ಫ್ಯಾಕ್ಟ್‌ಚೆಕ್: ಗುಜರಾತ್‌ನ AAP ಚುನಾವಣಾ ರ್‍ಯಾಲಿಯಲ್ಲಿ ಮೋದಿಗೆ ಬೆಂಬಲ ಸೂಚಿಸಿದ್ದು ನಿಜವೇ?
ಇತ್ತೀಚೆಗೆ ಗುಜರಾತ್‌ನಲ್ಲಿ ನಡೆದ ರ್ಯಾಲಿಯಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವಿರುವ ಮಾಸ್ಕ್‌ಅನ್ನು ಧರಿಸಿರುವ ವ್ಯಕ್ತಿಯೊಬ್ಬರು ಕೇಜ್ರಿವಾಲ್ ರ್ಯಾಲಿಯಲ್ಲಿ ಮೋದಿಯವರಿಗೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.
ಡಿಸೆಂಬರ್‌ನಲ್ಲಿ ನಡೆಯಲಿರುವ 2022 ರ ಗುಜರಾತ್ ಅಸೆಂಬ್ಲಿ ಚುನಾವಣೆಗೆ ಮುನ್ನ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರು ಇದೇ ಪ್ರತಿಪಾದನೆಯೊಂದಿಗೆ “ಈ ಮಧ್ಯೆ ಕೇಜ್ರಿವಾಲ್ ಅವರ ರೋಡ್‌ಶೋನಲ್ಲಿ ಗುಜರಾತ್‌ನ ಜನರು ಹಾಗೆ ಇರಲಿ” ಎಂದು ವ್ಯಂಗ್ಯಾತ್ಮಕ ಶೀರ್ಷಿಕೆಯೊಂದಿಗೆ ವೀಡಿಯೊ ಪೋಸ್ಟ್‌ಅನ್ನು ಹಂಚಿಕೊಂದಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್:
ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ಈ ವೀಡಿಯೊ ಜನವರಿ 2020 ರದ್ದು ಮತ್ತು ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ಚಿತ್ರೀಕರಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಮುಖವಾಡ ಧರಿಸಿದ ವ್ಯಕ್ತಿ ಆಕಾಶ್ ಸಾಗರ್ ಎಂಬ ಸಾಮಾಜಿಕ ಮಾಧ್ಯಮದ ಸಕ್ರಿಯ ಬಳಕೆದಾರ ಎಂದು ತಿಳಿದು ಬಂದಿದೆ.
View this post on Instagram
ವೀಡಿಯೊದಲ್ಲಿರುವ ಪಾಪ್-ಅಪ್, “ಆಕಾಶ್ ಸಾಗರ್ ಅವರ ಹೆಚ್ಚಿನ ಮೂಲ ವೀಡಿಯೊಗಳನ್ನು ವೀಕ್ಷಿಸಿ” ಎಂದು ಹೇಳಲಾಗಿದ್ದು. ಸಾಗರ್ ಅವರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳನ್ನು ಪರಿಶೀಲಿಸಿದಾಗ, 26 ಜನವರಿ 2020 ರಂದು Instagram ನಲ್ಲಿ ಪೋಸ್ಟ್ ಮಾಡಲಾದ ಮೂಲ ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ.
ಘಟನೆಗೆ ಸಂಬಂಧಿಸಿದಂತೆ ಸುದ್ದಿ ವರದಿಗಳು ಲಭ್ಯವಾಗಿದ್ದು, ಅದರ ಪ್ರಕಾರ ವೀಡಿಯೊ 2020 ರದ್ದು ಮತ್ತು ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಚಿತ್ರೀಕರಿಸಲಾಗಿದೆ ಎಂದು ತಿಳಿಸಿವೆ. ‘ದಿ ಕ್ವಿಂಟ್’ ಫ್ಯಾಕ್ಟ್‌ಚೆಕ್ ತಂಡ ಸಾಗರ್ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದು ವೈರಲ್ ಪೋಸ್ಟ್‌ನಲ್ಲಿರುವ ವಿಡಿಯೋ 2020ರಲ್ಲಿ ಚಿತ್ರೀಕರಿಸಿದ್ದು ಎಂದು ತಿಳಿಸಿದ್ದಾರೆ.
गुजरात में उठी परिवर्तन की लहर के बीच आज गांधीधाम में रोड-शो। https://t.co/gIUkv4td74
— Arvind Kejriwal (@ArvindKejriwal) November 5, 2022
ಒಟ್ಟಾರೆಯಾಗಿ ಹೇಳುವುದಾದರೆ, ದೆಹಲಿಯ 2020 ರ ಚುನಾವಣೆಯ ಹಳೆಯ ವೀಡಿಯೊದಲ್ಲಿ ಪ್ರಧಾನಿ ಮೋದಿ ಮುಖವಾಡವನ್ನು ಧರಿಸಿ AAP ರ್ಯಾಲಿಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯಗಳು ಹಳೆಯದಾಗಿವೆ. ಇದನ್ನು 2022ರ ಗುಜರಾತ್ ಚುನಾವಣೆಗೆ ಸಂಬಂಧಿಸಿವೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ‘ಜೊತೆಯಲ್ಲಿ ನಡೆ’ ಎಂಬ ಹೊಸ ಸೇವೆಯನ್ನು Uber ಪ್ರಾರಂಭಿಸಿದೆಯೇ?