ನಿರ್ಬಂಧಿಸಲಾದ ಖಾತೆಯನ್ನು ಮರುಸ್ಥಾಪಿಸುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹಗಳು ಆರಂಭವಾಗಿದ್ದವು. ಇದೇ ಸಂದರ್ಭದಲ್ಲಿ ವೈರಲ್ ಪೋಸ್ಟ್ ಕೂಡ ಶೇರ್ ಆಗುತ್ತಿದ್ದು, ಟ್ರಂಪ್ ಅವರ Twitter ಖಾತೆಯನ್ನು ನಿಜವಾಗಿಯೂ ಮರುಸ್ಥಾಪಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಗೂಗಲ್ ಸರ್ಚ್ ಮಾಡಲಾಗಿದೆ.

ಕೀವರ್ಡ್ ಸಹಾಯದಿಂದ ಗೂಗಲ್‌ನಲ್ಲಿ ಸರ್ಚ್ ನಡೆಸಿದಾಗ ಟ್ವಿಟರ್‌ಗೆ ಟ್ರಂಪ್ ವಾಪಸ್?: ಡೊನಾಲ್ಡ್ ಜೆ. ಟ್ರಂಪ್ ಎಂಬ ವೆರಿಫೈಡ್ ಹೆಸರಿನ ಟ್ವಿಟರ್ ಖಾತೆಯಲ್ಲಿ ‘ವಾಪಸ್ ಆಗಿದ್ದೇನೆ’ ಎಂಬ ಪೋಸ್ಟ್ ಮಾಡಲಾಗಿದೆ. ‘ಧನ್ಯವಾದಗಳು ಎಲನ್ ಮಸ್ಕ್. ವಾಪಸ್ ಆಗುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ನನ್ನ ದ್ವೇಷಿಗರು ಮತ್ತು ಸೋತವರು ನನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದರು ಎಂದು ಭಾವಿಸಿದ್ದೇನೆ’ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಆದರೆ ಇದು ಎಡಿಟ್ ಮಾಡಿದ ಡೊನಾಲ್ಡ್ ಟ್ರಂಪ್ ಅವರ ಅಣಕು ಪ್ರೊಫೈಲ್ ಆಗಿದೆ ಎಂಬುದು ಸ್ಪಷ್ಟವಾಗಿದೆ. ಇದನ್ನೇ ಡೊನಾಲ್ಡ್ ಟ್ರಂಪ್ ಅವರ ನಿಜವಾದ ಖಾತೆಯೆಂದು ಭಾವಿಸಿದ್ದಾರೆ.
2021ರ ಜನವರಿ 6ರಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಘೋಷಣೆ ವೇಳೆ ಟ್ರಂಪ್ ಬೆಂಬಲಿಗರು ಅಮೆರಿಕ ಕ್ಯಾಪಿಟೋಲ್ ಮೇಲೆ ದಾಳಿ ನಡೆಸಿದ್ದರು. ಇದಕ್ಕೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಟ್ರಂಪ್ ಅವರ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಡೊನಾಲ್ಡ್ ಟ್ರಂಪ್ ಅವರ Twitter ಖಾತೆಯನ್ನು 30 ಅಕ್ಟೋಬರ್ 2022 ರಂತದು ಮರುಸ್ಥಾಪಿಸಲಾಗಿದೆ ಎಂಬುದು ಸುಳ್ಳು. ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಟ್ವೀಟ್ ಅನ್ನು ಅಣಕು ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ವ್ಯಕ್ತಿಯೊಬ್ಬ ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದ ಈ ಘಟನೆ ಭಾರತದ್ದಲ್ಲ

