ಫ್ಯಾಕ್ಟ್‌ಚೆಕ್: ಪಾಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಮ್ರಾನ್ ಖಾನ್ ಬೆಂಬಲಿಗ ಮೃತಪಟ್ಟಿದ್ದು ನಿಜವೇ?

ಕಳೆದ ಗುರುವಾರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ವಜೀರಾಬಾದ್‌ನ ಅಲ್ಲಾವಾಲಾ ಚೌಕ್‌ನಲ್ಲಿ ನಡೆದ ರ್ಯಾಲಿಯ ನೇತೃತ್ವ ವಹಿಸಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡನ ದಾಳಿ ನಡೆಸಲಾಗಿತ್ತು. ವರದಿಯ ಪ್ರಕಾರ, ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥರಿಗೆ ನಾಲ್ಕು ಗುಂಡು ತಗುಲಿ ಗಂಭೀರ ಗಾಯಗಳಾಗಿವೆ, ಆದರೆ ಪ್ರಾಣಾಪಾಯದಿಂದ ಪಾರಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಈ ದಾಳಿಯಲ್ಲಿ ಅವರ ಬೆಂಬಲಿಗರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪ್ರತಿಪಾದಿಸಿ ಪೋಟೋವೊಂದನ್ನು ಹಂಚಿಕೊಳ್ಳಲಾಗಿದೆ.

ಇದೇ ಪ್ರತಿಪಾದನೆಯೊಂದಿಗೆ ಸಾಮಾಜಿಕ ಮಾಧ್ಯಮದ ಹಲವು ಬಳಕೆದಾರರು, ಬಾಲಕನೊಬ್ಬ ಮೃತ ದೇಹದ ಪಕ್ಕದಲ್ಲಿ ಕುಳಿತಿರುವ ಮನ ಕಲಕುವಂತ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಹಂಚಿಕೊಳ್ಳುವಾಗ, ಈ ಚಿತ್ರದಲ್ಲಿರುವ ವ್ಯಕ್ತಿಯು ದಾಳಿಯ ಸಮಯದಲ್ಲಿ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ ಎಂದು ಪಾಕಿಸ್ತಾನದಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿ ಪೋಸ್ಟ್‌ಅನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಿಲು ಗೂಗಲ್ ಸರ್ಚ್ ಮಾಡಿದಾಗ, ಇಂಡಿಯಾ ಟುಡೇ ಫ್ಯಾಕ್ಟ್‌ಚೆಕ್ ವರದಿ ಲಭ್ಯವಾಗಿದ್ದು ಇದು ಪಾಕಿಸ್ತಾನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಘಟನೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ ಎಂದು ವರದಿ ಮಾಡಿದೆ.

ಮತ್ತಷ್ಟು ಸರ್ಚ್ ನಡೆಸಿದಾಗ, ಜುಲೈ 30, 2021 ರಂದು ಅದೇ ಫೋಟೋವನ್ನು ಬಳಸಲಾಗಿರುವ ಮಾಹಿತಿ ಲಭ್ಯವಾಗಿದೆ. ನೋವಿನ ಚಿತ್ರಗಳು ಎಂಬ ಶೀರ್ಷಿಕೆಯೊಂದಿಗೆ “ಆಫ್ಘಾನ್ ಮಕ್ಕಳು ತಮ್ಮ ಜೀವಿತಾವಧಿಯಲ್ಲಿ ಇದನ್ನು ಅನುಭವಿಸಿದ್ದಾರೆ” ಎಂದು ಹಂಚಿಕೊಳ್ಳಲಾಗಿದೆ. ಕಳೆದ 4 ದಶಕಗಳಲ್ಲಿ ನಾವು ಅನುಭವಿಸುತ್ತಿರುವ ನಮ್ಮ ನೋವು ನಿಮಗೆ ಕಾಣಿಸುತ್ತಿಲ್ಲ, ನಿಮ್ಮ ಮಾನವೀಯತೆಯ ಬಗ್ಗೆ ನನಗೆ ಅನುಮಾನವಿದೆ! ನನ್ನ ದೇಶದಲ್ಲಿ ಭಯೋತ್ಪಾದನೆಯನ್ನು ಬೆಂಬಲಿಸುವುದನ್ನು ನಿಲ್ಲಿಸಿ ಎಂದು ಹಂಚಿಕೊಂಡಿದ್ದಾರೆ.

ಜುಲೈ 29, 2021 ರಂದು, ಮತ್ತೊಬ್ಬರು ಇದೇ ಚಿತ್ರವನ್ನು ಹಂಚಿಕೊಂಡಿದ್ದು, ” ಹೆಲ್ಮಂಡ್ ಪ್ರಾಂತ್ಯದಲ್ಲಿ ಕೊಲ್ಲಲ್ಪಟ್ಟ ತನ್ನ ತಂದೆಯ ಮೃತದೇಹದ ಮುಂದೆ ಆಫ್ಘನ್ ಮಗುವಿನ ಕಣ್ಣೀರು. ಮಾನವ ಹಕ್ಕುಗಳು ಮತ್ತು ಮಕ್ಕಳ ಹಕ್ಕುಗಳ ಸಂಘಟನೆಗಳು ಎಲ್ಲಿವೆ ಅಥವಾ ಅವರು ಮೌನವಾಗಿರುತ್ತಾರೆ ಏಕೆಂದರೆ ಅಫ್ಘಾನ್ ನಲ್ಲಿ ವಾಸಿಸುವವರು ಅವರಿಗೆ ಮುಖ್ಯವಲ್ಲ” ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

Fehim TaÅŸtekin ಎಂಬ ಪತ್ರಕರ್ತ ಈ ಚಿತ್ರವನ್ನು ಜುಲೈ 30, 2021 ರಂದು ಹಂಚಿಕೊಂಡಿದ್ದಾರೆ, ” ಆ ಪೋಸ್ಟ್‌ನಲ್ಲಿ ಅವರು ಬಿಬಿಸಿಯ ಪತ್ರಕರ್ತ ಬಿಲಾಲ್ ಸರ್ವಾರಿ ಅವರನ್ನು ಟ್ಯಾಗ್ ಮಾಡಿದ್ದಾರೆ. ಹಾಗಾಗಿ ಇದು ಪಾಕಿಸ್ತಾನದಲ್ಲಿ ನಡೆದ ಘಟನೆಗೆ ಸಂಬಂಧಿಸಿದಲ್ಲ ಮತ್ತು ರ್ಯಾಲಿ ನಡೆಯುವ ಸಂದರ್ಭದಲ್ಲಿ ನಡೆದ ಗುಂಡಿದ ದಾಳಿಯಲ್ಲಿ ಇಮ್ರಾನ್ ಖಾನ್ ಸೇರಿದಂತೆ ಕೆಲವರಿಗೆ ಗಾಯಗಳಾಗಿವೇ ಹೊರತು ಯಾರೂ ಮೃತರಾದ ಬಗ್ಗೆ ವರದಿಗಳಿಲ್ಲ.

https://twitter.com/bsarwary/status/1420720894280880137

ಒಟ್ಟಾರೆಯಾಗಿ ಹೇಳುವುದಾದರೆ, ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ನೇತೃತ್ವದಲ್ಲಿ ನಡೆಯುತ್ತಿದ್ದ ರ್ಯಾಲಿ ಮೇಲೆ ಇತ್ತೀಚೆಗೆ ನಡೆದ ದಾಳಿಯದ್ದು ಎಂಬ ಹೇಳಿಕೆಯೊಂದಿಗೆ ಹಳೆಯ ಫೋಟೋವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಹಸುವಿನ ಚರ್ಮವನ್ನು ಕತ್ತರಿಸಿ ಹಾಲು ಕರೆಯುವ ವಿಡಿಯೋ ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights