ಫ್ಯಾಕ್ಟ್‌ಚೆಕ್: ರೈಲ್ವೆ ಇಲಾಖೆ RPF ಕಾನ್ಸ್‌ಟೇಬಲ್ ನೇಮಕಾತಿ 2022ರ ಅಧಿಸೂಚನೆ ಬಿಡುಗಡೆ ಮಾಡಿದೆಯೇ?

ಭಾರತೀಯ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ರೈಲ್ವೇ ಪ್ರೊಟೆಕ್ಷನ್ ಸ್ಪೆಷಲ್ ಫೋರ್ಸ್ (ಆರ್‌ಪಿಎಸ್‌ಎಫ್) ಆರ್‌ಪಿಎಫ್ ಕಾನ್ಸ್‌ಟೇಬಲ್ ನೇಮಕಾತಿ 2022 ಪರೀಕ್ಷೆಯ ಮೂಲಕ ಪುರುಷ ಮತ್ತು ಮಹಿಳಾ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂಬ ಸೂಚನೆಯುಳ್ಳ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಭಾರತೀಯ ರೈಲ್ವೆ 2022ರಲ್ಲಿ ಭಾರತೀಯ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ರೈಲ್ವೇ ಪ್ರೊಟೆಕ್ಷನ್ ಸ್ಪೆಷಲ್ ಫೋರ್ಸ್ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿರುವುದು ನಿಜವೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಭಾರತೀಯ ರೈಲ್ವೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆಯೇ ಎಂದು ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿದಾಗ, ರೈಲ್ವೆ ಇಲಾಖೆಯಿಂದ ಹೊರಡಿಸಲಾದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಭಾರತೀಯ ರೈಲ್ವೆ ತನ್ನ ಟ್ವಿಟರ್‌ನಲ್ಲಿ ನೇಮಕಾತಿ ಬಗ್ಗೆ ವೈರಲ್ ಪೋಸ್ಟ್‌ಅನ್ನು ಉಲ್ಲೇಖಿಸಿ  ಮಾಹಿತಿ ಹಂಚಿಕೊಂಡಿದ್ದು“ಕೆಲವು ವೆಬ್‌ಸೈಟ್‌ಗಳು ಭಾರತೀಯ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಆರ್‌ಪಿಎಫ್ ಹೆಸರಿನಲ್ಲಿ ಕಾನ್ಸ್‌ಟೇಬಲ್ ನೇಮಕಾತಿ 2022 ಪರೀಕ್ಷೆಯ ಮೂಲಕ ನೇಮಕಾತಿ ನಡೆಸುತ್ತಿದೆ ಎಂದು ಹೇಳಿಕೊಳ್ಳುವ ಸೂಚನೆಯನ್ನು ಪ್ರಕಟಿಸಿವೆ. ಈ ಮಾಹಿತಿಯು ನಕಲಿ” ಎಂದು ಭಾರತೀಯ ರೈಲ್ವೆ ಸ್ಪಷ್ಟಪಡಿಸಿದೆ.

ಆರ್‌ಪಿಎಫ್‌ನಲ್ಲಿ ಕಾನ್‌ಸ್ಟೆಬಲ್ ಹುದ್ದೆಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಹಂಚಿಕೊಳ್ಳಲಾದ ನೋಟೀಸ್ ನಕಲಿ ಎಂದು ತಿಳಿಸಿದೆ. ರೈಲ್ವೇ ಇಲಾಖೆ ಅಂತಹ ಯಾವುದೇ ಪರೀಕ್ಷೆ ಅಥವಾ ನೇಮಕಾತಿ ಡ್ರೈವ್ ಅನ್ನು ನಡೆಸುತ್ತಿಲ್ಲ ಮತ್ತು ನೋಟಿಸ್ ಅನ್ನು ನಂಬಬೇಡಿ ಎಂದು ಅಭ್ಯರ್ಥಿಗಳನ್ನು ಮನವಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ  ಭಾರತೀಯ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF) ನೇಮಕಾತಿಯ ನೋಟಿಫಿಕೇಶನ್ ನಕಲಿ ಎಂದು ಇಲಾಖೆ ಸ್ಪಷ್ಟಪಡಿಸಿದೆ. ರೈಲ್ವೆ ಇಲಾಖೆಯು ತನ್ನ ಕೊನೆಯ ನೇಮಕಾತಿ ಡ್ರೈವ್ ಅನ್ನು 2018 ರಲ್ಲಿ ನಡೆಸಿತು. ಅಂದಿನಿಂದ ಇಲ್ಲಿಯವರೆಗೆ ಇಂತಹ ಅಧಿಸೂಚನೆಯನ್ನು ಹೊರಡಿಸಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ; DNA

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಅಧಿಕಾರಿಗಳ ಮೇಲೆ ರೇಗುವುದು ನಿಲ್ಲಿಸಿ ಎಂದು ಕೇಜ್ರಿವಾಲ್‌ರವರ ಹಳೆಯ ವಿಡಿಯೋ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights